ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಟ್ಟ ರಾಜೀನಾಮೆಯನ್ನು ಸಿದ್ದರಾಮಯ್ಯ ವಾಪಸ್ ಪಡೆಯುತ್ತಾರಾ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 20: ವಿರೋಧ ಪಕ್ಷ ನಾಯಕನ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ಪಡೆಯಲು ನಿರ್ಧಾರ ಮಾಡಿದ್ದಾರಂತೆ.

ಇದುವರೆಗೂ ಬ್ರಹ್ಮ ಬಂದು ಹೇಳಿದರೂ ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಳ್ಳಲ್ಲ ಎಂದು ಹೇಳುತ್ತಲೇ ಬಂದಿದ್ದರು, ಈಗ ಯೂಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ.

ಅಮಾಯಕರ ಮೇಲೆ ಪೊಲೀಸರ ದೌರ್ಜನ್ಯ: ಸಿದ್ದರಾಮಯ್ಯಅಮಾಯಕರ ಮೇಲೆ ಪೊಲೀಸರ ದೌರ್ಜನ್ಯ: ಸಿದ್ದರಾಮಯ್ಯ

ಚುನಾವಣಾ ಉಸ್ತುವಾರಿ ಹೊತ್ತಿದ್ದ ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ ಸಿದ್ದರಾಮಯಯ್ಯರ ಕೊನೆಯ ಅಭಿಪ್ರಾಯ ಕೇಳಲು ಕರೆ ಮಾಡಿದ್ದರು, ಮಿಸ್ತ್ರಿ ಅವರಿಗೆ 10 ದಿನದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Did Siddaramaiah Withdraw His Resignation?

10 ದಿನ ಬೇಡ, ಈಗಲೇ ಹೇಳಿ ಅಂದಾಗ ನಾನು ಸದ್ಯದಲ್ಲಿಯೇ ದೆಹಲಿಗೆ ಬರುತ್ತೇನೆ, ಹೈಕಮಾಂಡ್ ಭೇಟಿ ಮಾಡಿದ ನಂತರ ವಿಪಕ್ಷ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತು ಗುಂಡೂರಾವ್ ರಾಜೀನಾಮೆ ನೀಡಲು ಇವರೇ ಕಾರಣಸಿದ್ದರಾಮಯ್ಯ ಮತ್ತು ಗುಂಡೂರಾವ್ ರಾಜೀನಾಮೆ ನೀಡಲು ಇವರೇ ಕಾರಣ

ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದಾರಾ ಎಂಬ ಪ್ರಶ್ನೆಗೆ ದೆಹಲಿಗೆ ಭೇಟಿ ಕೊಟ್ಟ ನಂತರ ಉತ್ತರ ಸಿಗಲಿದೆ. ಕಡೆ ಕ್ಷಣದಲ್ಲಿ ಯೂಟರ್ನ್ ಹೊಡೆದು ರಾಜಕೀಯ ವಿರೋಧಿಗಳಿಗೆ ಬಿಸಿ ತುಪ್ಪವಾಗಲಿದ್ದಾರಾ ಎಂದು ಕಾದು ನೋಡಬೇಕು.

English summary
Former Chief Minister Siddaramaiah has resigned from the post of Leader of the Opposition and Leader of the Congress Legislative Party as a decision to withdraw.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X