• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು; ಮಗುವಿನ ಜತೆ ನೇಣು ಬಿಗಿದುಕೊಂಡು ದಂತ ವೈದ್ಯೆ ಆತ್ಮಹತ್ಯೆ

|
Google Oneindia Kannada News

ಬೆಂಗಳೂರು, ಆ. 08: ರಾಜಧಾನಿ ಬೆಂಗಳೂರಿನಲ್ಲಿ ದಂತ ವೈದ್ಯೆಯರ ಆತ್ಮಹತ್ಯೆ ಪ್ರಕರಣಗಳು ಪದೇ ಪದೇ ಮರಕಳಿಸುತ್ತಿವೆ. ಐದು ವರ್ಷದ ಕಂದಮ್ಮನನ್ನು ನಾಲ್ಕನೇ ಮಹಡಿಯಿಂದ ಎಸೆದು ದಂತ ವೈದ್ಯೆ ಕ್ರೂರತೆ ಮೆರೆದಿದ್ದಳು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ದಂತ ವೈದ್ಯೆ ತನ್ನ ಮಗುವಿಗೆ ನೇಣು ಬಿಗಿದು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವೃತ್ತಿಯಲ್ಲಿ ದಂತ ವೈದ್ಯೆಯಾಗಿರುವ ಶೈಮಾ (39), ಆಕೆಯ ಹತ್ತು ವರ್ಷದ ಮಗಳು ಆರಾಧನಾ (10) ಮೃತ ದುರ್ದೈವಿಗಳು. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮನೆಯೊಂದರಲ್ಲಿ ತಾಯಿ-ಮಗಳು ವಾಸ ಮಾಡುತ್ತಿದ್ದರು.

Fact check: ಆಸ್ಪತ್ರೆಯಲ್ಲಿ ಕುಸಿದು ಬಿದ್ದ ವೈದ್ಯೆ- ವೈರಲ್ ವಿಡಿಯೋ ಮುಂಬೈನದ್ದಾ? Fact check: ಆಸ್ಪತ್ರೆಯಲ್ಲಿ ಕುಸಿದು ಬಿದ್ದ ವೈದ್ಯೆ- ವೈರಲ್ ವಿಡಿಯೋ ಮುಂಬೈನದ್ದಾ?

ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡ ರೀತಿಯಲ್ಲಿ ಶವಗಳು ಪತ್ತೆಯಾಗಿವೆ. ಈ ಸಂಬಂಧ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಶವ ರವಾನಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

ಕೊಡಗಿನ ವಿರಾಜಪೇಟೆ ಮೂಲದ ಮೃತ ಶೈಮಾ. ಕಳೆದ 10 ವರ್ಷದ ಹಿಂದೆ ದಂತ ವೈದ್ಯ ತರಬೇತಿ ವೇಳೆ ಕೋಲಾರ ಮೂಲದ ನಾರಾಯಣ್ರನ್ನು ಪ್ರೀತಿಸಿ, ಎರಡು ಕುಟುಂಬದವರನ್ನು ಒಪ್ಪಿಸಿ ಇಬ್ಬರು ವಿವಾಹವಾಗಿದ್ದರು.

ಪತಿ ಸಹ ವೈದ್ಯನಾಗಿದ್ದು ಮನೆಯ ಸಮೀಪದಲ್ಲಿ ಕ್ಲಿನಿಕ್‌ ಇಟ್ಟುಕೊಂಡಿದ್ದರು. ಎರಡು ದಿನಗಳ ಹಿಂದೆ ಮನೆಯಲ್ಲಿ ಯಾರು ಇಲ್ಲದಿರುವಾಗ ಶೈಮಾ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾನಸಿಕ ಖಿನ್ನತೆಗೆ ಒಳಗಾಗಿದ್ ಶೈಮಾ ತನ್ನ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಮಗುವನ್ನು ಥ್ರೋ ಬಾಲ್ ರೀತಿ ಎಸೆದು ಹತ್ಯೆ ಮಾಡಿದ್ದ ದಂತ ವೈದ್ಯೆ: ಶುಕ್ರವಾರ ನಾಲ್ಕು ಅಂತಸ್ತಿನ ಕಟ್ಟಡದಿಂದ ಮಗುವನ್ನು ಕೆಳಗೆ ಎಸೆದು ದಂತ ವೈದ್ಯೆ ತನ್ನ ಮಗುವನ್ನು ಕೊಲೆ ಮಾಡಿದ್ದಳು. ಈ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ನಟಿಸಿದ್ದಳು. ಸತ್ಯ ಪತ್ತೆ ಮಾಡಿದ ಸಂಪಂಗಿ ರಾಮನಗರ ಪೊಲೀಸರು ತಾಯಿ ಸುಷ್ಮಾಳನ್ನು ಬಂಧಿಸಿದ್ದರು.

ಸಂಪಂಗಿರಾಮನಗರದ ಅಪಾರ್ಟ್ಮೆಂಟ್‌ನಲ್ಲಿ ತನ್ನ ಇಬ್ಬರ ಮಕ್ಕಳೊಂದಿಗೆ ಸುಷ್ಮಾ ವಾಸವಾಗಿದ್ದಳು. ದ್ವಿತಿಗೆ ಮಾತು ಬರುತ್ತಿರಲಿಲ್ಲ. ಇದರಿಂದ ಸುಷ್ಮಾ ಬೆಸತ್ತಿದ್ದಳು ಎಂಬ ಮಾತುಕೇಳಿಬಂದಿದೆ. ಮಗುವನ್ನು ಆಟವಾಡಿಸಿಕೊಂಡು ಬರುವುದಾಗಿ ಹೇಳಿ ಕರೆದುಕೊಂಡು ಹೋದ ಸುಷ್ಮಾ ಮೊದಲು ದ್ವಿತಿ ಕೈಹಿಡಿದು ವಾಕ್ ಮಾಡಿಸುತ್ತಾಳೆ. ಆ ಬಳಿಕ ತಾನೇ ದ್ವಿತಿಯನ್ನು ಎತ್ತಿಕೊಂಡು ಕೊಲೆಯ ಉದ್ದೇಶದಿಂದಲೇ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಎಸೆದಿದ್ದಳು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ದ್ವಿತಿ ಎಂಬ ಕಂದಮ್ಮನನ್ನು ಎರಡು ಕೈಗಳಿಂದ ಎತ್ತಿಕೊಂಡು ಥ್ರೋ ಬಾಲ್ ಎಸೆಯುವಂತೆ ಎಸೆದಿದ್ದಾಳೆ. ಆ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ನಟಿಸಿದ್ದಳು. ಈ ವೇಳೆ ಅಕ್ಕಪಕ್ಕದ ನಿವಾಸಿಗಳು ಸುಷ್ಮಾಳನ್ನು ಕಾಪಾಡಿದ್ದರು. ಆದರೆ ಈ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಸಿಸಿಟಿವಿ ದೃಶ್ಯ ಆಧರಿಸಿ ದಂತವೈದ್ಯೆ ಸುಷ್ಮಾಳನ್ನು ಪೊಲೀಸರು ಬಂಧಿಸಿದ್ದರು. ಮಗುವನ್ನು ನೋಡಿಕೊಳ್ಳಲು ಆಗದೇ ತನಗೆ ಸ್ವಾತಂತ್ರ್ಯವಿಲ್ಲ ಎಂಬ ಕಾರಣಕ್ಕೆ ದ್ವಿತಿಯನ್ನು ಕೊಲ್ಲುವ ಉದ್ದೇಶದಿಂದ ಎಸೆದು ಕೊಲೆಯನ್ನು ಮಾಡಿದ್ದಾಳೆ ಎಂಬುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಶೈಮಾ ಆತ್ಮಹತ್ಯೆಯ ನಿಖರ ಕಾರಣ ಗೊತ್ತಾಗಬೇಕಿದೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777.

Recommended Video

   BJP ಈ 6 ಸಂಸದರಿಗೆ ಮುಂದಿನ ಚುನಾವಣೆಯಲ್ಲಿ ನೋ ಟಿಕೆಟ್? | *Politics | OneIndia Kannada
   English summary
   Women Dental doctor hanged herself along with her ten year old child at Bengaluru know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X