Devanahalli Airport: ವಿಮಾನ ನಿಲ್ದಾಣ ಪ್ರಾಧಿಕಾರ ಅಧ್ಯಕ್ಷ ಸ್ಥಾನ ಕೋಟಿ ಲೆಕ್ಕದಲ್ಲಿ ಮಾರಾಟ: ಗಂಭೀರ ಆರೋಪ
ಬೆಂಗಳೂರು, ಫೆಬ್ರವರಿ, 05: ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ಸಮಯದಲ್ಲೇ ರಾಜ್ಯದಲ್ಲಿ ಹನುಮ ಧ್ವಜ ಪಕ್ರರಣ ಸದ್ದು ಮಾಡುತ್ತಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ವಿಜೆಪಿ ನಡುವೆ ವಾಗ್ಯುದ್ಧಗಳು ನಡೆಯುತ್ತಲೇ ಇವೆ.
ಅಲ್ಲದೆ ಬಿಜೆಪಿ ಕಾಂಗ್ರೆಸ್‌ಗೆ ಟಕ್ಕರ್ ಕೊಡುತ್ತಲೇ ಇದೆ. ಜೊತೆಗೆ ಗಂಭೀರ ಆರೋಪಗಳನ್ನು ಸಹ ಮಾಡುತ್ತಿದೆ. ಇದೀಗ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೋಟಿಗಳಲ್ಲಿ ಮಾರಾಟವಾಗುತ್ತಿದೆ ಎನ್ನುವ ಆರೋಪವೊಂದು ಕೇಳಿಬಂದಿದೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೋಟಿಗಳಲ್ಲಿ ಮಾರಾಟವಾಗುತ್ತಿದೆ ಎಂಬ ಅನುಮಾನ ಇದೆ. ಈ ಕುರಿತು ತನಿಖೆ ಆಗಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಭಾನುವಾರ (ಫೆಬ್ರವರಿ 04) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರ ಸ್ಥಾನ ಕುರಿತು ದೂರು ದಾಖಲಿಸಲಾಗುವುದು. ಸಮಗ್ರ ತನಿಖೆ ಮಾಡದಿದ್ದರೆ, ಪ್ರತಿಭಟನೆ ನಡೆಸಲಾಗುವುದು ಎಂದು ವಾರ್ನ್ ಮಾಡಿದರು ಅಂತಾ ಪ್ರಜಾವಾಣಿ ವರದಿ ಮಾಡಿದೆ.
ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ತುಂಬುತ್ತಿದ್ದಾರೆ. ಈ ಮೂಲಕ ಪಕ್ಷದ ಆಂತರಿಕ ಕಲಹಗಳನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಇನ್ನು ಕಾಂಗ್ರೆಸಿಗರು ರಾಜ್ಯದ ಮುಖ್ಯಮಂತ್ರಿ ಆಗಬೇಕಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿ, ಇಳಿವಯಸ್ಸಿನಲ್ಲಿ ಅವರನ್ನು ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಲೇವಡಿ ಮಾಡಿದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಓಬದೇನಹಳ್ಳಿ ಮುನಿಯಪ್ಪ, ವಿನಯ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅಲ್ಲದೆ ಎಲ್ಲಿ ರಾಮನ ವಿಚಾರ ಇರುತ್ತದೆಯೋ ಅಲ್ಲಿ ಹನುಮ ಧ್ವಜ ಹಾರಾಡುತ್ತದೆ. ಆದರೆ ಧಾರ್ಮಿಕ ಭಾವನೆಗೆ ಧಕ್ಕೆ ತಂದು, ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಿರುವುದು ಖಂಡನೀಯವಾಗಿದೆ. ರಾಜ್ಯದಲ್ಲಿ ಹಿಂದುತ್ವ ವಿರೋಧಿ ವಾತಾವರಣ ಸೃಷ್ಟಿಯಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆಕ್ರೋಶ ಹೊರಹಾಕಿದರು.












Click it and Unblock the Notifications