ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದಾಶಿವನಗರದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 17: ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಸದಾಶಿವನಗರದಲ್ಲಿ ಗುರುವಾರ ಅನಾವರಣಗೊಳಿಸಿದರು.

ಹೆಬ್ಬಾಳ ಜಂಕ್ಷನ್‌ನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಹೆಬ್ಬಾಳ ಜಂಕ್ಷನ್‌ನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ

ಬಳಿಕ ಮಾತನಾಡಿದ ಅವರು, ಕೆಂಪೇಗೌಡ ಅವರು ಈ ನಾಡು ನಿರ್ಮಾತೃ. ದೇಶದಲ್ಲೆ ಅತಿ ದೊಡ್ಡ ಕೆಂಪೇಗೌಡರ ಪ್ರತಿಮೆಯನ್ನು ಬಿಬಿಎಂಪಿ ವತಿಯಿಂದ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಚಾರ. ಅವರು ನಿರ್ಮಾಣ ಮಾಡಿಕೊಟ್ಟ ನಗರವನ್ನು ಇಂದು ಅದರ ಪರಿಮಿತಿ‌ ಮೀರಿ ಬೆಳೆಸಿದ್ದೇವೆ. ಹಿಂದೆ ಸದಾಶಿವನಗರದಲ್ಲಿ ಗೋಪುರ ಬಿಟ್ಟರೆ ಬೇರೆನೂ‌ ಇರಲಿಲ್ಲ.‌ ನಿರ್ಜನ ಪ್ರದೇಶವಾಗಿತ್ತು. ಈಗ ಇಲ್ಲಿ‌ ಸಾಕಷ್ಟು‌ ಅಭಿವೃದ್ಧಿಯಾಗಿದೆ ಎಂದರು.

ವಿಧಾನ ಸೌಧ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ವಿಗ್ರಹ ಸ್ಥಾಪನೆ ವಿಧಾನ ಸೌಧ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ವಿಗ್ರಹ ಸ್ಥಾಪನೆ

ಸದಾಶಿವನಗರದಲ್ಲಿರುವ ರಮಣಶ್ರೀ ಉದ್ಯಾನದಲ್ಲಿ ಕೆಂಪೇಗೌಡ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಹೆಬ್ಬಾಳ ಜಂಕ್ಷನ್‌ನಲ್ಲಿ ಕೂಡ ಕೆಂಪೇಗೌಡ ಪ್ರತಿಮೆಯೊಂದನ್ನು ನಿರ್ಮಿಸಲಾಗಿದೆ. ಅಶ್ವಾರೂಢ ಭಂಗಿಯಲ್ಲಿರುವ ನಾಡಪ್ರಭುವಿನ ಪ್ರತಿಮೆ ನಿಲ್ಲಿಸಲು ಕೋಟೆ ಮಾದರಿಯ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ನೆಲದಿಂದ 30ಅಡಿ ಎತ್ತರ ಹಾಗೂ 16 ಅಡಿ ಅಗಲದ ಕಲ್ಲಿನ ಕೋಟೆಯ ಚಿತ್ರಣ ಮೂಡಿಸಲಾಗಿದೆ.

DCM unveils Kempegowda statue at Sadashiva Nagar

ಈ ವೇದಿಕೆ ಮೇಲೆ 2750ಕೆಜಿ ತೂಕದ ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ.ಕಾರ್ಯಕ್ರಮದಲ್ಲಿ ಸಚಿವ ಡಿ.ವಿ. ಸದಾನಂದಗೌಡ, ಶಾಸಕ ಅಶ್ವತ್ಥನಾರಾಯಣ, ಮೇಯರ್‌ ಸಂಪತ್‌ರಾಜ್ ಪಾಲ್ಗೊಂಡಿದ್ದರು.

English summary
Deputy Chief Minister Dr.G. Parameshwara has unveiled Kempegowda statue at Sadashiva Nagar in Bangalore on Thursday. Union minister D.V.Sadanand Gowda and Mayor Sampath Raj were present.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X