ಬೆಂಗಳೂರು ಸ್ಪೋಟಕ್ಕೆ ಸಂಚು ರೂಪಿಸಿದ್ದರಾ ಉಗ್ರರು? ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ!
ಬೆಂಗಳೂರು ಡಿಸೆಂಬರ್ 13: ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಬೆಂಗಳೂರನ್ನು ಗುರಿಯಾಗಿಸಿಕೊಂಡ ಉಗ್ರರರ ಭೇಟೆ ನಗರದಲ್ಲಿ ಮುಂದುವರೆದಿದೆ. ಈ ನಿಟ್ಟಿನಲ್ಲಿ ಇಂದು ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ಹಲವೆಡೆ ದಾಳಿ ಮಾಡಿದ್ದಾರೆ.
ಶಂಕಿತ ಭಯೋತ್ಪಾದನೆ ಸಂಬಂಧಿತ ಪ್ರಕರಣಕ್ಕೆ ಪ್ರತಿಕ್ರಿಯೆಯಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಇಂದು ಬೆಳಿಗ್ಗೆ ಬೆಂಗಳೂರಿನ ಹಲವೆಡೆ ತನಿಖೆ ನಡೆಸಿದ್ದಾರೆ. ನಗರದೊಳಗೆ ಒಟ್ಟು ಆರು ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ.

ಈ ಸ್ಥಳಗಲ್ಲಿ ಎನ್‌ಐಎ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆ ಭಯೋತ್ಪಾದಕ ಚಟುವಟಿಕೆಗಳ ಶಂಕೆಯ ಅಡಿಯಲ್ಲಿ ಬಂಧಿಸಲಾದ ಐದು ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಕ್ಕೆ ಈ ದಾಳಿಗಳು ಸಂಬಂಧಿಸಿವೆ ಎಂದು ಹೇಳಲಾಗುತ್ತಿದೆ. ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಮುದಾಸಿರ್, ಜಾಹಿದ್ ಮತ್ತು ತಬ್ರೇಜ್ ಮೊಹಮ್ಮದ್ ಉಮರ್ ಎಂಬುವವರನ್ನು ಈ ಹಿಂದೆ ಬಂಧಿಸಲಾಗಿತ್ತು.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯ ಪ್ರದೇಶದಲ್ಲಿರುವ ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ) ಜುಲೈ 1 ರಂದು ದಾಳಿ ನಡೆಸಿತ್ತು. ನಂತರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲಾಯಿತು.
ದಾಳಿ ವೇಳೆ ಎನ್‌ಐಎ ಏಳು ಪಿಸ್ತೂಲ್‌ಗಳು, 45 ಜೀವಂತ ಗುಂಡುಗಳು, ಗ್ರೆನೇಡ್‌ಗಳು ಮತ್ತು ವಾಕಿ-ಟಾಕಿಗಳ ಪತ್ತೆ ಸೇರಿದಂತೆ ಆತಂಕಕಾರಿ ಶಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ.
ಜುನೈದ್ ಎಂಬ ಶಂಕಿತ ವ್ಯಕ್ತಿ ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಬಂಧಿತ ವ್ಯಕ್ತಿಗಳಿಗೆ ಸರಣಿ ಬಾಂಬ್ ಸ್ಫೋಟಕ್ಕೆ ಯೋಜನೆ ರೂಪಿಸುವಲ್ಲಿ ತರಬೇತಿ ನೀಡುತ್ತಿರುವುದು ಬಂಧಿತರಿಂದ ಗೊತ್ತಾಗಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷವನ್ನು ಗುರಿಯಾಗಿಸಿಕೊಂಡು ಬಂಧಿತ ಉಗ್ರರು ದಾಳಿಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ.












Click it and Unblock the Notifications