ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆ ಕೊಂದ ಬೇಟೆಗಾರರು

|
Google Oneindia Kannada News

ಬೆಂಗಳೂರು, ಮಾರ್ಚ್ 31: ಇಲ್ಲಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ದುಷ್ಕರ್ಮಿಗಳು ಜಿಂಕೆಯೊಂದನ್ನು ಬೇಟೆಯಾಡಿದ್ದಾರೆ. ಅನೇಕಲ್ ವ್ಯಾಪ್ತಿಯಲ್ಲಿ 4 ವರ್ಷದ ಹೆಣ್ಣು ಜಿಂಕೆಯೊಂದನ್ನು ಗುಂಡಿಕ್ಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಸ್ಥಳಕ್ಕೆ ಬಂದಾಗ ಬೇಟೆಗಾರರು ಪರಾರಿಯಾಗಿದ್ದಾರೆ. ಅವರು ಜಿಂಕೆಯನ್ನು ಕೊಂಡೊಯ್ಯಲು ಸಾಧ್ಯವಾಗಿಲ್ಲ. ಸಿಬ್ಬಂದಿ ಸ್ಥಳಕ್ಕೆ ತೆರಳಿ ನೋಡಿದಾಗ ಜಿಂಕೆ ಮೃತಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಗತ್ತಿನಲ್ಲಿದ್ದ ಎರಡೇ ಎರಡು ಬಿಳಿ ಜಿರಾಫೆಗಳಿಗೆ ಇದೆಂತಾ ಗತಿ!ಜಗತ್ತಿನಲ್ಲಿದ್ದ ಎರಡೇ ಎರಡು ಬಿಳಿ ಜಿರಾಫೆಗಳಿಗೆ ಇದೆಂತಾ ಗತಿ!

ಜಿಂಕೆಯನ್ನು ಗುಂಡುಹಾರಿಸಿ ಕೊಲ್ಲಲಾಗಿದೆ. ದುಷ್ಕರ್ಮಿಯ ಪತ್ತೆಗೆ ಕ್ರಮ ಕೈಗೊಂಡಿದ್ದೇವೆ. ವನ್ಯಜೀವಿಗಳನ್ನು ಬೇಟೆಯಾಡುವವರನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದ್ದೇವೆ. ಜಿಂಕೆಯನ್ನು ಕೊಂದ ಸ್ಥಳಕ್ಕೆ ಸಮೀಪದಲ್ಲೇ ಹಾರೋಹಳ್ಳಿ- ಆನೇಕಲ್‌ ರಸ್ತೆಯು ಉದ್ಯಾನದ ಮೂಲಕ ಹಾದು ಹೋಗುತ್ತದೆ. ಬೇಟೆಗಾರ ಈ ಮಾರ್ಗವಾಗಿ ಬಂದಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.

Deer Shoot Dead In Bannerughatta National Park
English summary
Deer Shoot Dead In Bannerughatta National Park. hunters escaped Forest Officers Lodged Complaint.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X