ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಡೆಂಗ್ಯೂ ಹಾವಳಿ ಇಳಿಮುಖ

|
Google Oneindia Kannada News

ಬೆಂಗಳೂರು, ಅಕ್ಟೋಬರ್, 19: ನಗರದಲ್ಲಿ ಡೆಂಗ್ಯೂಗೆ ತುತ್ತಾಗುವವರ ಸಂಖ್ಯೆ ಇಳಿಮುಖವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಮಲೇರಿಯಾ ಮತ್ತು ಡೆಂಗ್ಯೂ ವೈದ್ಯಾಧಿಕಾರಿ ಡಾ.ಸುನಂದ ತಿಳಿಸಿದ್ದಾರೆ.

ಡೆಂಗ್ಯೂ ಪೀಡಿತರ ಸಂಖ್ಯೆ ಕಡಿಮೆಯಾಗಿದೆ. ಆದರೂ ಕೆಲವೆಡೆ ಒಂದೆರೆಡು ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಾಕಷ್ಟು ಪ್ರಮಾಣದಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ಇಳಿಮುಖವಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಕೆಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೆಪದಲ್ಲಿ ಡೆಂಗ್ಯೂ ಪೀಡತರಿಂದ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ದೂರುಗಳು ಬಂದಿವೆ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.[ಡೆಂಗ್ಯೂ ತಡೆಗೆ ಯಾವ ಮುಂಜಾಗ್ರತಾ ಕ್ರಮ ಬೇಕು?]

Dengue cases reduced in city

ಡೆಂಗ್ಯೂ ಚಿಕಿತ್ಸೆ ಪಡೆಯುವ ರೋಗಿಗಳಿದಂದ 500ರೂ. ಗಿಂತಲೂ ಹೆಚ್ಚಿನ ಹಣ ಪಡೆಯಬಾರದು ಎಂದು ಅವರು ಸೂಚಿಸಿದ್ದಾರೆ.

ಕಳೆದ 9 ತಿಂಗಳಲ್ಲಿ ಕಂಡುಬಂದ 5,515 ಶಂಕಿತ ಡೆಂಗ್ಯೂ ಪ್ರಕರಣಗಳ ಪೈಕಿ 156 ಮಂದಿ ಡೆಂಗ್ಯೂಗೆ ತುತ್ತಾಗಿರುವುದು ದೃಢಪಟ್ಟಿದೆ. ಈ ವರೆಗೆ ಇಬ್ಬರು ಡೆಂಗ್ಯೂನಿಂದ ಮರಣಿಸಿದ್ದಾರೆ ಎಂದು ಅವರು ತಿಳಿಸಿದರು..

ಪ್ರತಿದಿನ 60 ಮನೆಗಳಲ್ಲಿ ಲಾರ್ವಾ ಸಮೀಕ್ಷೆ ನಡೆಸಿ ವರದಿ ನೀಡಲಾಗುತ್ತಿದೆ. ಜನವರಿಯಿಂದ ಸೆಪ್ಟೆಂಬರ್ ಅಂತ್ಯದವರೆಗೆ ಸಂಗ್ರಹಿಸಿದ 8,10,318 ಮಾದರಿಗಳಲ್ಲಿ 4,092 ಕಡೆ ಈಡಿಸ್ ಸೊಳ್ಳೆಯ ಲಾರ್ವಾ ಕಂಡುಬಂದಿದ್ದು, ಉತ್ಪತ್ತಿ ತಾಣಗಳನ್ನು ನಾಶ ಮಾಡಲಾಗಿದೆ ಎಂದು ಅವರು ತಿಳಿಸಿದರು.

English summary
The Dengue cases are reduced in city, says Bengaluru urban district Dengue and Malaria medical officer Dr, Sunanda on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X