ವಾಯುಭಾರ ಕುಸಿತ: ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 08: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆ ಇಂದು ಸಂಜೆ ಅಲ್ಪ ಮಳೆಯಾಗಿದೆ, ಇದೇ ಮಳೆ ಇನ್ನೂ ಎರಡು-ಮೂರು ದಿನಗಳ ಕಾಲ ಮುಂದುವರೆಯಲಿದೆ ಎನ್ನುತ್ತಿದೆ ಹವಾಮಾನ ಇಲಾಖೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಇದರ ಪರಿಣಾಮವಾಗಿ ರಾಜ್ಯದಲ್ಲಿ ಎರಡು-ಮೂರು ದಿನ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಿಸಿನಿಂದ ಬೆಂದಿದ್ದ ರಾಜ್ಯಕ್ಕೆ ಇದು ಸಿಹಿ ಸುದ್ದಿಯಾಗಿದ್ದು, ಎರಡು-ಮೂರು ದಿನಗಳ ಕಾಲ ವಾತಾವರಣ ತಂಪಾಗಿರಲಿದೆ, ಸತತ ಬಿಸಿಲಿನಿಂದ ಬೆಂದಿದ್ದ ಜನಕ್ಕೆ ತಂಪಿನ ಅನುಭವ ಆಗಲಿದೆ.

Depression in sea, likely to rain in Karnataka

ಇಂದು ಬೆಂಗಳೂರಿನ ಹಲವೆಡೆ ಮಳೆಯಾಗಿದ್ದು, ಯುಗಾದಿ ವರ್ಷಾರಂಭದ ಮೊದಲ ಮಳೆ ನಗರ ವಾಸಿಗಳಲ್ಲಿ ಉಲ್ಲಾಸ ತಂದಿದೆ.

ಕರ್ನಾಟಕ ಮಾತ್ರವಲ್ಲದೆ, ತಮಿಳುನಾಡು, ಆಂಧ್ರಪ್ರದೇಶ, ಕೇರಳಗಳಲ್ಲೂ ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+