ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಲಿಂಡರ್ ಸ್ಫೋಟದ ಬಳಿಕ ತಲೆ ಮರೆಸಿಕೊಂಡಿದ್ದ 'ರಣಂ' ಸ್ಟಂಟ್ ಮಾಸ್ಟರ್ ಅರೆಸ್ಟ್

|
Google Oneindia Kannada News

ಬೆಂಗಳೂರು, ಏ.2: ರಣಂ ಸಿನಿಮಾ ಸಾಹಸ ದೃಶ್ಯ ಚಿತ್ರೀಕರಣದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ಸ್ಟಂಟ್ ಮಾಸ್ಟರ್ ನ್ನು ಬಂಧಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸುಭಾಷ್​ನನ್ನು (55) ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ದುರಂತ ನಂತರ ಸುಭಾಷ್ ತಲೆ ಮರೆಸಿಕೊಂಡಿದ್ದ.

ಬೆಂಗಳೂರು: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಗು ಸಾವು ಬೆಂಗಳೂರು: ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮಗು ಸಾವು

ಸುಭಾಷ್ ಕೆಲ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡುತ್ತಿದ್ದ. ರಣಂ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ಸಾಹಸ ನಿರ್ದೇಶಕ ವಿಜಯನ್​ಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಕಾರು ಸ್ಪೋಟಿಸುವ ಬಗ್ಗೆ ಇತರ ಸಿಬ್ಬಂದಿ ಜತೆ ಈತನೇ ಪೂರ್ವತಯಾರಿ ನಡೆಸಿದ್ದ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ವಿಜಯವಾಣಿಗೆ ತಿಳಿಸಿದ್ದಾರೆ.

Death on film set stunt master lands behind bars

ಚಿತ್ರತಂಡದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸರಿಗೆ ಸುಭಾಷ್ ಕಗ್ಗಲೀಪುರದ ಮನೆಯಲ್ಲೇ ಇರುವುದು ಗೊತ್ತಾಗಿತ್ತು. ಭಾನುವಾರ ತಡರಾತ್ರಿ ಆತನ ಮನೆಗೆ ದಾಳಿ ಮಾಡಿ ಬಂಧಿಸಲಾಗಿದೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ.

ಸಾಗರದಲ್ಲಿ ಸಿಲಿಂಡರ್ ಸಾಗಣೆ ಲಾರಿ ಸ್ಫೋಟ, ಚಾಲಕ ಸಜೀವ ದಹನ ಸಾಗರದಲ್ಲಿ ಸಿಲಿಂಡರ್ ಸಾಗಣೆ ಲಾರಿ ಸ್ಫೋಟ, ಚಾಲಕ ಸಜೀವ ದಹನ

ಸಿಲಿಂಡರ್ ಸ್ಪೋಟಗೊಳ್ಳುತ್ತದೆ ಎಂದು ನಾವು ಊಹಿಸಿರಲಿಲ್ಲ. ದುರದೃಷ್ಟವಶಾತ್ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಮೃತಪಟ್ಟಿರುವ ವಿಚಾರ ತಿಳಿದು ಆತಂಕಗೊಂಡು ಮೊಬೈಲ್ ಸ್ವಿಚ್ ಆಫ್ ಮಾಡಿ ಸ್ಥಳದಿಂದ ಕಾರಿನಲ್ಲಿ ಪರಾರಿಯಾಗಿದ್ದೆವು ಎಂದು ತಿಳಿಸಿದ್ದಾರೆ.

ಈ ನಡುವೆ ಮೃತ ಸುಮೈರಾ ಬಾನು ಪತಿ ತಬ್ರೇಜ್ ಖಾನ್ ಮತ್ತು ಸಂಬಂಧಿಕರು ನ್ಯಾಯ ಒದಗಿಸುವಂತೆ ಕೋರಿ ಸೋಮವಾರ (ಏ.1) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಸಲ್ಲಿಸಿದೆ.

English summary
Bengaluru police on Monday arrested a stunt master on charge of negligence for causing death of a 29 year old woman and her five year olad daughter during the shooting of a stunt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X