ಆಳಂದದಲ್ಲಿ ಮತದಾರರ ಹೆಸರು ಡಿಲೀಟ್‌ಗೆ ಅರ್ಜಿ: ಚುನಾವಣಾ ಆಯೋಗಕ್ಕೆ ಪ್ರಿಯಾಂಕ್ ಖರ್ಗೆ ದೂರು
ಆಳಂದದಲ್ಲಿ ಆನ್ ಲೈನ್ ಮೂಲಕ 6,670 ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದೇ ಮತದಾರರ ಪಟ್ಟಿಯಿಂದ ಹೆಸರು ರದ್ದು ಮಾಡುವಂತೆ ಅರ್ಜಿ ಹಾಕಲಾಗಿದೆ
ಬೆಂಗಳೂರು, ಫೆಬ್ರವರಿ. 18: ವಿಧಾನಸಭಾ ಚುನಾವಣೆ ಹಿನ್ನೆಲೆ ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿ ಮತದಾರರಿ ಹೆಸರನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಮತದಾರರ ಪಟ್ಟಿಯಿಂದ ಮತದಾರರನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗುತ್ತಿದೆ ಎಂದು ಅವರು ಆರೋಪಿಸಿರುವ ಅವರು ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಈ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಚಿಲುಮೆ ಸಂಸ್ಥೆ ಮೂಲಕ ಮತದಾರರ ಪಟ್ಟಿ ಅಕ್ರಮ ಮಾಡಿದ ನಂತರ ಈಗ ರಾಜ್ಯದ ಬೇರೆ ಕ್ಷೇತ್ರಗಳಲ್ಲಿ ಬೇರೆ ರೀತಿಯ ಅಕ್ರಮಕ್ಕೆ ಮುಂದಾಗಿದೆ ಎಂದಿದ್ದಾರೆ.
.@INCKarnataka Priyank kharge has filed complaint with @ECISVEEP complaining of voter fraud at #Aland in #Kalaburgi dist of #Karnataka. They allege there has been deliberate deletion of voter from electoral roll. pic.twitter.com/p3ciYQRZLL
— Imran Khan (@KeypadGuerilla) February 20, 2023
ರಾಜ್ಯದ 46ನೆ ನೇ ವಿಧಾನ ಸಭಾ ಕ್ಷೇತ್ರವಾಗಿರುವ ಕಲಬುರಗಿ ಜಿಲ್ಲೆಯು ಆಳಂದದಲ್ಲಿ ಆನ್ ಲೈನ್ ಮೂಲಕ 6,670 ಮತದಾರರ ಹೆಸರನ್ನು ಅವರಿಗೆ ಗೊತ್ತಿಲ್ಲದೇ ಮತದಾರರ ಪಟ್ಟಿಯಿಂದ ಹೆಸರು ರದ್ದು ಮಾಡುವಂತೆ ಅರ್ಜಿ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕ್ಷೇತ್ರದ ಮತದಾರರ ಗಮನಕ್ಕೆ ಬಾರದೆ ಹೆಸರು ಕೈ ಬಿಡುವಂತೆ ಮತ್ತೊಬ್ಬರು ಅರ್ಜಿ ಹಾಕಿದ್ದಾರೆ. ಈ ವಿಚಾರವಾಗಿ ನಮ್ಮ ಬೂತ್ ಏಜೆಂಟ್‌ಗಳು ಪರಿಶೀಲನೆ ಮಾಡಿದಾಗ, ಅರ್ಜಿಯಲ್ಲಿ ತಾನು ಸ್ಥಳಿಯನಲ್ಲ ನನ್ನ ನಿವಾಸ ಬೇರೆ ರಾಜ್ಯಗಳಲ್ಲಿ ಇದೆ ಎಂದು ಹೇಳಿರುವುದು ಸ್ಪಷ್ಟವಾಗಿದೆ. ಆ ಮೂಲಕ ಬಹಳ ವ್ಯವಸ್ಥಿತವಾಗಿ ಅಕ್ರಮವಾಗಿ ಮತದಾರರ ಹೆಸರು ಕೈ ಬಿಡಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಮತದಾರರ ಹೆಸರನ್ನು ಅಕ್ರಮವಾಗಿ ಅಳಿಸಿಹಾಕುತ್ತಿರುವ ಬಗ್ಗೆ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೂ ದೂರು ನೀಡಲಾಗಿದೆ. ಕಾನೂನಿನ ಪ್ರಕಾರ ಒಂದು ಮೊಬೈಲ್ ಸಂಖ್ಯೆಯಿಂದ ಗರಿಷ್ಠ ಐದು ಮಂದಿಯ ಹೆಸರು ಕೈಬಿಡಲು ಅರ್ಜಿ ಹಾಕಬಹುದು. ಆದರೆ ಆಳಂದದಲ್ಲಿ ಒಂದು ಬೂತ್‌ನಲ್ಲಿ ಒಂದು ಮೊಬೈಲ್ ಸಂಖ್ಯೆಯಲ್ಲಿ 70 ಮತದಾರರ ಹೆಸರು ರದ್ದು ಮಾಡಲು ಅರ್ಜಿ ಹಾಕಲಾಗಿದೆ. ಒಬ್ಬೊಬ್ಬರು 50 ರಿಂದ 70 ಮತದಾರರ ಹೆಸರು ರದ್ದು ಮಾಡಲು ಅರ್ಜಿ ಹಾಕಲು ಹೇಗೆ ಸಾಧ್ಯ..? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಇನ್ನು ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲು ಹೇಳಲಾಗಿರುವವರು ಬಹುತೇಕ ಕಾಂಗ್ರೆಸ್ ಮತದಾರರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೇ ಯಾರು ಮತ ಹಾಕುತ್ತಾರೆ ಎಂದು ಬೇರೆ ರಾಜ್ಯದವರಿಗೆ ಮಾಹಿತಿ ಹೇಗೆ ಸಿಗುತ್ತದೆ..? ಈ ಮಾಹಿತಿ ಆ ಸ್ಥಳೀಯ ಬೂತ್‌ನವರಿಗೆ ಗೊತ್ತಿರುತ್ತದೆಯೇ ಹೊರತು ಬೇರೆಯವರಿಗಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.












Click it and Unblock the Notifications