ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತ ಪತ್ರಕರ್ತ ತೇಜನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

|
Google Oneindia Kannada News

ಬೆಂಗಳೂರು ಜು.1: ನಗರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸ್ವಾತಂತ್ರ್ಯ ಉದ್ಯಾನದಲ್ಲಿ ದಲಿತ ಪತ್ರಕರ್ತನ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಈ ಸಂಬಂಧ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಈ ಕುರಿತು ವಿವಿಧ ದಲಿತಪರ ಸಂಘಟನೆಗಳ ಮುಖ್ಯಸ್ಥರು ಹಾಗೂ ದಲಿತ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಲಿತ ಪತ್ರಕರ್ತ ತೇಜ ಎಂಬುವವರು ಮೇಲೆ ಕೆಲವು ಹಲ್ಲೆ ನಡೆಸಿದ್ದಾರೆ. ಹಲ್ಲೆ ಹಿಂದೆ ಆರ್‌ಎಸ್‌ಎಸ್ ಕಾರ್ಯಕರ್ತರ ಕೈವಾಡವಿದೆ ಎಂಬ ಮಾತು ಸಹ ಕೇಳಿ ಬಂದಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ದಲಿತಪರ ಮುಖಂಡರು ಆಗ್ರಹಿಸಿದ್ದಾರೆ.

Demand to Arrest Those Who Assaulted Dalit Journalist Teja

ಈ ಸಂಬಂಧ ಕಳೆದ ಹತ್ತು ದಿನದಿಂದ ವಿವಿಧ ಸಂಘಟನೆಗಳು ಟೌನ್ ಹಾಲ್ ಮುಂದೆ ಪ್ರತಿಭಟಿಸಿದ್ದಾರೆ. ದಲಿತರಿಗೆ ನ್ಯಾಯ ಕೊಡಿಸುವಂತೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು ಎಂದು ತಿಳಿದು ಬಂದಿದೆ.

ಕ್ರಮದ ಭರವಸೆ ನೀಡಿದ ಸಚಿವರು; ಮನವಿ ಸ್ವೀಕರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ತಪ್ಪಿತಸ್ಥರು ಯಾರೇ ಇದ್ದರು ಪತ್ತೆ ಮಾಡಿ ಸೂಕ್ತ ಕ್ರಮ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಮನವಿ ಸಲ್ಲಿಸಿದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ದಲಿತ ಮುಖಂಡರಾದ ಜಗದೀಶ್, ವೆಂಕಟೇಶ್, ಅಲೆಮಾರಿ ಸಮುದಾಯಗಳ ಮುಖಂಡರಾದ ಕಿರಣ್ ಕೊತ್ತಿಗೆರೆ, ಸುನೀಲ್ ಹೆಳವರ , ಲೋಹಿತಾಶ್ವ , ಅಂಜನೇಯ ಮತ್ತಿತರರು ಉಪಸ್ಥಿತರಿದ್ದರು.

Recommended Video

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರು ಸಮಾಚಾರ: ಇದರ ಹಿನ್ನೆಲೆ ನಿಮ್ಗೆ ಗೊತ್ತಾ? | OneIndia Kannada

English summary
Dalit journalist was assaulted by miscreants at freedom park, dalit leaders demanded arrest that culprits and take to strict action
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X