ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಎಸಿಬಿ ದಾಳಿ ಬಳಿಕ ಬೆಂಗಳೂರು ನಗರ ಡಿಸಿ ಎತ್ತಂಗಡಿ

|
Google Oneindia Kannada News

ಬೆಂಗಳೂರು, ಜುಲೈ 01; ಎಸಿಬಿ ದಾಳಿಯ ಬಳಿಕ ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್‌ರನ್ನು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕಳೆದ ಮೇ 21ರಂದು ಬೇಗೂರು ನಿವಾಸಿ ಅಜಂ ಪಾಷಾ ಎಂಬುವವರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದರು.

ಎಸಿಬಿ ದಾಳಿ: ಕೋಟಿ ಕೋಟಿ ಮೌಲ್ಯ ತೂಗಿದ ಬಿಡಿಎ ಎಸಿಬಿ ದಾಳಿ: ಕೋಟಿ ಕೋಟಿ ಮೌಲ್ಯ ತೂಗಿದ ಬಿಡಿಎ

ಆನೇಕಲ್ ತಾಲೂಕಿನ ಕೊಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅನುಕೂಲಕರ ಆದೇಶ ನೀಡುವುದಕ್ಕಾಗಿ ಲಂಚ ಪಡೆಯುತ್ತಿದ್ದರು ಎಂದು ತಿಳಿದು ಬಂದಿತ್ತು.

ಕೈಯಲ್ಲಿ ಝಣ ಝಣ ಕಾಂಚಾಣ.. ಉಪತಹಸೀಲ್ದಾರ್ ಎಸಿಬಿ ಬಲೆಗೆ..ಕೈಯಲ್ಲಿ ಝಣ ಝಣ ಕಾಂಚಾಣ.. ಉಪತಹಸೀಲ್ದಾರ್ ಎಸಿಬಿ ಬಲೆಗೆ..

 Deputy Commissioner Of Bengaluru City J Manjunath Transferred

ಜೂನ್ 22ರಂದು ಮಂಜುನಾಥ್ ವಿಚಾರಣೆ: ಕಳೆದ ಜೂನ್ 22ರಂದು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅನ್ನು ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೂರನೇ ಆರೋಪಿ ಆಗಿ ಅವರನ್ನು ಪರಿಗಣಿಸುವಂತೆ ವರದಿಯನ್ನು ಸಲ್ಲಿಸಿತ್ತು.

Breaking: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪತಹಸೀಲ್ದಾರ್ ಎಸಿಬಿ ಬಲೆಗೆ Breaking: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪತಹಸೀಲ್ದಾರ್ ಎಸಿಬಿ ಬಲೆಗೆ

ಜೂನ್ 30ರ ಗುರುವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ವಿಚಾರಣೆ ನಡೆಸಿದ ಎಸಿಬಿ ಅಧಿಕಾರಿಗಳು ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಇದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯನ್ನು ಸಹ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ತಿಳಿದು ಬಂದಿದೆ.

ದೂರುದಾರ ಅಜಂ ಪಾಷಾ ಹೇಳಿದ್ದೇನು?: "ನನ್ನ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಆದೇಶವನ್ನು ಪ್ರಕಟಿಸುವಂತೆ ಮನವಿ ಮಾಡಿಕೊಳ್ಳುವುದಕ್ಕಾಗಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ್ದೆನು. ಈ ವೇಳೆ ಅವರು ಮಹೇಶ್ ಎಂಬುವವರನ್ನು ಭೇಟಿ ಮಾಡುವಂತೆ ಸೂಚನೆ ನೀಡಿದರು. ಆದರೆ ಅವರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು," ಎಂದು ದೂರುದಾರ ಅಜಂ ಪಾಷಾ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೇ ಜಿಲ್ಲಾಧಿಕಾರಿ ಹಾಗೂ ಮಹೇಶ್ ಜೊತೆಗಿನ ಸಂಬಾಷಣೆಯನ್ನು ರಿಕಾರ್ಡ್ ಮಾಡಿಕೊಂಡಿದ್ದ ದೂರುದಾರರು ಅದನ್ನು ಎಸಿಬಿಗೆ ದೂರಿನೊಂದಿಗೆ ನೀಡಿದ್ದಾರೆ.

Recommended Video

Bill Gates ಹಂಚಿಕೊಂಡ ವಿಶೇಷ ಫೋಟೋ ನೋಡಿ ಗಾಬರಿಗೊಂಡ ಜನ | OneIndia Kannada

English summary
Karnataka government transferred Bengaluru city deputy Commissioner J. Manjunath. Anti-corruption bureau (ACB) on recently raided DC office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X