• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕ ರಾಜಕಾರಣದ ಮೇಲೆ ನಿಗಾ ವಹಿಸಲು ಇಬ್ಬರು ವೀಕ್ಷಕರ ನೇಮಕ

|
Google Oneindia Kannada News

ನವದೆಹಲಿ, ಜುಲೈ 26: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ರಾಜ್ಯದಲ್ಲಿ ಮುಂದಿನ ಸಿಎಂ ಪಟ್ಟದಲ್ಲಿ ಕೂರುವವರು ಯಾರು ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ರಾಜ್ಯದ ಭಾರತೀಯ ಜನತಾ ಪಕ್ಷದಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆ ಮತ್ತು ರಾಜಕೀಯ ಹೊಯ್ದಾಟಗಳ ಮೇಲೆ ನಿಗಾ ವಹಿಸುವುದಕ್ಕೆ ಕೇಂದ್ರದಿಂದ ಇಬ್ಬರು ವೀಕ್ಷಕರನ್ನು ನೇಮಿಸಲಾಗಿದೆ. ರಾಜ್ಯ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ನೇಮಕವಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನಳಿನ್ ಕುಮಾರ್‌ಗೆ ಸಿಎಂ‌ ಯೋಗ? ತಾಯಿ ಆಶೀರ್ವಾದ ಪಡೆದು ದಿಢೀರ್ ದೆಹಲಿಗೆ ಪಯಣನಳಿನ್ ಕುಮಾರ್‌ಗೆ ಸಿಎಂ‌ ಯೋಗ? ತಾಯಿ ಆಶೀರ್ವಾದ ಪಡೆದು ದಿಢೀರ್ ದೆಹಲಿಗೆ ಪಯಣ

ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ಮಂಗಳವಾರ ಬೆಳಗ್ಗೆ ಅಥವಾ ಸೋಮವಾರ ಸಂಜೆಯೇ ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯ ಬಿಜೆಪಿ ಶಾಸಕರು ಮತ್ತು ನಾಯಕರೊಂದಿಗೆ ಚರ್ಚೆ ನಡೆಸಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಆನಂತರದಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿ ಹೈಕಮಾಂಡ್ ನಾಯಕರಿಗೆ ಸಂದೇಶ ರವಾನಿಸಲಿದ್ದಾರೆ.


ಸಂಸದೀಯ ಮಂಡಳಿ ಸಭೆ ಬಳಿಕ ಸಿಎಂ ಬಗ್ಗೆ ಘೋಷಣೆ:

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಸಲಾಗುವುದು. ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ. ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿ ಸಭೆಯನ್ನು ಯಾವಾಗ ನಡೆಸಬೇಕು ಎನ್ನುವುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಈ ಸಭೆ ನಡೆಸಿದ ನಂತರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಕುರಿತು ಸ್ಪಷ್ಟ ಚಿತ್ರಣ ಹೊರ ಬೀಳಲಿದೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

Dharmendra Pradhan and Arun Singh Are Likely to Be Appoint Central Observers For Karnataka

ಕರ್ನಾಟಕ ಮುಖ್ಯಮಂತ್ರಿ ರೇಸ್ ನಲ್ಲಿ ಇರುವವರು?:

ಕರ್ನಾಟಕದಲ್ಲಿ ಬಿ ಎಸ್ ಯಡಿಯೂರಪ್ಪ ನಂತರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಹಲವು ನಾಯಕರ ಹೆಸರು ಕೇಳಿ ಬರುತ್ತಿವೆ. ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ ಅಲ್ಲದೇ ಇತ್ತೀಚಿನ ಬೆಳವಣಿಗೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶಿವಕುಮಾರ್ ಉದಾಸಿ ಹೆಸರು ಮುಂದಿನ ಮುಖ್ಯಮಂತ್ರಿ ರೇಸ್ ನಲ್ಲಿ ಕೇಳಿ ಬರುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

   ಹಂಗಾಮಿ ಮುಖ್ಯಮಂತ್ರಿಗೆ ಏನೆಲ್ಲಾ ಅಧಿಕಾರ ಇರುತ್ತೆ ಗೊತ್ತಾ? | Oneindia Kannada
   English summary
   Union Minister Dharmendra Pradhan and Karnataka BJP in-charge Arun Singh Are Likely To Be Appoint Two Central Observers For Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X