ಧಾರವಾಡ ಮಂದಿಗೆ ಗೂಡ್ ನ್ಯೂಸ್‌: ಬೆಂಗಳೂರಿಗೆ ಶಿಫ್ಟ್ ಆಗಲ್ಲ ಆಕಾಶವಾಣಿ ಕೇಂದ್ರ

ಧಾರವಾಡ: 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ವನ್ನು ರಾಜಧಾನಿ ಬೆಂಗಳೂರಿಗೆ ಸ್ಥಳಾಂತರಿಸುವ ಪ್ರಸಾರ ಭಾರತಿಯ ನಿರ್ಧಾರಕ್ಕೆ ಕೊನೆಗೂ ತಡೆ ಸಿಕ್ಕಿದೆ. ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ್ ಜೋಶಿ ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ಆಕಾಶವಾಣಿ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸುವಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ.

ಹಿನ್ನೆಲೆ ಏನು?

ಇತ್ತೀಚೆಗಷ್ಟೇ ಪ್ರಸಾರ ಭಾರತಿಯ ಸಕ್ಷಮ ಪ್ರಾಧಿಕಾರವು ಧಾರವಾಡದ ಆಕಾಶವಾಣಿ ಪ್ರಾದೇಶಿಕ ವಾರ್ತಾ ವಿಭಾಗವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ನಿರ್ಧಾರ ಕೈಗೊಂಡಿತ್ತು. ದಶಕಗಳಿಂದಲೂ ಉತ್ತರ ಕರ್ನಾಟಕದ ಧ್ವನಿಯಾಗಿ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಾಹಕವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ಕೇಂದ್ರವನ್ನು ದಿಢೀರನೆ ಶಿಫ್ಟ್ ಮಾಡುವ ನಿರ್ಧಾರಕ್ಕೆ ಈ ಭಾಗದ ಜನರಿಂದ, ಸಾಹಿತಿಗಳಿಂದ, ಕಲಾವಿದರಿಂದ ಹಾಗೂ ಕೇಳುಗರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. "ಯಾವುದೇ ಕಾರಣಕ್ಕೂ ನಮ್ಮ ಹೆಮ್ಮೆಯ ಆಕಾಶವಾಣಿ ಕೇಂದ್ರವನ್ನು ಸ್ಥಳಾಂತರಿಸಬಾರದು" ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

Dharwad Akashvani

ಜನರ ವಿರೋಧ ಹಾಗೂ ಜನಾಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ತಕ್ಷಣವೇ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಖುದ್ದಾಗಿ ಸಂಪರ್ಕಿಸಿದರು. ಧಾರವಾಡ ಪ್ರಸಾರ ಭಾರತಿ ಕೇಂದ್ರದ ಸುದೀರ್ಘ ಇತಿಹಾಸ, ಅದರ ವಿಸ್ತಾರವಾದ ಕಾರ್ಯವ್ಯಾಪ್ತಿ ಮತ್ತು ಸಾಂಸ್ಕೃತಿಕ ನಗರಿ ಧಾರವಾಡದಲ್ಲಿಯೇ ಅದನ್ನು ಮುಂದುವರಿಸುವ ಅನಿವಾರ್ಯತೆ ಮತ್ತು ಅವಶ್ಯಕತೆಯ ಬಗ್ಗೆ ಸಚಿವರ ಗಮನಕ್ಕೆ ತಂದು ಮನವರಿಕೆ ಮಾಡಿಕೊಟ್ಟರು.

ಪ್ರಲ್ಹಾದ್ ಜೋಶಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರಸಾರ ಭಾರತಿಯ ಸ್ಥಳಾಂತರದ ಆದೇಶವನ್ನು ತಡೆಹಿಡಿದಿದ್ದಾರೆ. ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವು ಎಂದಿನಂತೆ ಧಾರವಾಡದಲ್ಲಿಯೇ ತನ್ನ ಕಾರ್ಯವನ್ನು ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂತಸದ ಸುದ್ದಿಯನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಲ್ಹಾದ್ ಜೋಶಿ, "ನನ್ನ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಆದೇಶಿಸಿದ್ದಾರೆ. ಈ ಜನಪರ ನಿರ್ಧಾರಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಉತ್ತರ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು" ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಒಟ್ಟಿನಲ್ಲಿ, ಸಕಾಲಿಕ ರಾಜಕೀಯ ಇಚ್ಛಾಶಕ್ತಿ ಹಾಗೂ ಜನರ ಹೋರಾಟಕ್ಕೆ ಜಯ ಸಿಕ್ಕಿದ್ದು, ಉತ್ತರ ಕರ್ನಾಟಕದ ಜನಪ್ರಿಯ ಆಕಾಶವಾಣಿ ಪ್ರಾದೇಶಿಕ ಕೇಂದ್ರವು ತನ್ನ ತವರೂರಾದ ಧಾರವಾಡದಲ್ಲೇ ಯಥಾವತ್ತಾಗಿ ಕಾರ್ಯನಿರ್ವಹಿಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+