ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಸಾಹುಕಾರ್ ಗೆ ಗುನ್ನಾ ಕೊಟ್ಟ ಮುಖ್ಯಮಂತ್ರಿ !

|
Google Oneindia Kannada News

ಬೆಂಗಳೂರು, ಡಿಸೆಂಬರ್ 16: ಬೆಳಗಾವಿ ಸಾಹುಕಾರ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಡುವಿನ ಬಿರುಕು ಮತ್ತಷ್ಟು ಬಿಗಡಾಯಿಸಿದೆಯೇ ? ಸಚಿವ ರಮೇಶ್ ಜಾರಕಿಹೊಳಿ ಅವರ ವೇಗಕ್ಕೆ ಕಡಿವಾಣ ಹಾಕಲು ಬಿಎಸ್ ವೈ ರೂಪಿಸಿದ ತಂತ್ರವೇನು ?

ಇದನ್ನು ಪುಷ್ಠೀಕರಿಸುವ ಬೆಳವಣಿಗೆಯೊಂದು ಇತ್ತೀಚೆಗೆ ನಡೆದಿದೆ. ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ.

2020ರ ನೋಟ: ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯೇ ಸೂಪರ್ ಪವರ್!2020ರ ನೋಟ: ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯೇ ಸೂಪರ್ ಪವರ್!

ಅವತ್ತು ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ಇತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ ಭಾಗವಹಿಸಿದ್ದರು. ಅಚ್ಚರಿ ಏನೆಂದರೇ ಅವತ್ತೇ ಜಲ ಸಂಪನ್ಮೂಲ ಇಲಾಖೆ ಅಧೀನದಲ್ಲಿ ಬರುವ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ನಿರ್ದೇಶಕರ ಮಂಡಳಿಯ 16 ನೇ ಸಭೆಯನ್ನು ಮುಖ್ಯಮಂತ್ರಿಗಳು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದರು. ಈ ಜಲ ನಿಗಮಕ್ಕೆ ಅಧ್ಯಕ್ಷರು ಮುಖ್ಯಮಂತ್ರಿಗಳಾಗಿದ್ದರೆ, ಸಚಿವರಾದ ರಮೇಶ ಜಾರಕಿಹೊಳಿ ಉಪಾಧ್ಯಕ್ಷರು. ನಿರ್ದೇಶಕ ಮಂಡಳಿ ಸಭೆಯಲ್ಲಿ ಅಧ್ಯಕ್ಷರ ಜತೆಗೆ ಎಲ್ಲಾ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಉಪಾಧ್ಯಕ್ಷ ರಮೇಶ್ ಜಾರಕಿಹೊಳಿ ಪಾಲ್ಗೊಂಡಿರಲಿಲ್ಲ.

Did Rift Between Ramesh Jarkiholi and CM Yediyurappa deepen?

ಜಲ ಸಂಪನ್ಮೂಲ ಇಲಾಖೆಯ ಭಾಗವಾಗಿರುವ ವಿಶ್ವೇಶ್ವರಯ್ಯ ಜಲ ನಿಗಮದ ಉಪಾಧ್ಯಕ್ಷರೇ ನಿರ್ದೇಶಕರ ಸಭೆಯಲ್ಲಿ ಪಾಳ್ಗೊಳ್ಳದಿರುವುದು ಅಚ್ಚರಿ ಮೂಡಿಸಿತ್ತು. ಈ ಸಭೆಗೆ ಗೈರು ಹಾಜರಾಗಿದ್ದವರ ಉಲ್ಲೇಖಿಸಿ ಇವರ ಅನುಪಸ್ಥಿತಿಯಲ್ಲಿ ಸಭೆ ನಡೆಯಿತು ಎಂದು ಅನುಪಸ್ಥಿತಿ ಅಧಿಕಾರಿಗಳಾದ ಶಾಲಿನಿ ರಜನೀಶ್, ಆರ್. ಚೆಲುವರಾಜು ಹೆಸರು ಉಲ್ಲೇಖಿಸಲಾಗಿತ್ತು.

ಅದೇ ಉಪಾಧ್ಯಕ್ಷ ರಮೇಶ್ ಜಾರಕಿಹೊಳಿ ಗೈರು ಹಾಜರಾಗಿದ್ದರೂ ಅವರ ಅನುಪಸ್ಥಿಇ ಬಗ್ಗೆ ಉಲ್ಲೇಖಿಸದೇ ಸಭೆ ನಡೆಸಲಾಗಿದೆ. ಮಾತ್ರವಲ್ಲ ವಿಶ್ವೇಶ್ವರಯ್ಯ ಜಲ ನಿಗಮದ ಕೋಟ್ಯಂತರ ರೂಪಾಯಿ ಕಾಮಗಾರಿಗಳಿಗೆ ಸಭೆ ಅನುಮೋದನೆ ನೀಡಿದೆ. ರಮೇಶ್ ಜಾರಕಿಹೊಳಿ ಅನುಪಸ್ಥಿತಿಯಲ್ಲಿ ಅವರದ್ದೇ ಇಲಾಖೆಯ ನಿಗಮದ ಸಭೆ ನಡೆಸಿ ಕಾಮಗಾರಿಗಳಿಗೆ ಅನುಮೋದನೆ ನೀಡಿರುವುದು ಚರ್ಚೆಗೆ ನಾಂದಿ ಹಾಡಿದೆ.

ಜಾರಕಿಹೊಳಿ ಶ್ರಮ: ಬಿಎಸ್ ವೈ ಹೆಸರು: ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ಕೊಡಿಸಲು ಹದಿನೈದು ವರ್ಷದಿಂದ ಪ್ರಯತ್ನಿಸಲಾಗುತ್ತಿದೆ. ಆದರೆ, ಈವರೆಗೂ ಯಾವ ಸಚಿವರಿಂದಲೂ ಅದು ಸಾಧ್ಯವಾಗಿರಲಿಲ್ಲ. ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವರಾದ ಬಳಿಕ ಪದೇ ಪದೇ ದೆಹಲಿಗೆ ಹೋಗಿ ಕೇಂದ್ರದ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜಾರಕಿಹೊಳಿ ಅವರ ಒತ್ತಡಕ್ಕೆ ಮಣಿದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಭದ್ರಾ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡಲು ಸಮ್ಮತಿ ಸೂಚಿಸಿದ್ದಾರೆ.

Did Rift Between Ramesh Jarkiholi and CM Yediyurappa deepen?

ಇನ್ನೇನಿದ್ದರೂ ರಾಜ್ಯ ಸರ್ಕಾರ ಪ್ರಸ್ತಾವನೆಗೆ ಅನುಮೋದನೆ ನೀಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುವ ಹಂತದಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ದೊರತಲ್ಲಿ ಕೇಂದ್ರದಿಂದಲೇ ಯೋಜನೆ ಅನುಷ್ಠಾನಕ್ಕೆ ಹೆಚ್ಚು ಅನುದಾನ ದೊರೆಯಲಿದೆ. ರಮೇಶ್ ಜಾರಕಿಹೊಳಿ ಅವರ ಶ್ರಮದಿಂದಷ್ಟೇ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ಸಿಗಲಿದೆ.

ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಚಿವ ಸಂಪುಟದ ಅನುಮೋದನೆ ಪಡೆಯುವ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆಗೆದಕೊಂಡಿದ್ದಾರೆ. ಬೆಳಗಾವಿ ಸಾಹುಕಾರ್ ಅನುಪಸ್ಥಿತಿಯಲ್ಲಿ ಈ ತೀರ್ಮಾನ ತೆಗೆದುಕೊಂಡಿರುವುದು ಹಲವಾರು ಪ್ರಶ್ನೆ ಹುಟ್ಟುಹಾಕಿದೆ. ರಮೇಶ್ ಜಾರಕಿಹೊಳಿ ಅವರ ಪ್ರಾಮಾಣಿಕ ಪ್ರಯತ್ನದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿದ್ದು, ಯಡಿಯೂರಪ್ಪ ಅವರು ಅದನ್ನು ಹೈಜಾಕ್ ಮಾಡಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಜಲ ಸಂಪನ್ಮೂಲ ಸಚಿವರನ್ನು ದೂರ ಇಟ್ಟು ಇಂತಹ ತೀರ್ಮಾನ ತೆಗೆದುಕೊಂಡಿರುವುದು ಎಷ್ಟು ಸರಿ ? ಜಲ ಸಂಪನ್ಮೂಲ ಸಚಿವರೇ ಇಲ್ಲದೇ ಅಂತಹ ಮಹತ್ವದ ತೀರ್ಮಾನ ಮುಖ್ಯಮಂತ್ರಿಗಳು ತೆಗೆದುಕೊಂಡಿರುವ ಉದ್ದೇಶವೇನು ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

Did Rift Between Ramesh Jarkiholi and CM Yediyurappa deepen?

ಆಪರೇಷನ್ ಕಮಲ ಪಾಳಯದ ನಾಯಕರಾಗಿದ್ದ ಜಾರಕಿಹೊಳಿ ಆರಂಭದಲ್ಲಿ ಮುಖ್ಯಮಂತ್ರಿಗಳಿಗೆ ಕಂಕಳ ಕೂಸು ಆಗಿದ್ದರು. ದಿನಗಳು ಕಳೆದಂತೆ ಜಾರಕಿಹೊಳಿ ಕೇಂದ್ರ ನಾಯಕರಿಗೆ ಸಮೀಪವಾಗತೊಡಗಿದ್ದೇ, ಬಿಎಸ್ ವೈ ಆಪ್ತತೆಗೆ ಅಂತರ ಸೃಷ್ಟಿ ಮಾಡಿತ್ತು. ಇದೀಗ ಸರ್ಕಾರದ ತೀರ್ಮಾನಗಳಲ್ಲೇ ಗೋಚರವಾಗುತ್ತಿದೆ.

Recommended Video

ಇಂದು ವಿಜಯ್ ದಿವಸ್ ಆಚರಣೆ-ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎಂ ಬಿಎಸ್ವೈ | Oneindia Kannada

ಕೋಟ್ಯಾಧಿಪತಿಯಾಗಲು ನಿಮಗೆ ಇಲ್ಲಿದೆ ಅವಕಾಶ!

English summary
Dif rift between Water Resources Minister Ramesh Jarkiholi and CM BS Yediyurappa deepen. Read on to know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X