ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

BBMP Demolition drive: ಆರು ಕಡೆ ರಾಜಕಾಲುವೆ ಒತ್ತುವರಿ ತೆರವು

|
Google Oneindia Kannada News

ಬೆಂಗಳೂರು, ಡಿಸೆಂಬರ್ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಮುಂದುವರಿದಿದೆ. ಅನೇಕ ಕಡೆಗಳಲ್ಲಿ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಒಟ್ಟು ಆರು ಕಡೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯದ ಮುನ್ನೇನಕೊಳಲು, ಶಾಂತಿನಿಕೇತನ ಲೇಔಟ್ ಹಾಗೂ ಎಬಿಕೆ ಹಳ್ಳಿಯಲ್ಲಿ ಆರು ಒತ್ತುವರಿಗಳ ತೆರವು ಕಾರ್ಯಾಚರಣೆ ಗುರುವರ ನಡೆಯಿತು. ಮುನ್ನೇನಕೊಳಲು ಹಾಗೂ ಶಾಂತಿನಿಕೇತನ ಲೇಔಟ್ ನಲ್ಲಿ 30x40 ಅಡಿ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ ಎರಡು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಇದೇ ಸ್ಥಳದಲ್ಲಿ ರಾಜಕಾಲುವೆಯ ಮೇಲೆ ನಿರ್ಮಿಸಿದ್ದ ಎರಡು ಶೆಡ್‌ಗಳನ್ನು ಸಹ ಅಧಿಕಾರಿಗಳು ಖುದ್ದು ಮುಂದೆ ನಿಂತು ತೆರವು ಮಾಡಿದ್ದಾರೆ.

ಬೆಂಗಳೂರು: ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಖಡಕ್ ಸೂಚನೆಬೆಂಗಳೂರು: ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಖಡಕ್ ಸೂಚನೆ

ಅಮಾನಿ ಬೆಳ್ಳಂದೂರು ಖಾನೆ (ಎಬಿಕೆ) ಹಳ್ಳಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮಾರ್ಗದಲ್ಲಿ ನಿರ್ಮಿಸಿದ್ದ ಒಂದು ಶೆಡ್ ಹಾಗೂ ಸುಮಾರು 60 ಮೀಟರ್ ಉದ್ದದ ಕಾಂಪೌಂಡ್ ಗೋಡೆಯನ್ನು ನೆಲಸಮಗೊಳಿಸಲಾಗಿದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ತಹಶೀಲ್ದಾರರು ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿತ್ತು.

Demolition drive: 6 Encroachment clearance in Mahadevapura Zone by BBMP

ನೋಟಿ ಜಾರಿ ಮಾಡಿದ ಕೆಲವು ದಿನಗಳ ಬಳಿಕ ಗುರುತಿಸಲಾಗಿದ್ದ ಬಾಕಿ ಒತ್ತುವರಿಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ. ಈ ಸಂಬಂಧ ಇತ್ತೀಚೆಗಷ್ಟೇ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ರಾಜಕಾಲುವೆ ಸೇರಿದಂತೆ ಬೃಹತ್ ನೀರುಗಾಲುವೆಗಳನ್ನು ತೆರವು ತ್ವರಿತಗತಿಯಲ್ಲಿ ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Demolition drive: 6 Encroachment clearance in Mahadevapura Zone by BBMP

ರಾಜಕಾಲುವೆ ಒತ್ತುವರಿ ತೆರವು ಮಾಹಿತಿ ಹೀಗಿದೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಹದೇವಪುರ ವ್ಯಾಪ್ತಿಯಲ್ಲಿ 2015-16ರಿಂದ ಇದುವರೆಗೆ ಒಟ್ಟಾರೆ 1,174 ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲಾಗಿದೆ. ಈ ಪೈಕಿ 1,032 ಕಡೆಗಳಲ್ಲಿ ರಾಜಕಾಲುವೆ ಒತ್ತುವರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. 142 ಒತ್ತುವರಿಗಳನ್ನು ತೆರವುಗೊಳಿಸಬೇಕಾಗಿದೆ. ಈ ಪೈಕಿ 11 ಪ್ರಕರಣಗಳು ನ್ಯಾಯಾಲಯಕ್ಕೆ ಸಂಬಂಧಿಸಿದ್ದಾಗಿದೆ. ಇನ್ನು 131 ಒತ್ತುವರಿಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ವೇ ಕಾರ್ಯವನ್ನು ನಡೆಸುತ್ತಿದೆ. ರಾಜಕಾಲುಚವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ.

English summary
Demolition drive in Bengaluru: 6 Encroachment clearance in Mahadevapura Zone by Bruhat Bengaluru Mahanagara Palike (BBMP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X