ಒಂದೇ ವಾರದಲ್ಲಿ 150 ಪ್ರಕರಣ: ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ
ಬೆಂಗಳೂರು, ಜನವರಿ 11: ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ಜ್ವರ, ಶೀತ, ಕೆಮ್ಮುವಿನಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜೊತೆಗೆ ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣ ಕೂಡ ಮಿತಿಮೀರಿ ಹೆಚ್ಚಾಗುತ್ತಿದೆ. ಕಳೆದ ಏಳು ದಿನಗಳಲ್ಲಿ ಅಂದರೆ ಒಂದೇ ವಾರದಲ್ಲಿ 150 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ.
ಕಳೆದ ವರ್ಷದ ವರದಿಯನ್ನು ಗಮನಿಸಿದರೆ ಈ ವರ್ಷ ಆರಂಭದಲ್ಲೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ ವರ್ಷ 2023ರಲ್ಲಿ ಇಡೀ ವರ್ಷದಲ್ಲಿ 16,500ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಮೃತಪಟ್ಟಿದ್ದರು.

ಆದರೆ ಈ ವರ್ಷ 2024ರ ಆರಂಭದಲ್ಲೇ 150 ಪ್ರಕರಣಗಳು ದೃಢಪಟ್ಟಿದ್ದು, ಆತಂಕ ಹೆಚ್ಚಾಗಿದೆ. ಕಳೆದ ಏಳು ದಿನಗಳಲ್ಲಿ 2,352 ಶಂಕಿತರಲ್ಲಿ 1,371 ಮಂದಿಯ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 150 ಜನರಿಗೆ ಡೆಂಗ್ಯೂ ಇರುವುದು ದೃಢಪಟ್ಟಿವೆ. ಕಳೆದ ವರ್ಷ ರಾಜ್ಯದಲ್ಲಿ 16,500ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳ ಪೈಕಿ 9,620 ಮಂದಿ ಚಳಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವುದು ದೃಢಪಟ್ಟಿತ್ತು.
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ, ಮೋಡ ಕವಿದ ವಾತಾವರಣವಿದ್ದು, ಚಳಿ ಕೂಡ ಹೆಚ್ಚಾಗಿದ್ದು, ಜನರಲ್ಲಿ ಜ್ವರ, ಶೀತ ಹಾಗೂ ಗಂಟಲು ನೋವು ಕಾಣಿಸಿಕೊಳ್ಳುತ್ತಿದೆ. ಇನ್ನು ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಸದ್ಯ ರಾಜ್ಯದಲ್ಲಿ 470 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ ಏಳು ದಿನಗಳಲ್ಲಿ ಕರ್ನಾಟಕದಲ್ಲಿ 28 ಚಿಕನ್‌ಗುನ್ಯ ಪ್ರಕರಣಗಳು ವರದಿಯಾಗಿವೆ.

ಡೆಂಗ್ಯೂ ರೋಗದ ಲಕ್ಷಣವೇನು?
ಈಡಿಸ್ ಈಜಿಪ್ಟಿ ಸೊಳ್ಳೆಗಳಿಂದ ಡೆಂಗ್ಯೂ ಹರಡುತ್ತದೆ. ಇದನ್ನು ಮೂಳೆಮುರಕ ಅಥವಾ ಬ್ರೇಕ್‌ಬೋನ್ ಜ್ವರವೆಂದು ಕೂಡ ಕರೆಯಲಾಗುತ್ತದೆ. ಈಡಿಸ್ ಈಜಿಪ್ಟ್ಟೆ ಎಂಬ ಸೊಳ್ಳೆ ಕಚ್ಚಿದ ಮೂರರಿಂದ ಹದಿನಾಲ್ಕು ದಿನಗಳ ನಂತರ ವ್ಯಕ್ತಿಯಲ್ಲಿ ರೋಗ ಉಲ್ಭಣವಾಗಿ ರೋಗದ ಲಕ್ಷಣಗಳು ಹೊರಗೆ ಕಾಣಿಸಿಕೊಳ್ಳುತ್ತದೆ.
ಸೊಳ್ಳೆಯು ಸೋಂಕಿಗೆ ತುತ್ತಾಗದ ವ್ಯಕ್ತಿಯನ್ನು ಕಚ್ಚಿದಲ್ಲಿ, ಆ ಸೊಳ್ಳೆಯ ಜೊಲ್ಲಿನ ಮೂಲಕ ವೈರಸ್ ವ್ಯಕ್ತಿಯ ದೇಹವನ್ನು ಪ್ರವೇಶಿಸಿ ದೇಹದಲ್ಲಿನ ಬಿಳಿ ರಕ್ತಕಣದೊಂದಿಗೆ ಸೇರಿಕೊಂಡು, ಬಿಳಿ ರಕ್ತ ಕಣಗಳಲ್ಲಿ ದ್ವಿಗುಣಗೊಳ್ಳುತ್ತಾ ಸಾಗುತ್ತದೆ. ಈ ದ್ವಿಗುಣಗೊಳ್ಳುವಿಕೆಯು ಡೆಂಗ್ಯೂ ರೋಗದ ರೋಗದ ಪ್ರಮುಖ ಲಕ್ಷಣವಾಗಿರುತ್ತದೆ.
ಡೆಂಗ್ಯೂ ಕಾಣಿಸಿಕೊಳ್ಳುತ್ತಿದ್ದಂತೆ ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು ಕಾಣಿಸಿಕೊಳ್ಳುತ್ತದೆ. ಜೊತೆಗೆ ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಜ್ವರ ಕಾಣಿಸಿಕೊಳ್ಳುತ್ತಿದ್ದಂತೆ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ತಪಾಸಣೆ ನಡೆಸುವುದು ಉತ್ತಮ. ರೋಗ ಉಲ್ಭಣಗೊಳ್ಳುವ ಮೊದಲು ಚಿಕಿತ್ಸೆ ಪಡೆಯುವುದರಿಂದ ಪ್ರಾಣಾಪಾಯ ತಪ್ಪಿಸಬಹುದು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು











Click it and Unblock the Notifications