ಗರಿಗೆದರಿದ ಚಟುವಟಿಕೆ:ಉಪ ಮೇಯರ್ ಆಯ್ಕೆಗೆ ಶೀಘ್ರ ದಿನಾಂಕ
ಬೆಂಗಳೂರು, ನವೆಂಬರ್ 13: ಇತ್ತೀಚೆಗಷ್ಟೇ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ನಂತರ ಖಾಲಿ ಇರುವ ಉಪ ಮೇಯರ್ ಸ್ಥಾನಕ್ಕೆ ಶೀಘ್ರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಜತೆಗೆ ಅವಧಿ ಪೂರ್ಣಗೊಂಡಿರುವ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆಯೂ ನಡೆಯಲಿದ್ದು ಚುನಾವಣಾಧಿಕಾರಿ ಶಿವಯೋಗಿ ಕಳಸದ ಇನ್ನೆರಡು ದಿನಗಳಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.
ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಸ್ಥಾಯಿ ಸಮಿತಿ ಹಂಚಿಕೆ ಕುರಿತಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಸಭೆ ಸೇರಲಿದ್ದಾರೆ. ಸಭೆಯಲ್ಲಿ ಯಾವ ಪಕ್ಷಕ್ಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಹಾಗೂ ಯಾರಿಗೆ ಉಪ ಮೇಯರ್ ಸ್ಥಾನ ನೀಡಬೇಕು ಎನ್ನುವ ಕುರಿತು ಚರ್ಚೆ ನಡೆಸಲಿದ್ದಾರೆ.

ಚುನಾವಣಾ ದಿನಾಂಕ ಪ್ರಕಟಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈಗಾಗಲೇ ಪ್ರಾದೇಶಿಕ ಆಯುಕ್ತ ಮತ್ತು ಚುನಾವಣಾಧಿಕಾರಿ ಶಿವಯೋಗಿ ಕಳಸದ ಅವರಿಗೆ ಪತ್ರ ಬರೆದಿದ್ದಾರೆ. ನವೆಂಬರ್ 23ಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆಸಲು ನಿರ್ಧರಿಸಲಾಗಿದೆ.












Click it and Unblock the Notifications