Dengue Cases: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಂಚಿಕೊಂಡ ಅಂಕಿಅಂಶಗಳ ಪ್ರಕಾರ ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. 4,323 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದೆ.
ಜೂನ್‌ನಲ್ಲಿ 689 ಪ್ರಕರಣಗಳಿದ್ದರೆ, ಆಗಸ್ಟ್‌ನಲ್ಲಿ ಪ್ರಕರಣಗಳ ಸಂಖ್ಯೆ 1,589 ಕ್ಕೆ ಏರಿದೆ. ಜುಲೈ ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 1,629 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ ಪಾಲಿಕೆಯಿಂದ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 8 ರವರೆಗೆ 416 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
2019 ರಲ್ಲಿ 44,863 ಡೆಂಗ್ಯೂ ಪ್ರಕರಣಗಳಿದ್ದರೆ, 2020 ರಲ್ಲಿ 6,679 ಕ್ಕೆ ಇಳಿದಿದೆ ಎಂದು ಬಿಬಿಎಂಪಿ ಹಂಚಿಕೊಂಡ ಅಂಕಿಅಂಶಗಳು ತೋರಿಸುತ್ತವೆ. ಅಂತೆಯೇ, 2021 ರಲ್ಲಿ 6,166 ಪ್ರಕರಣಗಳು ಮತ್ತು 2022 ರಲ್ಲಿ 5,589 ಪ್ರಕರಣಗಳು ವರದಿಯಾಗಿವೆ.

ಜಾಗೃತಿ ವಹಿಸಲು ಮನವಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿಯಿಂದ ಸೆಪ್ಟೆಂಬರ್ 12ರವರೆಗೆ 198 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆದರೆ, ಜ್ವರದಿಂದ ಸಾವನ್ನಪ್ಪಿರುವ ಯಾವುದೇ ಪ್ರಕರಣವನ್ನು ಆರೋಗ್ಯಾಧಿಕಾರಿಗಳು ಖಚಿತಪಡಿಸಿಲ್ಲ.
ಕಳೆದ ವಾರ, ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ PRISM-H (ಪ್ಲಾಟ್‌ಫಾರ್ಮ್ ಫಾರ್ ರಿಸರ್ಚ್, ಇಂಟಿಗ್ರೇಟೆಡ್ ಸರ್ವೆಲೆನ್ಸ್ ಮತ್ತು ಮ್ಯಾನೇಜ್‌ಮೆಂಟ್ ಆಫ್ ಹೆಲ್ತ್) ಅನ್ನು ಭಾರತೀಯ ವಿಜ್ಞಾನ ಸಂಸ್ಥೆಯ ಎಐ ಮತ್ತು ರೊಬೊಟಿಕ್ಸ್ ಟೆಕ್ನಾಲಜಿ ಪಾರ್ಕ್ (ARTPARK) ಕಚೇರಿಯಲ್ಲಿ ಅನಾವರಣಗೊಳಿಸಿದರು. ಇದು ಡೆಂಗ್ಯೂ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡುತ್ತದೆ.
ಮಳೆಗಾಲದಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗುತ್ತಿರುವುದರಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗುಂಡೂರಾವ್ ಹೇಳಿದ್ದರು. ಜಾಗರೂಕರಾಗಿರಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಬಹುದಾದ ನೀರಿನ ಅಡಚಣೆಯಾಗದಂತೆ ನೋಡಿಕೊಳ್ಳಲು ಬಿಬಿಎಂಪಿ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಗೆ ಸೂಚನೆ ನೀಡಿದ್ದಾರೆ.
ನಾಗರೀಕರು ಕೂಡ ಡೆಂಗ್ಯೂ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದ್ದು, ಸೊಳ್ಳೆಗಳ ಕಡಿತವನ್ನು ತಪ್ಪಿಸಲು ಸುರಕ್ಷಿತ ಕ್ರಮ ವಹಿಸಲು ಕೋರಲಾಗಿದೆ. ಸೊಳ್ಳೆ ಬತ್ತಿ, ಸೊಳ್ಳೆ ಪರದೆ ಬಳಸುವ ಮೂಲಕ ರಾತ್ರಿ ವೇಳೆ ರಕ್ಷಣೆ ಪಡೆದುಕೊಳ್ಳುವುದು, ಹಗಲು ಹೊತ್ತಿನಲ್ಲಿ ಸೊಳ್ಳೆ ಕಡಿತದ ಬಗ್ಗೆ ಹೆಚ್ಚಿನ ಜಾಗೃತ ವಹಿಸಲು ಮನವಿ ಮಾಡಿದ್ದಾರೆ.












Click it and Unblock the Notifications