ಜೆಡಿಎಸ್ ತೊರೆದಿದ್ದ ಮಾಜಿ ಶಾಸಕ ಬಿಜೆಪಿ ಸೇರ್ಪಡೆ

ಬೆಂಗಳೂರು, ಮಾರ್ಚ್ 01; ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಬಿಜೆಪಿ ಸೇರಿದರು. 2013ರಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಿಳ್ಳಮುನಿಶಾಮಪ್ಪ ಗೆಲುವು ಸಾಧಿಸಿದ್ದರು.

ಮಂಗಳವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದೇವನಹಳ್ಳಿ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಚಿವ ಡಾ. ಕೆ.‌ ಸುಧಾಕರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಸಂಸದ ಪಿ. ಸಿ. ಮೋಹನ್ ಮುಂತಾದವರು ಉಪಸ್ಥಿತರಿದ್ದರು.

Devanahalli Former MLA Pillamunishamappa Joins BJP

2017ರಲ್ಲಿ ತಮ್ಮ ಅಭಿಪ್ರಾಯಕ್ಕೆ ಪಕ್ಷದಲ್ಲಿ ಯಾವುದೇ ಮನ್ನಣೆ ಸಿಗುತ್ತಿಲ್ಲ ಎಂದು ಆರೋಪಿಸಿ ಶಾಸಕ ಪಿಳ್ಳಮುನಿಶಾಮಪ್ಪ ರಾಜೀನಾಮೆ ನೀಡಿದ್ದರು. ಜೆಡಿಎಸ್‌ಗೆ ನಿಸರ್ಗ ನಾರಾಯಣಸ್ವಾಮಿ ಸೇರಿಸಿಕೊಂಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

2013ರ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ದೇವನಹಳ್ಳಿಯಲ್ಲಿ ಪಿಳ್ಳಮುನಿಶಾಮಪ್ಪ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 70,323 ಮತಗಳನ್ನು ಪಡೆದು ಗೆಲುವು ಕಂಡಿದ್ದರು.

2018ರ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಪಿಳ್ಳಮುನಿಶಾಮಪ್ಪಗೆ ಜೆಡಿಎಸ್ ಟಿಕೆಟ್ ಕೈ ತಪ್ಪಿತ್ತು. ಬಳಿಕ ಅವರು ರಾಜಕೀಯದಿಂದ ದೂರವೇ ಉಳಿದಿದ್ದರು. 2023ರ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬಿಜೆಪಿ ಸೇರಿದ್ದಾರೆ.

ಪಿಳ್ಳಮುನಿಶಾಮಪ್ಪ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹರಡಿದ್ದವು. ಕೆಲವು ದಿನಗಳ ಹಿಂದೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಯಲ್ಲಿ ಸರ್ಕಾರಿ ಶಾಲೆ ಉದ್ಘಾಟನೆ ಕಾರ್ಯಕ್ರಮವಿತ್ತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಜೊತೆ ಪಿಳ್ಳಮುನಿಶಾಮಪ್ಪ ಮಾತುಕತೆ ನಡೆಸಿದ್ದರು. ಈ ವೇಳೆ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆದಿದ್ದು, ಮಂಗಳವಾರ ಬಿಜೆಪಿ ಸೇರಿದ್ದಾರೆ.

ಪಿಳ್ಳಮುನಿಶಾಮಪ್ಪ ಕಳೆದ ವರ್ಷವೇ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅವರು ರಾಜಕೀಯದಿಂದ ದೂರ ಉಳಿದಿದ್ದರು. ಈ 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ನಾಯಕರು ಹೆಚ್ಚಿದ್ದಾರೆ. ಈಗಾಗಲೇ ಮಾಜಿ ಶಾಸಕರಾದ ಮಧು ಬಂಗಾರಪ್ಪ, ಎನ್‌. ಎಚ್. ಕೋನರಡ್ಡಿ ಕಾಂಗ್ರೆಸ್ ಸೇರಿದ್ದಾರೆ. ಶಿವಮೊಗ್ಗ ಜಿಲ್ಲಾ ಜೆಡಿಎಸ್‌ ಅಧ್ಯಕ್ಷರಾಗಿದ್ದ ಆರ್. ಎಂ. ಮಂಜುನಾಥ ಗೌಡ ಸಹ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ, ಕಡೂರು ಕ್ಷೇತ್ರದ ಮಾಜಿ ಶಾಸಕ ವೈ. ಎಸ್. ವಿ. ದತ್ತಾ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+