ದಲಿತ ಪತ್ರಕರ್ತ ತೇಜನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಬೆಂಗಳೂರು ಜು.1: ನಗರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸ್ವಾತಂತ್ರ್ಯ ಉದ್ಯಾನದಲ್ಲಿ ದಲಿತ ಪತ್ರಕರ್ತನ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಈ ಸಂಬಂಧ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.
ಈ ಕುರಿತು ವಿವಿಧ ದಲಿತಪರ ಸಂಘಟನೆಗಳ ಮುಖ್ಯಸ್ಥರು ಹಾಗೂ ದಲಿತ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಲಿತ ಪತ್ರಕರ್ತ ತೇಜ ಎಂಬುವವರು ಮೇಲೆ ಕೆಲವು ಹಲ್ಲೆ ನಡೆಸಿದ್ದಾರೆ. ಹಲ್ಲೆ ಹಿಂದೆ ಆರ್‌ಎಸ್‌ಎಸ್ ಕಾರ್ಯಕರ್ತರ ಕೈವಾಡವಿದೆ ಎಂಬ ಮಾತು ಸಹ ಕೇಳಿ ಬಂದಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ದಲಿತಪರ ಮುಖಂಡರು ಆಗ್ರಹಿಸಿದ್ದಾರೆ.

ಈ ಸಂಬಂಧ ಕಳೆದ ಹತ್ತು ದಿನದಿಂದ ವಿವಿಧ ಸಂಘಟನೆಗಳು ಟೌನ್ ಹಾಲ್ ಮುಂದೆ ಪ್ರತಿಭಟಿಸಿದ್ದಾರೆ. ದಲಿತರಿಗೆ ನ್ಯಾಯ ಕೊಡಿಸುವಂತೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು ಎಂದು ತಿಳಿದು ಬಂದಿದೆ.
ಕ್ರಮದ ಭರವಸೆ ನೀಡಿದ ಸಚಿವರು; ಮನವಿ ಸ್ವೀಕರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ತಪ್ಪಿತಸ್ಥರು ಯಾರೇ ಇದ್ದರು ಪತ್ತೆ ಮಾಡಿ ಸೂಕ್ತ ಕ್ರಮ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮನವಿ ಸಲ್ಲಿಸಿದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ದಲಿತ ಮುಖಂಡರಾದ ಜಗದೀಶ್, ವೆಂಕಟೇಶ್, ಅಲೆಮಾರಿ ಸಮುದಾಯಗಳ ಮುಖಂಡರಾದ ಕಿರಣ್ ಕೊತ್ತಿಗೆರೆ, ಸುನೀಲ್ ಹೆಳವರ , ಲೋಹಿತಾಶ್ವ , ಅಂಜನೇಯ ಮತ್ತಿತರರು ಉಪಸ್ಥಿತರಿದ್ದರು.
Recommended Video
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications