ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಫೆಬ್ರವರಿ 07 : ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಹಾಗೂ ಮಾಲ್ಡೀವ್ಸ್ ನಿಂದ ಕರ್ನಾಟಕ ಕರಾವಳಿ ಪ್ರದೇಶದ ವರೆಗೆ ವಾಯುಭಾರ ಕುಸಿತ ಉಂಟಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರವಾಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಂ.ಮೇತ್ರಿ ತಿಳಿಸಿದ್ದಾರೆ.

ಬೀದರ್ ನಲ್ಲಿ ಬುಧವಾರ10.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 32.3 ಡಿಗ್ರಿ ಸೆ. ಗರಿಷ್ಠ ಉಷ್ಣಾಂಶ ಹಾಗೂ 20 ಡಿಗ್ರಿ ಸೆ. ಕನಿಷ್ಠ ತಾಪಮಾನ ದಾಖಲಾಗಿದೆ. ಕೆಐಎಎಲ್ ನಲ್ಲಿ ಗರಿಷ್ಠ 30 ಡಿಗ್ರಿ ಸೆ. ಹಾಗೂ ಕನಿಷ್ಠ 18 ಡಿಗ್ರಿ, ಎಚ್ ಎಎಲ್ ನಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 18.4 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ.












Click it and Unblock the Notifications