ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹಿಂಗಾರು ಚುರುಕು

Recommended Video

      ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹಿಂಗಾರು ಚುರುಕು | Oneindia Kannada

      ಬೆಂಗಳೂರು, ನವೆಂಬರ್ 23: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದೆ. ಗುರುವಾರದಿಂದ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ.

      ಬೆಂಗಳೂರಿನಲ್ಲೂ ಕೂಡ ತುಂತುರು ಮಳೆಯಾಗುತ್ತಿದೆ. ಚಾಮರಾಜನಗರದಲ್ಲಿ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು ಆಗಾಗ ತುಂತುರು ಮಳೆಯಾಗುತ್ತಿದೆ.

      ಹಗಲು ಹೊತ್ತಿನಲ್ಲಿ ಸಣ್ಣ ಮಳೆಯಾಗುತ್ತಿದ್ದು, ಸಂಜೆಯಾಗುತ್ತಿದ್ದಂತೆ ಮಳಯ ಪ್ರಮಾಣ ಹೆಚ್ಚಾಗುತ್ತಿದೆ. ಇನ್ನೆರಡು ದಿನ ಸೂರ್ಯ ಕಾಣುವುದು ಅನುಮಾನವಾಗಿದೆ.

      Depression in Bay of Bengal: Rainfall in Bengaluru and surrounding district

      ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇತ್ತೀಚೆಗೆ ಗಜ ಚಂಡ ಮಾರುತ ದಾಳಿ ಇಂದಾಗಿ ತಮಿಳುನಾಡು ತತ್ತರಿಸಿತ್ತು. 45 ಮಂದಿ ಮೃತಪಟ್ಟಿದ್ದರು. ಅಲ್ಲಿ ಗಜ ಚಂಡ ಮಾರುತ ಪ್ರಮಾಣ ಕಡಿಮೆಯಾಗಿದ್ದರೂ ಕೂಡ ಮಳೆಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ.

      ಅಕ್ಟೋಬರ್‌ನಿಂದ ಇಲ್ಲಿಯವರೆಗೆ ವಾಡಿಕೆಯಂತೆ 204.4 ಮಿಮೀ ಮಳೆಯಾಗಬೇಕಿತ್ತು ಆದರೆ ಈ ಬಾರಿ ಹಿಂಗಾರಿಗೆ ಅನುಕೂಲಕರವಾದ ವಾತಾವರಣೆ ಇಲ್ಲದಿರುವ ಕಾರಣ 89.3 ಮಿ ಮೀ ಮಳೆಯಾಗಿದೆ.

      ಬೆಂಗಳೂರು ನಗರದಲ್ಲಿ ಗರಿಷ್ಠ 24.8ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 23.5ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 24.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಎರಡು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+