ದೆಹಲಿ ಚುನಾವಣೆ; ಕರ್ನಾಟಕ ಆಪ್ ಕಾರ್ಯಕರ್ತರ ಸಂಭ್ರಮಾಚರಣೆ

ಬೆಂಗಳೂರು, ಫೆಬ್ರವರಿ 11: ಕರ್ನಾಟಕದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮಂಗಳವಾರ ದೆಹಲಿಯ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ನಗರದ ಜೈನ್ ಭವನದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.

ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಕ್ಷದ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ, "ಇದು ಕೇವಲ ಚುನಾವಣಾ ಫಲಿತಾಂಶವಷ್ಟೇ ಅಲ್ಲ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಮಾಡಿರುವ ಅಭಿವೃದ್ಧಿ ಕಾರ್ಯಗಳ ಫಲಿತಾಂಶವೂ ಹೌದು. ಜನರು ಪಕ್ಷದ ಮೇಲೆ ಹೆಚ್ಚಿನ ಭರವಸೆ ಮತ್ತು ನಂಬಿಕೆಯನ್ನು ಇಟ್ಟಿದ್ದಾರೆ. ಕರ್ನಾಟಕದಲ್ಲಿಯೂ ಜನರ ನಂಬಿಕೆಯನ್ನು ಗಟ್ಟಿಗೊಳಿಸಿ, ಹೊಸ ಭರವಸೆಯನ್ನು ಮೂಡಿಸಲು ನಾವೆಲ್ಲರೂ ಮತ್ತಷ್ಟು ಕಠಿಬದ್ದರಾಗಿ ಕೆಲಸ ಮಾಡಬೇಕು' ಎಂದರು.

"ಉತ್ಸಾಹದಿಂದ ಪಕ್ಷವನ್ನು ಸಂಘಟಿಸಲು ಕಾರ್ಯಪ್ರವೃತ್ತರಾಗಬೇಕು, ಜನಸಾಮಾನ್ಯರು ನಮ್ಮೊಂದಿಗಿದ್ದಾರೆ "ಇಂದು ದೆಹಲಿಯಲ್ಲಿ - ನಾಳೆ ಇಲ್ಲಿ' ನಮ್ಮ ಗೆಲುವು ಮುಂದುರೆಯಲಿದೆ. ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದು, ದೆಹಲಿ ಮಾದರಿಯ ಅಭಿವೃದ್ಧಿಯನ್ನು ಬೆಂಗಳೂರಿನಲ್ಲಿಯೂ ಸಾಧಿಸುವ ಹೊಣೆ ನಮ್ಮೆಲ್ಲರ ಮೇಲಿದೆ' ಎಂದು ತಿಳಿಸಿದರು.

Delhi Assembly Elections Result; Karnataka AAP Workers Celebrate The Victory

ಸಭೆಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಸಂಚಿತ್ ಸಹಾನೀ, ಬೆಂಗಳೂರು ಘಟಕದ ಅಧ್ಯಯಕ್ಷರಾದ ಮೋಹನ್ ದಾಸರಿ, ಬಿಬಿಎಂಪಿ ಚುನಾವಣಾ ಕ್ಯಾಂಪೇನ್ ಉಸ್ತುವಾರಿಗಳಾದ ಶಾಂತಲಾ ದಾಮ್ಲೆ, ರಾಜ್ಯ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+