ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿ ಹಿಂಸಾಚಾರ ಖಂಡಿಸಿ ಕರ್ನಾಟಕದಲ್ಲಿ ರಾಜಭವನ ಮುತ್ತಿಗೆ ಯತ್ನ

|
Google Oneindia Kannada News

ಬೆಂಗಳೂರು, ಫೆಬ್ರವರಿ.27: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಪರ ಮತ್ತು ವಿರುದ್ಧ ನಡೆದ ಹಿಂಸಾಚಾರಕ್ಕೆ ರಾಜ್ಯದಲ್ಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗುರುವಾರ ದೆಹಲಿ ಪೊಲೀಸರು ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನ ರಾಜಭವನದ ಎದುರು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು.

ದೆಹಲಿ ಹಿಂಸಾಚಾರ: ಮದುವೆಯಾಗಿ 13 ದಿನಕ್ಕೆ ಪತಿಯ ಕಳೆದುಕೊಂಡ ಪತ್ನಿದೆಹಲಿ ಹಿಂಸಾಚಾರ: ಮದುವೆಯಾಗಿ 13 ದಿನಕ್ಕೆ ಪತಿಯ ಕಳೆದುಕೊಂಡ ಪತ್ನಿ

ರಾಜಭವನದ ಬಳಿ ನಡುರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನಂತರದಲ್ಲಿ ರಾಜಭವನಕ್ಕೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾನಿರತರನ್ನು ತಡೆದು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Delhi Violence: Protesters Try To Entry Raj Bhavan In Bangalore

ದೆಹಲಿ ಹಿಂಸಾಚಾರದಲ್ಲಿ 34 ಮಂದಿ ಸಾವು:

ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರದಲ್ಲಿ ಈವರೆಗೂ 34 ಮಂದಿ ಪ್ರಾಣ ಬಿಟ್ಟಿದ್ದು, 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು 48 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

English summary
Delhi Violence: Protesters Try To Entry Raj Bhavan In Bangalore. Police Stop And Detained Some Peoples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X