ಗೃಹ ಸಚಿವ ಅಮಿತ್ ಶಾ ಬಗ್ಗೆ ಕಮೆಂಟ್; ಕೆಪಿಸಿಸಿ ಸದಸ್ಯನ ಬಂಧನ
ಬೆಂಗಳೂರು, ಆಗಸ್ಟ್ 03: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಕೆಪಿಸಿಸಿಯ ಸದಸ್ಯರಾಗಿದ್ದಾರೆ.
Recommended Video
ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆನಂದ್ ಪ್ರಸಾದ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಭಾನುವಾರ ಅಮಿತ್ ಶಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ಖಚಿತವಾಗಿತ್ತು.
ಈ ಕುರಿತು ಟ್ವೀಟ್ ಮಾಡಿದ್ದ ಆನಂದ್ ಪ್ರಸಾದ್ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಬಂಧಿಸಲಾಗಿದೆ.

ಆನಂದ್ ಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರಾಗಿದ್ದಾರೆ. ಕೆಪಿಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿದ್ದಾರೆ. ಕೆ. ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂದು ತಿಳಿದುಬಂದಿದೆ.
ಅಮಿತ್ ಶಾ ಆರೋಗ್ಯ ಸ್ಥಿತಿಯ ಬಗ್ಗೆ ಕೆಲವರು ಟ್ವೀಟ್‌ಗಳನ್ನು ಮಾಡಿದ್ದಾರೆ. ಈ ಟ್ವೀಟ್‌ಗಳಿಗೆ ಆನಂದ್ ಪ್ರಸಾದ್ ಅವಹೇಳನಕಾರಿ ಕಮೆಂಟ್ ಹಾಕಿದ್ದಾರೆ. ಪೊಲೀಸರು ಈ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೋವಿಡ್ 19 ಸೋಂಕು ತಗುಲಿದ್ದು ಭಾನುವಾರ ಖಚಿತವಾಗಿತ್ತು. ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಮಿತ್ ಶಾಗೆ ಕೊರೊನಾ ವೈರಸ್ ಸೋಂಕು ತಗುಲಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ.












Click it and Unblock the Notifications