ಸರ್ಕಾರಿ ನಿಯಮ ಉಲ್ಲಂಘಿಸಿದ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ದೇವನಹಳ್ಳಿ, ಜುಲೈ.19: ಶಾಸಕರೊಬ್ಬರು ಸರ್ಕಾರಿ ನಿಯಮ ಉಲ್ಲಂಘಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ. ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ತಾಲೂಕು ಕಚೇರಿಯಲ್ಲಿ ತಮಗೆ ನೀಡಿದ ಶಾಸಕರ ಕಚೇರಿಯನ್ನು ಉದ್ಘಾಟನೆ ಮಾಡಿದರು.

ಉದ್ಘಾಟನೆಯ ಬಳಿಕ ಅಲ್ಲಿಗೆ ಬಂದಿದ್ದ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಹಾಕಿಸಿದರು. ಸರ್ಕಾರಿ ಕಚೇರಿಯಲ್ಲಿಯೇ ಪಕ್ಷದ ಕಾರ್ಯಕರ್ತರಿಗೆ ಬಾಡೂಟ ಹಾಕಿಸುವ ಮೂಲಕ ಎರಡು ನಿಬಂಧನೆಗಳನ್ನು ದೇವನಹಳ್ಳಿ ಶಾಸಕರು ಬ್ರೇಕ್ ಮಾಡಿದ್ದಾರೆ.

ಮೊದಲನೆಯದು ಸರ್ಕಾರಿ ಕಚೇರಿಯಲ್ಲಿ ಬಾಡೂಟ ವ್ಯವಸ್ಥೆ ಮಾಡಿದ್ದು, ಎರಡನೆಯದು ಸರ್ಕಾರಿ ಕಚೇರಿ ದುರುಪಯೋಗ ಮಾಡಿಕೊಂಡು ಕಾರ್ಯಕರ್ತರಿಗೆ ಊಟ ಹಾಕಿಸಿದ್ದು. ಈ ಮೂಲಕ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಕಾನೂನು ಉಲ್ಲಂಘನೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

Devanahalli MLA Nisarga Narayanaswamy has violated the governments rule

2018ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಜೆಡಿಎಸ್ ನ ನಿಸರ್ಗ ನಾರಾಯಣಸ್ವಾಮಿ, ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ವಿರುದ್ಧ 17,010 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+