Get Updates
Get notified of breaking news, exclusive insights, and must-see stories!

Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು

ಬೆಂಗಳೂರು: ದಶಕಗಳ ಕನಸಿನಂತೆ ಕಾಶಿಯಾತ್ರೆಗೆಂದು ಸಂಭ್ರಮದಿಂದ ಹೊರಟಿದ್ದ ತಂಡವೊಂದಕ್ಕೆ ವಿಧಿ ಅಟ್ಟಹಾಸ ಮೆರೆದಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಿಪಟೂರಿನ ಮೂವರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ತುಮಕೂರು ಜಿಲ್ಲೆಯ ತಿಪಟೂರು ನಗರದ ವಿದ್ಯಾನಗರ ಬಡಾವಣೆಯ ನಿವಾಸಿಗಳಾದ ಗಂಗಮ್ಮ (38), ಜಯಮ್ಮ (65) ಹಾಗೂ ಯಶೋದಮ್ಮ (60) ಮೃತಪಟ್ಟ ದುರ್ದೈವಿಗಳು. ಇವರೆಲ್ಲರೂ ಒಂದೇ ಊರಿನವರಾಗಿದ್ದು, ದೀರ್ಘಕಾಲದ ಯೋಜನೆಯಂತೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ತಿಪಟೂರಿನಿಂದ ಒಟ್ಟು 13 ಜನರ ತಂಡವು 'ಸ್ತ್ರೀ ಶಕ್ತಿ' ಸಂಘದ ಚೀಟಿ ಹಣದ ಮೂಲಕ ಕಾಶಿ ಪ್ರವಾಸವನ್ನು ಯೋಜಿಸಿತ್ತು.

Devanahalli accident

ಭಾನುವಾರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ವಾರಣಾಸಿಗೆ ತೆರಳಲು ಫ್ಲೈಟ್ ಟಿಕೆಟ್ ಬುಕ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಸುಮಾರು 10 ಗಂಟೆಗೆ ತಿಪಟೂರಿನಿಂದ ಟೆಂಪೊ ಟ್ರಾವೆಲರ್ (TT) ವಾಹನದ ಮೂಲಕ ವಿಮಾನ ನಿಲ್ದಾಣಕ್ಕೆ ಹೊರಟಿದ್ದಾಗ ಈ ಘಟನೆ ಸಂಭವಿಸಿದೆ. ತಡರಾತ್ರಿ ಅಪಘಾತ ನಡೆದ ಕಾರಣ ರಸ್ತೆಯಲ್ಲಿ ಸಂಚಾರ ವಿರಳವಾಗಿತ್ತು. ಶಬ್ದ ಕೇಳಿ ಧಾವಿಸಿದ ಸ್ಥಳೀಯರು ಮತ್ತು ಪೊಲೀಸರು ಹರಸಾಹಸಪಟ್ಟು ಗಾಯಾಳುಗಳನ್ನು ಹೊರತೆಗೆದಿದ್ದಾರೆ.

ದಾರಿ ತಪ್ಪಿಸಿದ ಗೂಗಲ್ ಮ್ಯಾಪ್

ವರದಿಗಳ ಪ್ರಕಾರ ವಿಮಾನ ನಿಲ್ದಾಣದ ಟರ್ಮಿನಲ್ ದಾರಿಯ ಬಗ್ಗೆ ಚಾಲಕನಿಗೆ ಸರಿಯಾದ ಮಾಹಿತಿ ಇರಲಿಲ್ಲ. ಹೀಗಾಗಿ ಗೂಗಲ್ ಮ್ಯಾಪ್ ಹಾಕಿಕೊಂಡು ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ. ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ಸರ್ವೀಸ್ ರಸ್ತೆಗೆ ತಿರುಗಬೇಕಿದ್ದ ಮೊದಲ ಟರ್ನಿಂಗ್ ಅನ್ನು ಚಾಲಕ ಗಮನಿಸಿರಲಿಲ್ಲ. ಮ್ಯಾಪ್ ಸೂಚನೆಯಂತೆ ಮುಂದೆ ಹೋಗಿ ಯೂ-ಟರ್ನ್ ಪಡೆಯಲು ಯತ್ನಿಸಿದಾಗ, ರಸ್ತೆ ಬದಿ ನಿಂತಿದ್ದ ಲಾರಿಗೆ (ಕ್ಯಾಂಟರ್) ಟಿಟಿ ವಾಹನವು ರಭಸವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಟಿಟಿ ವಾಹನದ ಎಡಭಾಗ ಸಂಪೂರ್ಣವಾಗಿ ಜಖಂ ಆಗಿದ್ದು, ಸಿಂಗಲ್ ಸೀಟುಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಾಹನದಲ್ಲಿದ್ದ ಚಾಲಕ ಸೇರಿದಂತೆ ಉಳಿದ ಎಂಟು ಮಂದಿಗೆ ಗಾಯಗಳಾಗಿದ್ದು, ಅವರನ್ನು ದೇವನಹಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಂಪಮ್ಮ ಎಂಬುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕುಟುಂಬಸ್ಥರ ಆಕ್ರಂದನ

ಈ ಘಟನೆಯಿಂದ ತಿಪಟೂರಿನ ವಿದ್ಯಾನಗರದಲ್ಲಿ ಶೋಕದ ಛಾಯೆ ಆವರಿಸಿದೆ. ಪ್ರವಾಸದ ಸಂಭ್ರಮದಲ್ಲಿದ್ದ ಕುಟುಂಬಗಳು ಈಗ ಆಕ್ರಂದನದಲ್ಲಿ ಮುಳುಗಿವೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಈ ತಂಡದಲ್ಲಿದ್ದವರೆಲ್ಲರೂ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವರು. ತಿಪಟೂರಿನಲ್ಲಿ ಸ್ತ್ರೀ ಶಕ್ತಿ ಸಂಘಟನೆಯ ಮೂಲಕ ಸಣ್ಣ ಮೊತ್ತದ ಹಣವನ್ನು 'ಚೀಟಿ' ರೂಪದಲ್ಲಿ ಉಳಿತಾಯ ಮಾಡುತ್ತಿದ್ದರು. ಹಲವು ವರ್ಷಗಳಿಂದ ಕಾಶಿಗೆ ಹೋಗಬೇಕೆಂಬ ಕನಸು ಕಂಡಿದ್ದ ಇವರು, ಈ ವರ್ಷ ಆ ಹಣವನ್ನೆಲ್ಲ ಕ್ರೋಢೀಕರಿಸಿ ವಿಮಾನದ ಟಿಕೆಟ್ ಬುಕ್ ಮಾಡಿದ್ದರು. ಮೊದಲ ಬಾರಿಗೆ ವಿಮಾನ ಏರಲಿದ್ದೇವೆ ಎಂಬ ಸಡಗರದಲ್ಲಿದ್ದ ಇವರಿಗೆ ವಿಧಿ ಬೇರೆಯದೇ ಆಟವಾಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+