Darshan Thoogudeepa: ದರ್ಶನ್ ಮಧ್ಯಂತರ ಜಾಮೀನಿಗೆ ಸಂಕಷ್ಟ: ಸುಪ್ರೀಂ ಮೇಲ್ಮನವಿಗೆ ಸರ್ಕಾರ ಒಪ್ಪಿಗೆ!
ಆರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್‌ಗೆ ಹೊಸ ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪಿ ಹಾಗೂ ನಟ ದರ್ಶನ್ ಅವರಿಗೆ ಇದೀಗ ಹೊಸ ಸಂಕಷ್ಟ ಸೃಷ್ಟಿಯಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವು ಇರುವುದರಿಂದ ಚಿಕಿತ್ಸೆಗೆಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆರು ವಾರಗಳ ಮಧ್ಯಂತ ಜಾಮೀನನ್ನು ನೀಡಲಾಗಿದೆ. ಅದರಲ್ಲಿ ಈಗಾಗಲೇ ಎರಡು ವಾರಕ್ಕೂ ಹೆಚ್ಚು ಸಮಯ ಆಗಿದೆ. ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶವನ್ನು ರದ್ದುಪಡಿಸುವುದಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ.
ಅನಾರೋಗ್ಯ ಸಮಸ್ಯೆಯ ಕಾರಣಕ್ಕೆ ಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನಿನ ಮೇಲೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿರುವ ದರ್ಶನ್‌ಗೆ ಇದೀಗ ಮತ್ತೊಂದು ಹಾಗೂ ತೀವ್ರ ಸಂಕಷ್ಟ ಎದುರಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ದರ್ಶನ್‌ಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಇದೆ ಎನ್ನಲಾಗಿದ್ದು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ದರ್ಶನ್‌ಗೆ ಬಿಗ್ ಶಾಕ್‌ಕೊಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ದರ್ಶನ್ ಅವರು ಮಧ್ಯಂತರ ಜಾಮೀನು ರದ್ದು ಮಾಡಬೇಕು ಎಂದು ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ. ಇದು ದರ್ಶನ್‌ಗೆ ಹೊಸ ಟೆಕ್ಷನ್ ಸೃಷ್ಟಿ ಮಾಡಿದೆ.
ಅಧಿಕಾರಿಗಳಿಂದ ಮನವಿ: ನಟ ದರ್ಶನ್‌ಗೆ ಆರೋಗ್ಯ ಸಮಸ್ಯೆಯಿಂದ ಹೀಗಾಗಿ, ಅವರಿಗೆ ಕೂಡಲೇ ಚಿಕಿತ್ಸೆ ಕೊಡಿಸಬೇಕು ಇಲ್ಲದಿದ್ದರೆ ಅವರಿಗೆ ಲಕ್ವಾ ಆಗುವ ಸಾಧ್ಯತೆ ಇದೆ ಎಂದು ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ (ಆಪರೇಷನ್) ಮಾಡಿಸಲೇಬೇಕು ಎಂದು ಅವರ ಪರ ವಕೀಲರು ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಈ ನಡುವೆ ರೇಣುಕಾಸ್ವಾಮಿ ಕೊಲೆ ಕೇಸ್‌ನ ತನಿಖೆ ನಡೆಸುತ್ತಿರುವ ಅಧಿಕಾರಿಗಳು ದರ್ಶನ್ ಮಧ್ಯಂತರ ಜಾಮೀನನ್ನು ರದ್ದು ಮಾಡುವುದಕ್ಕೆ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೊಡುವಂತೆ ರಾಜ್ಯ ಗೃಹ ಇಲಾಖೆಗೆ ಮನವಿ ಮಾಡಿಕೊಂಡಿತ್ತು. ರಾಜ್ಯದ ಪೊಲೀಸ ಇಲಾಖೆಯ ಮನವಿಗೆ ಗೃಹ ಇಲಾಖೆಯು ಈಗ ಅನುಮತಿ ನೀಡಿದೆ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಇಷ್ಟರಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.
ದರ್ಶನ್‌ಗೆ ಬಿಗ್‌ಶಾಕ್: ನಟ ದರ್ಶನ್ ಅವರಿಗೆ ಇದೀಗ ಪೊಲೀಸ್ ಇಲಾಖೆ ಬಿಗ್‌ಶಾಕ್ ಕೊಟ್ಟಿದ್ದಾರೆ. ಒಂದೊಮ್ಮೆ ಪೊಲೀಸ್ ಇಲಾಖೆ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿ, ಸುಪ್ರೀಂನಲ್ಲಿ ಮಧ್ಯಂತರ ಜಾಮೀನು ರದ್ದಾದರೆ, ದರ್ಶನ್ ಅವರನ್ನು ಮತ್ತೆ ಬಂಧಿಸುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿ ಜೈಲುವಾಸ ಅನುಭವಿಸಿ ಬಂದಿದ್ದಾರೆ.












Click it and Unblock the Notifications