ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಜಿ & ಐಜಿಪಿ ಕಚೇರಿ ಪೊಲೀಸ್‌ ಸಿಬ್ಬಂದಿಗೆ ಕೊರೊನಾ ಸೋಂಕು

|
Google Oneindia Kannada News

ಬೆಂಗಳೂರು, ಜೂನ್ 01 : ಬೆಂಗಳೂರಿನಲ್ಲಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿನ ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಭಾನುವಾರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಡಿಜಿ & ಐಜಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್‌ಗೆ ಸೋಂಕು ತಗುಲಿದೆ. ನಗರದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಎಲ್ಲಾ ಪೊಲೀಸರು ಸರದಿ ಪ್ರಕಾರ ಕೋವಿಡ - 19 ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ಕೊಟ್ಟೂರು ಠಾಣೆ ಸೀಲ್ ಡೌನ್; 42 ಸಿಬ್ಬಂದಿಗೆ ಕ್ವಾರಂಟೈನ್ ಕೊಟ್ಟೂರು ಠಾಣೆ ಸೀಲ್ ಡೌನ್; 42 ಸಿಬ್ಬಂದಿಗೆ ಕ್ವಾರಂಟೈನ್

ಪೊಲೀಸ್ ಕಾನ್ಸ್‌ಟೇಬಲ್ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಭಾನುವಾರ ಪಾಸೀಟಿವ್ ವರದಿ ಬಂದಿದೆ. ಈ ಕಾನ್ಸ್‌ಟೇಬಲ್ ರೋಗಿ ನಂಬರ್ 3195 ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ಅರ್ಜಿ ಸಲ್ಲಿಕೆ ಸ್ಥಗಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ಅರ್ಜಿ ಸಲ್ಲಿಕೆ ಸ್ಥಗಿತ

 DG IGP Office Police Constable Tested Positive For COVID 19

ಭಾನುವಾರ ಪೊಲೀಸ್ ಕಾನ್ಸ್‌ಟೇಬಲ್‌ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಜೊತೆ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ. ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಪತ್ತೆ ಹಚ್ಚಲಾಗುತ್ತಿದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳು ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳು

ನೃಪತುಂಗ ರಸ್ತೆಯಲ್ಲಿರುವ ಡಿಜಿ & ಐಜಿಪಿ ಕಚೇರಿ ಭದ್ರತಾ ವಿಭಾಗದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಕೆಲಸ ಮಾಡುತ್ತಿದ್ದರು. ಅವರ ಮುಖ್ಯ ಕಚೇರಿಗೆ ಬಂದಿರಲಿಲ್ಲ. ಆದರೂ ಸಂಪೂರ್ಣ ಕಟ್ಟಡವನ್ನು ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ಶಿವಾಜಿನಗರದಲ್ಲಿನ ಪೊಲೀಸ್ ವಸತಿ ಗೃಹದಲ್ಲಿದ್ದರು. ಅಲ್ಲಿಂದಲೇ ನಿತ್ಯ ಕಚೇರಿಗೆ ಸಂಚಾರ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

English summary
Police constable who working in Karnataka DG IGP office at Nrupatunga Road, Bengaluru tested positive for COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X