ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ: ಪರಮೇಶ್ವರ

ಬೆಂಗಳೂರು, ನವೆಂಬರ್ 22: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಟ್ಟ ತಕ್ಷಣ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಯಾಗಿದೆ. ಚುನಾವಣಾ ಪ್ರವಾಸದಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ತೊಡಗಿಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಯಾವ ರೀತಿ ಸೂಚನೆ ನೀಡುತ್ತಾರೋ ಹಾಗೆಯೇ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಇಷ್ಟು ದಿನ ಸಚಿವ ಸಂಪುಟ ವಿಸ್ತರಣೆ ಜವಾಬ್ದಾರಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರ ಹೆಗಲಿಗೆ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳುತ್ತಿದ್ದರು.

DCM says waiting for RaGa green signal for cabinet expansion

ಇದೀಗ ಆ ವಿಷಯ ಕೈಬಿಟ್ಟು ರಾಹುಲ್ ಗಾಂಧಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಲೋಕಸಭಾ ಚುನಾವಣೆವರೆಗೂ ಸಚಿವ ಸಂಪುಟ ವಿಸ್ತರಣೆಯಾಗುವುದು ಅನುಮಾನ ಎಂದು ಮೇಲ್ನೋಟಕ್ಕೆ ಗೋಚರವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+