ದೀಪಾವಳಿ ಸಂಭ್ರಮ: ಬೆಂಗಳೂರಲ್ಲಿ ಪಟಾಕಿ ಹೊಡೆಯುವ ಆಸೆಗೆ ಶಾಕ್, ಈ ತಪ್ಪು ಮಾಡಿದರೆ ಕ್ರಿಮಿನಲ್ ಕೇಸ್ !
Deepavali celebration: ಇನ್ನೇನು ದೀಪಾವಳಿ ಹಬ್ಬ ಬಂತು ಎಲ್ಲಾ ಮಕ್ಕಳು ಸಂಭ್ರಮದಿಂದ ಪಟಾಕಿ ಹೊಡೆಯುವುದಕ್ಕೆ ಕಾಯ್ತಾ ಇರ್ತಾರೆ. ದೊಡ್ಡವರಿಗೂ ಪಟಾಕಿ ಹೊಡೆಯುವುದು ಎಂದರೆ ಸಂಭ್ರಮ. ಆದರೆ, ಈ ಸಂಭ್ರಮಗಳಿಗೆ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬ್ರೇಕ್ ಹಾಕಿದೆ. ಬೆಂಗಳೂರಿನಲ್ಲಿ ಪಟಾಕಿಗಳನ್ನು ಹೊಡೆಯುವುದಕ್ಕೆ ಇರುವ ಮಿತಿಗಳ ಬಗ್ಗೆ ಎಚ್ಚರಿಕೆ ನೀಡಿದೆ. ಇದು ಪಟಾಕಿ ಪ್ರೇಮಿಗಳಲ್ಲಿ ನಿರಾಸೆ ಮೂಡಿಸಿದೆ.
ದೀಪಾವಳಿ ಹಬ್ಬದ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಿಸಿರುವ ಕೆಲವು ನಿರ್ಬಂಧಗಳು ಈಗಾಗಲೇ ವಿರೋಧ ವ್ಯಕ್ತವಾಗಿದೆ. ಬಿಬಿಎಂಪಿಯು ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಪಟಾಕಿಗಳು ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಜಾರಿಗೊಳಿಸಲು ಬಿಬಿಎಂಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿಯು ಕಟ್ಟುನಿಟ್ಟಿನ ಆದೇಶವೊಂದನ್ನು ಹೊರಡಿಸಿದೆ. ಈ ಆದೇಶವು ದೀಪವಾಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಹೊಡೆಯುವ ಆಸೆಯಲ್ಲಿ ಇರುವವರಿಗೆ ನಿರಾಸೆ ಮೂಡಿಸಲಿದೆ.

ಪಾಟಕಿ ಹೊಡೆಯುವುದಕ್ಕೆ ಬಿಬಿಎಂಪಿಯು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಮುಂದಾಗಿದ್ದು, ಇದರಿಂದ ಕೇವಲ 2 ಗಂಟೆ ಮಾತ್ರ ಪಟಾಕಿ ಹೊಡೆಯುವುದಕ್ಕೆ ಅವಕಾಶ ಸಿಗಲಿದೆ. ಅಲ್ಲದೇ ಬೆಳಿಗ್ಗೆ ಸಮಯದಲ್ಲಿ ಅಂದರೆ ಬೆಳಿಗ್ಗೆಯಿಂದ ರಾತ್ರಿ 8 ಗಂಟೆಯ ವರೆಗೂ ಯಾವುದೇ ಕಾರಣಕ್ಕೂ ಪಟಾಕಿಯನ್ನು ಹೊಡೆಯುವಂತೆ ಇಲ್ಲ.
ಈ ಬಗ್ಗೆ ಆದೇಶವೊಂದನ್ನು ಹೊರಡಿಸಿರುವವ ಬಿಬಿಎಂಪಿಯು ಸುಪ್ರೀಂ ಕೋರ್ಟ್ ಪಟಾಕಿ ಬಳಕೆಐ ಬಗ್ಗೆ ಕೆಲವು ನಿರ್ದಿಷ್ಟ ನಿರ್ದೇಶನಗಳನ್ನು ನೀಡಿದೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಬೆಂಗಳೂರಲ್ಲಿ (ಬಿಬಿಎಂಪಿ ವ್ಯಾಪ್ತಿಯಲ್ಲಿ) ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶದಲ್ಲಿ ಹೇಳಿದ್ದಾರೆ.

ಮುಂದುವರಿದು, ಸುಪ್ರೀಂ ಕೋರ್ಟ್, ಪಟಾಕಿಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಹಾಗೂ ಸುಪ್ರೀಂ ಕೋರ್ಟ್ ಸೂಚನೆಯನ್ನು ಉಲ್ಲೇಖಿಸಿದೆ. ಅದರಂತೆ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಅಕ್ಟೋಬರ್ 31ರಿಂದ ನವೆಂಬರ್ 2ರ ವರೆಗೆ ( 31/10/2024 ರಿಂದ 02/11/2024ರವೆಗೆ) ಮಾತ್ರ ಪಟಾಕಿ ಹೊಡೆಯುವುದಕ್ಕೆ ಅವಕಾಶ ಇದೆ.
ಅಲ್ಲದೇ ಈ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಪಟಾಕಿಗಳನ್ನು ಹೊಡೆಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಹೇಳಿದ್ದು, ಬೆಂಗಳೂರು ಜನರಿಗೆ ಶಾಕ್ ನೀಡಿದೆ.
ಇನ್ನು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ. 'ಹಸಿರು ಪಟಾಕಿ' ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ ಎಂದು ಬಿಬಿಎಂಪಿ ಹೇಳಿದೆ.
ಕ್ರಿಮಿನಲ್ ಕೇಸ್ ಎಚ್ಚರಿಕೆ: ಬಿಬಿಎಂಪಿಯು ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿಯೂ ಎಚ್ಚರಿಕೆಯನ್ನು ನೀಡಿದೆ. 2024ನೇ ಸಾಲಿನ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು.
ಬೆಂಗಳೂರಿಗರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡಿದರೂ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಈ ರೀತಿ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಅಥವಾ ಇಡೀ (ಪಟಾಕಿ ಸಂಗ್ರಹದ) ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಅಲ್ಲದೇ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಎಲ್ಲಾ ವಲಯಗಳ ಆಯುಕ್ತರಿಗೂ ಸೂಚನೆ ಕೊಟ್ಟಿದ್ದಾರೆ.












Click it and Unblock the Notifications