Basavanagudi: ಬೆಂಗಳೂರಿನ ಬಸವನಗುಡಿ ಗೆಲ್ಲಲು ರಣತಂತ್ರ ರೂಪಿಸಿದ ಎಚ್. ಡಿ. ದೇವೇಗೌಡ!
ಬೆಂಗಳೂರು, ಏಪ್ರಿಲ್ 22; ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರ ಕ್ಷೇತ್ರದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮೂರು ಪಕ್ಷಗಳು ತಂತ್ರ ರೂಪಿಸುತ್ತಿವೆ. ಮೇ 10ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಗಿದಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಪಕ್ಷಗಳು ಪ್ರಚಾರದ ಕಡೆ ಹೆಚ್ಚು ಗಮನ ನೀಡಿವೆ.
ಬೆಂಗಳೂರು ನಗರದ ಪ್ರತಿಷ್ಠಿತ ಕ್ಷೇತ್ರವಾದ ಬಸವನಗುಡಿ ಗೆಲ್ಲಲು ಮೂರು ಪಕ್ಷಗಳ ತಂತ್ರ ಹಣಿಯುತ್ತಿವೆ. ಬಿಜೆಪಿಯಿಂದ ಹಾಲಿ ಶಾಸಕ ರವಿ ಸುಬ್ರಮಣ್ಯ, ಕಾಂಗ್ರೆಸ್‌ನಿಂದ ಯುಬಿ ವೆಂಕಟೇಶ್, ಜೆಡಿಎಸ್‌ನಿಂದ ಅರಮನೆ ಶಂಕರ್ ಕಣದಲ್ಲಿದ್ದಾರೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಅಲ್ಲದೇ ಅವರು ಪ್ರಚಾರ ಆರಂಭಿಸಿದ್ದರು.

ನಗರದ ಪುರಾತನ ಬಡಾವಣೆಗಳಲ್ಲಿ ಒಂದು ಬಸವನಗುಡಿ. ಕ್ಷೇತ್ರದ ಒಟ್ಟು ಮತದಾರರು ಅಂದಾಜು 2,45,325. ಕಳೆದ ಮೂರು ಚುನಾವಣೆಯಲ್ಲಿಯೂ ಬಿಜೆಪಿಯೇ ಇಲ್ಲಿ ಗೆದ್ದಿದೆ. 15 ಚುನಾವಣೆಗಳಲ್ಲಿ 5 ಸಲ ಬಿಜೆಪಿ, 4 ಸಲ ಕಾಂಗ್ರೆಸ್, ಜನತಾ ಪಕ್ಷ 3, ಜನತಾದಳ 2 ಬಾರಿ ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಇಲ್ಲಿ ಗೆಲ್ಲಲೇ ಬೇಕು ಎಂದು ಜೆಡಿಎಸ್ ಪಣ ತೊಟ್ಟಿದೆ.
ಎಚ್. ಡಿ. ದೇವೇಗೌಡರ ತಂತ್ರ; ಬಸವನಗುಡಿ ಕ್ಷೇತ್ರದಲ್ಲಿ ಬ್ರಾಹ್ಮಣ, ಮಡಿವಾಳ, ಉಪ್ಪಾರ ಮತ್ತು ಒಕ್ಕಲಿಗರ ಮತಗಳು ಅಧಿಕವಾಗಿದೆ. ಆದ್ದರಿಂದ ಈ ಬಾರಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸೂಚನೆ ನೀಡಿದ್ದಾರೆ. ಅವರ ಸೂಚನೆಯಂತೆಯೇ ನಗರದ ಖಾಸಗಿ ಹೋಟೆಲ್‌ನಲ್ಲಿ ಮಡಿವಾಳ, ಉಪ್ಪಾರ ಮತ್ತು ಬ್ರಾಹ್ಮಣ ಸಮುದಾಯದ ಸಭೆ ನಡೆಸಲಾಗಿದೆ.
2013 ಮತ್ತು 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರವಿ ಸುಬ್ರಮಣ್ಯ ಗೆಲುವು ಸಾಧಿಸಿದರು. ಆದರೆ ಬಸವನಗುಡಿಯಲ್ಲಿ 2ನೇ ಸ್ಥಾನ ಪಡೆದಿದ್ದು ಕಾಂಗ್ರೆಸ್ ಅಲ್ಲ, ಜೆಡಿಎಸ್. ಇದೇ ಕಾರಣಕ್ಕೆ ಈ ಬಾರಿ ಕ್ಷೇತ್ರದಲ್ಲಿ ಪಕ್ಷದ ಬಾವುಟ ಹಾರಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ. ಇದಕ್ಕಾಗಿಯೇ ಎಚ್. ಡಿ. ದೇವೇಗೌಡರು ಸಲಹೆಗಳನ್ನು ನೀಡಿದ್ದಾರೆ.
ಕ್ಷೇತ್ರದಲ್ಲಿ 2013ರಲ್ಲಿ ಜೆಡಿಎಸ್‌ನ ಕೆ. ಬಾಗೇಗೌಡ 24,163 ಮತ್ತು 2018ರ ಚುನಾವಣೆಯಲ್ಲಿ 37,909 ಮತಗಳನ್ನು ಪಡೆದು ಜಯಗಳಿಸಿದ್ದರು. ಕ್ಷೇತ್ರದಲ್ಲಿ ಒಂದಷ್ಟು ಶ್ರಮ ಹಾಕಿದರೆ ಗೆಲ್ಲಬಹುದು ಎಂಬುದು ಎಚ್. ಡಿ. ದೇವೇಗೌಡರ ಲೆಕ್ಕಾಚಾರವಾಗಿದೆ. ಆದ್ದರಿಂದ ಅವರು ಬ್ರಾಹ್ಮಣ, ಮಡಿವಾಳ, ಉಪ್ಪಾರ ಸಮುದಾಯಗಳ ನಾಯಕರ ಸಭೆ ನಡೆಸಿ ಚುನಾವಣೆಯಲ್ಲಿ ಶ್ರಮವಹಿಸಿ ಕೆಲಸ ಮಾಡಲು ಸೂಚನೆ ನೀಡುವಂತೆ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.
ಈ ಬಾರಿಯ ಚುನಾವಣೆಯನ್ನು ಕಾಂಗ್ರೆಸ್ ಸಹ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಪಕ್ಷದ ಟಿಕೆಟ್‌ಗಾಗಿ ವಿಧಾನ ಪರಿಷತ್ ಸದಸ್ಯ ಮತ್ತು ಬ್ರಾಹ್ಮಣ ಸಮುದಾಯದ ಯು. ಬಿ. ವೆಂಕಟೇಶ್ ಮತ್ತು ಕೆಪಿಸಿಸಿ ವಕ್ತಾರ ಡಾ. ಶಂಕರ್ ಗುಹಾ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಯು. ಬಿ. ವೆಂಕಟೇಶ್ ಟಿಕೆಟ್ ಪಡೆಯುವಲ್ಲಿ ಸಫಲರಾದರು. ಈಗ ಉಭಯ ನಾಯಕರು ಸೇರಿಕೊಂಡು ಪ್ರಚಾರದ ಭರಾಟೆ ಹೆಚ್ಚಿಸಿದ್ದಾರೆ.
ಕ್ಷೇತ್ರದ ಹಾಲಿ ಶಾಸಕ ರವಿ ಸುಬ್ರಮಣ್ಯ ವಿರುದ್ಧ ಬಿಜೆಪಿಯಲ್ಲಿಯೇ ಅಸಮಾಧಾನವಿದೆ. ಇದರ ಲಾಭವನ್ನು ಪಡೆದುಕೊಂಡು ಗೆಲುವಿಗೆ ದಾರಿ ಹುಡುಕುವುದು ಜೆಡಿಎಸ್‌ನ ಪ್ರಯತ್ನವಾಗಿದೆ. ಕಾಂಗ್ರೆಸ್ ಪಕ್ಷ 2008ರಲ್ಲಿ 37,094. 2013ರಲ್ಲಿ 21,588 ಮತ್ತು 2018ರಲ್ಲಿ ಕೇವಲ 11,767 ಮತಗಳನ್ನು ಪಡೆದಿತ್ತು. ಈ ಹಿನ್ನಲೆಯಲ್ಲಿ ಈ ಬಾರಿ ಕ್ಷೇತ್ರದಲ್ಲಿ ಗೆಲ್ಲಲೇಬೇಕು ಎಂದು ತಂತ್ರ ರೂಪಿಸಿಯೇ ಚುನಾವಣಾ ಕಣಕ್ಕಿಳಿದಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications