ಬೆಂಗಳೂರಿನಲ್ಲಿ ವರುಣನ ಆರ್ಭಟ: ಡಿ ಕೆ ಶಿವಕುಮಾರ್ ರಿಯಾಕ್ಷನ್
ಬೆಂಗಳೂರು, ಮೇ 19: ಬೆಂಗಳೂರಿನ ಹಲವೆಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮಳೆರಾಯ ರಾತ್ರಿ ಇಡೀ ಆರ್ಭಟಿಸಿದ್ದಾನೆ. ನಗರದ ಅಷ್ಟ ದಿಕ್ಕುಗಳಲ್ಲೂ ಮಳೆಯಾಗಿದ್ದು, ವಾರದ ಮೊದಲ ದಿನವೇ ಸಿಟಿ ಮಂದಿಗೆ ಕಿರಿಕಿರಿ ಉಂಟಾಗಿದೆ. ಇನ್ನೂ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನಲ್ಲಿನ ಮಳೆ ಆರ್ಭಟದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಎಲ್ಲೆಲ್ಲಿ ಏನಾಗಿದೆ ಎಂದು ನಮ್ಮ ಅಧಿಕಾರಿಗಳ ತಂಡ ಮಾಹಿತಿ ಕಲೆಹಾಕುತ್ತಿದೆ. ನಗರದಲ್ಲಿ ಮಳೆಯ ಪರಿಸ್ಥಿತಿಯನ್ನು ನಿಭಾಯಿಸುತ್ತೇವೆ ಎಂದು ಹೇಳಿದರು.
ಈ ಕುರಿತು ಟ್ವೀಟ್ ಮಾಡಿರುವ ಡಿ ಕೆ ಶಿವಕುಮಾರ್, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನಾನು ಬೆಂಗಳೂರಿಗೆ ಬದ್ಧನಾಗಿರುತ್ತೇನೆ - ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳಲು 24/7 ಶ್ರಮಿಸುತ್ತಿದ್ದೇನೆ. ನಾನು ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕವಾಗಿ ಮಾಹಿತಿ ಪಡೆಯುತ್ತೇನೆ.

ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳು ಹೊಸದಲ್ಲ. ಹಿಂದಿನ ಸರ್ಕಾರಗಳು ಅವುಗಳನ್ನು ವರ್ಷಗಳಿಂದ ನಿರ್ಲಕ್ಷಿಸಲಾಗಿದೆ. ಈಗ ಒಂದೇ ವ್ಯತ್ಯಾಸವೆಂದರೆ - ನಾವು ಅವುಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ. ತಾತ್ಕಾಲಿಕ ಪರಿಹಾರಗಳೊಂದಿಗೆ ಅಲ್ಲ, ಆದರೆ ದೀರ್ಘಕಾಲೀನ, ಸುಸ್ಥಿರ ಪರಿಹಾರಗಳೊಂದಿಗೆ ಎಂಬುದು ಸ್ಪಷ್ಟ ಪಡಿಸುತ್ತೇನೆ ಎಂದು ತಿಳಿಸಿದ್ದಾರೆ.ನನ್ನ ಸಹ ಬೆಂಗಳೂರಿಗರಿಗ. ನಿಮ್ಮ ಕಳವಳಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ, ನಿಮ್ಮ ಹತಾಶೆಯನ್ನು ಹಂಚಿಕೊಳ್ಳುತ್ತೇನೆ ಮತ್ತು ಅವುಗಳನ್ನು ಪರಿಹರಿಸುವ ನನ್ನ ಬದ್ಧತೆಯ ಬಗ್ಗೆ ನಾನು ನಿಮಗೆ ಭರವಸೆ ನೀಡುತ್ತೇನೆ ಹಾಗೂ ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿಮ್ಮ ಖಾತೆ ವಿಚಾರ ಪ್ರಸ್ತಾಪ ಮಾಡಿದ್ದೀರಿ. ನಮ್ಮ ಕಂದಾಯ ಸಚಿವರು ಇದನ್ನು ಒಂದು ವ್ಯವಸ್ಥಿತ ರೂಪಕ್ಕೆ ತರಲು ಮುಂದಾಗಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ಎಲ್ಲಾ ಆಸ್ತಿಗಳನ್ನು ಪರಿಶೀಲಿಸಿ, ಎಲ್ಲಾ ದಾಖಲೆಗಳನ್ನು ಸರಿಮಾಡಿ ಜನರ ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ಶೇ. 60 ರಷ್ಟು ಆಸ್ತಿಗಳ ಪರಿಶೀಲನೆ ಆಗಿದೆ. ನಾನು ಹಾಗೂ ಕಂದಾಯ ಸಚಿವರು ನಿಮ್ಮ ಜತೆ ಸಭೆ ನಡೆಸಿ ಚರ್ಚಿಸುತ್ತೇವೆ. ನಮ್ಮ ಸರ್ಕಾರ ಇರುವುದೇ ನಿಮಗೆ ಸಹಾಯ ಮಾಡಲು ಎಂದರು.
ನಮಗೆ ನೀವು ಸಹಕಾರ ನೀಡಿದ್ದೀರೋ ಇಲ್ಲವೋ ನಿಮ್ಮ ಆತ್ಮಸಾಕ್ಷಿಗೆ ಬಿಟ್ಟ ವಿಚಾರ. ಕೋವಿಡ್ ಸಮಯದಲ್ಲಿ ನಿರ್ಮಲ ಸೀತಾರಾಮನ್ ಅವರು ಬಿಡುಗಡೆ ಮಾಡಿದ 20 ಲಕ್ಷ ಕೋಟಿ ಪ್ಯಾಕೇಜ್ ನಲ್ಲಿ ನಿಮಗೆ ಎಷ್ಟು ಬಂತೋ ಗೊತ್ತಿಲ್ಲ. ಆದರೆ ನಾನು ಹಾಗೂ ಸಿದ್ದರಾಮಯ್ಯ ಅವರು ನಿಮಗೆ ನೆರವಾಗಲು ಹೋರಾಟ ಮಾಡಿದ್ದೇವೆ ಎಂದರು. ನಮ್ಮ ಸರ್ಕಾರ ನೂತನ ಕೈಗಾರಿಕಾ ನೀತಿ ಜಾರಿಗೆ ತಂದಿದೆ. ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗಿದ್ದು, ನಿಮ್ಮ ಕೈಗಾರಿಕೆಗಳು ಬೆಂಗಳೂರು ನಗರದ ಒಳಗೆ ಸೇರಿಕೊಂಡಿವೆ. ನಿಮ್ಮ ಎಲ್ಲಾ ಬೇಡಿಕೆಗಳನ್ನು ಸ್ಪಂದಿಸಲು ನಾವು ಬದ್ಧವಾಗಿದ್ದೇವೆ. ಎರಡು ಹಾಗೂ ಮೂರನೇ ಹಂತದ ನಗರಗಳ ಪೈಕಿ ನಿಮಗೆ ಎಲ್ಲಿ ಜಾಗ ಸೂಕ್ತವಾಗಿದೆ ಎಂದು ನೀವೇ ಪಟ್ಟಿ ಮಾಡಿ. ಕಾರ್ಮಿಕರು, ನೀರು ಹಾಗೂ ವಿದ್ಯುತ್ ನಿಮ್ಮ ಪ್ರಮುಖ ಆಧಾರ ಅಂಶಗಳು. ನೀವು ಬಲವಾದಷ್ಟು ನಾವು ಬಲಶಾಲಿಯಾಗುತ್ತೇವೆ. ನೀವು ದುರ್ಬಲರಾದರೆ ನಾವು ದುರ್ಬಲರಾಗುತ್ತೇವೆ ಎಂದು ಹೇಳಿದರು.
ವಿದ್ಯುತ್ ವಿಚಾರದಲ್ಲಿ ನಮ್ಮ ಸರ್ಕಾರ 2 ಬಾರಿ ದರ ಇಳಿಕೆ ಮಾಡಿದೆ. ಇದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಜೀವನದಲ್ಲಿ ಯಶಸ್ಸು ಸಾಧಿಸಲು ಧರ್ಮರಾಯನ ಧರ್ಮ, ಭೀಮನ ಬಲ, ಕರ್ಣನ ಧಾನತ್ವ, ಅರ್ಜುನನ ಗುರಿ, ವಿಧುರನ ನೀತಿ, ಕೃಷ್ಣನ ತಂತ್ರ ಇರಬೇಕು. ನಮಗೆ ನೀವು, ನಿಮಗೆ ನಾವು ಸಹಾಯ ಸಹಕಾರ ನೀಡುತ್ತಾ ಸಾಗಬೇಕು. ನಾವು ಗ್ಯಾರಂಟಿ ಯೋಜನೆ ಮೂಲಕ ಬಡವರು ಕಾರ್ಮಿಕರಿಗೆ 52 ಸಾವಿರ ಕೋಟಿ ಮೀಸಲಿಟ್ಟಿರುವುದೇ ಆರ್ಥಿಕತೆ ಬೆಳೆಯಲು. ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲು ನೀವು ನೆರವಾಗಬೇಕು ಎಂದು ಕರೆ ಕೊಟ್ಟರು.
ನೀವು ಕನಿಷ್ಠ ವೇತನದ ವಿಚಾರವಾಗಿ ಪ್ರಸ್ತಾಪ ಮಾಡಿದ್ದೀರಿ. ಈ ಬಗ್ಗೆ ನನಗೆ ಅರಿವಿದೆ. ಈ ಬಗ್ಗೆ ನಾನು ಹಾಗೂ ದರ್ಶನಾಪುರ ಅವರು ಮುಖ್ಯಮಂತ್ರಿಗಳ ಗಮನ ಸೆಳೆದಿದ್ದೇವೆ. ನಿಮ್ಮ ಪರವಾಗಿ ಮಾತನಾಡಿದ್ದೇವೆ. ನಾವು ನಿಮ್ಮ ಪರವಾಗಿ ನಿಲ್ಲದಿದ್ದರೆ ಹೊಸೂರು ಹಾಗೂ ಆಂಧ್ರ ಗಡಿ ಭಾಗ ಕಾಣುವಂತಾಗುತ್ತದೆ. ಹೀಗಾಗಿ ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡೋಣ ಎಂದು ಹೇಳಿದ್ದಾರೆ. ನಾವು ಕಾರ್ಮಿಕ ಸಚಿವರ ಜತೆ ಚರ್ಚೆ ಮಾಡುತ್ತೇವೆ. ಈ ವಿಚಾರದಲ್ಲಿ ನಿಮ್ಮ ಪರವಾಗಿ ಸಕಾರಾತ್ಮಕವಾಗಿದ್ದೇವೆ ಎಂದು ಭರವಸೆ ಕೊಟ್ಟರು.












Click it and Unblock the Notifications