• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಡಿಸಿಎಂ ಅಶ್ವತ್ಥನಾರಾಯಣಗೆ ಕೊರೊನಾ ವೈರಸ್ ಪಾಸಿಟಿವ್

|

ಬೆಂಗಳೂರು, ಸೆಪ್ಟೆಂಬರ್ 19: ಉಪ ಮುಖ್ಯಮಂತ್ರಿ ಸಿ.ಎನ್ ಅಶ್ವತ್ಥನಾರಾಯಣ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಸಂಗತಿಯನ್ನು ಸ್ವತಃ ಅಶ್ವತ್ಥನಾರಾಯಣ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

   ಉಪ ಮುಖ್ಯಮಂತ್ರಿ C.S Ashwathnarayan ಅವರಿಗೂ Covid Positive | Oneindia Kannada

   ತಮ್ಮಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಮನೆಯಲ್ಲಿಯೇ ಕ್ವಾರೆಂಟೈನ್ ಆಗಿ ಚಿಕಿತ್ಸೆ ಪಡೆಯುವುದಾಗಿ ಅವರು ತಿಳಿಸಿದ್ದಾರೆ.

   'ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ' ಎಂದು ಅವರು ಮಾಹಿತಿ ನೀಡಿದ್ದಾರೆ.

   'ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ' ಎಂದು ಟ್ವಿಟ್ಟರ್‌ನಲ್ಲಿ ಅವರು ಮನವಿ ಮಾಡಿದ್ದಾರೆ.

   ಕರ್ನಾಟಕದಲ್ಲಿ ಸೋಮವಾರದಿಂದ ಹತ್ತು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲ ಶಾಸಕರು ಹಾಗೂ ಅಧಿಕಾರಿಗಳು ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಲಾಗಿದೆ. ಅದರಂತೆ ಡಿಸಿಎಂ ಅಶ್ವತ್ಥ್ ನಾರಾಯಣ ಕೂಡ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು.

   English summary
   Deputy CM Ashwath Narayan Tested Positive for Covid-19, he is asymptomatic and in hime quarantine.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X