ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸಭೆ ಕಲಾಪ ವರದಿಗೆ ಮಾಧ್ಯಮಕ್ಕೆ ನಿರ್ಬಂಧ: ದೇವೇಗೌಡ ಖಂಡನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11: ಕರ್ನಾಟಕದ ವಿಧಾನಸಭಾ ಅಧಿವೇಶನಲ್ಲಿ ಮಾಧ್ಯಮದವರನ್ನು ನಿಯಂತ್ರಿಸುವ ಪ್ರಯತ್ನ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

Assembly Session Day 2 Live Updates: ಸರ್ಕಾರದ ವರ್ತನೆ ವಿರುದ್ಧ ಸಿದ್ದರಾಮಯ್ಯ ಗುಡುಗುAssembly Session Day 2 Live Updates: ಸರ್ಕಾರದ ವರ್ತನೆ ವಿರುದ್ಧ ಸಿದ್ದರಾಮಯ್ಯ ಗುಡುಗು

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕ ವಿಧಾನಸಭಾಧ್ಯಕ್ಷರ ಈ ಕ್ರಮವನ್ನು ನಾನು ಖಂಡಿಸುತ್ತೇನೆ ಮತ್ತು ಪ್ರಜಾಪ್ರಭುತ್ವ ವಿರೋಧಿಯಾದ ಈ ಆದೇಶವನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸುತ್ತೇನೆ ಎಂದಿದ್ದಾರೆ.

Deve Gowda Objection Over Speaker Decision

ಪತ್ರಿಕಾ ಪ್ರಕಟಣೆಯನ್ನೂ ಕೂಡ ಬಿಡುಗಡೆ ಮಾಡಿರುವ ಅವರು, 'ನಮ್ಮ ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯವು ನಾವು ಒಪ್ಪಿ ನಡೆದುಕೊಂಡು ಬಂದ ದಾರಿಯಾಗಿರುತ್ತದೆ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಪತ್ರಿಕಾ ಸ್ವಾತಂತ್ರ್ಯ ಅನಿವಾರ್ಯವಾಗಿರುತ್ತದೆ' ಎಂದು ತಿಳಿಸಿದ್ದಾರೆ.

ಪತ್ರಕರ್ತರನ್ನು ಅಥವಾ ಪತ್ರಿಕಾ ಸ್ವಾತಂತ್ರ್ಯವನ್ನು ನಿರ್ಭಂದಿಸುವ ಯಾವುದೇ ಪ್ರಯತ್ನ ಸರಿಯಾದ ಕ್ರಮವಲ್ಲ. ಕರ್ನಾಟಕ ವಿಧಾನಸಭಾ ಅಧಿವೇಶದನಲ್ಲಿ ಮಾಧ್ಯಮದವರನ್ನು ನಿಯಂತ್ರಿಸುವ ಪ್ರಯತ್ನ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

'ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರ ಕ್ರಮವನ್ನು ನಾನು ಖಂಡಿಸುತ್ತೇನೆ ಮತ್ತು ಈ ಜನ ವಿರೋಧಿ ಆದೇಶವನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸುತ್ತಿದ್ದೇನೆ' ಎಂದಿದ್ದಾರೆ.

English summary
Former Prime Minister Deve Gowda objection on the Karnataka Speaker's decision for banning of national and regional private TV channels from telecasting the proceedings of the Karnataka Assembly live.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X