ಡಿಜಿಟಲ್ ಇಂಡಿಯಾ ನಮ್ಮ ಜೀವನದ ಭಾಗವಾಗಿ ಬದಲಾಗಿದೆ, ಆಡಳಿತದ ಮಾದರಿಯಾಗಿದೆ: ನರೇಂದ್ರ ಮೋದಿ
ನವದೆಹಲಿ, ನವೆಂಬರ್ 19: ಭಾರತದಲ್ಲಿ ಡಿಜಿಟಲ್ ಇಂಡಿಯಾದ ಕ್ರಾಂತಿಯಿಂದಾಗಿ ನಮ್ಮ ಜೀವನದ ಭಾಗವಾಗಿ ಬದಲಾವಣೆಯಾಗಿದ್ದು, ಭೀಮ್ ಯುಪಿಐ ಸೇರಿದಂತೆ ಪಾವತಿ ಆ್ಯಪ್‌ಗಳು ಅದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
'ಬೆಂಗಳೂರು ಟೆಕ್ ಸಮ್ಮಿಟ್-2020'ನ್ನು ಡಿಜಿಟಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಇಂದು ನಾವು ಮಾಹಿತಿ ಯುಗದ ಮಧ್ಯಭಾಗದಲ್ಲಿದ್ದೇವೆ. ಈ ಯುಗದಲ್ಲಿ ಯಾರು ಮೊದಲು ಹೆಜ್ಜೆಯಿಡುತ್ತಾರೆ ಎಂಬುದು ಮುಖ್ಯವಲ್ಲ. ಯಾರು ಉತ್ತಮವಾಗಿ ಮುಂದಡಿ ಇರುತ್ತಾರೆ ಎಂಬುದು ಮುಖ್ಯ ಎಂದಿದ್ದಾರೆ.
ವರ್ಕ್ ಫ್ರಮ್ ಹೋಮ್ ಕುರಿತು ಮಾತನಾಡಿದ ಪ್ರಧಾನಿ, ಟೆಕ್ನಾಲಜಿ ಎಷ್ಟರ ಮಟ್ಟಿಗೆ ಸಹಕಾರಿ ಎಂಬುದಕ್ಕೆ ಉದಾಹರಣೆಯಾಗಿದೆ ಎಂದಿದ್ದಾರೆ. ಕುಳಿತಲ್ಲಿಯೇ ನಾನು ವಿಶ್ವದ ಬುದ್ದಿಶಾಲಿ ಟೆಕ್ ಜನರನ್ನು ಭೇಟಿಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಟೆಕ್ ಸಲಕರಣೆಗಳು ಜನರಿಗೆ ಮತ್ತಷ್ಟು ಅನುಕೂಲವನ್ನುಂಟು ಮಾಡಲಿವೆ.

ಕೈಗಾರಿಕಾ ಯುಗದಲ್ಲಿ ವಿಸ್ತರಣೆ ಗಡಿ ಸೀಮಿತವಾಗಿತ್ತು. ಆದರೆ ಮಾಹಿತಿ ಯುಗವು ಗಡಿಯನ್ನೂ ಮೀರಿದ್ದು, ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುತ್ತಿದೆ. ನಾವು ಬುದ್ದಿಶಾಲಿ ಜನರನ್ನು ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ತಲುಪಲಿದ್ದೇವೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೈಬರ್ ಭದ್ರತಾ ಪರಿಹಾರಗಳನ್ನು ಅಭಿವೃದ್ಧಿಪಡಿಸುವಲ್ಲಿ ದೇಶದ ಯುವಜನತೆ ಪ್ರಮುಖ ಪಾತ್ರ ವಹಿಸುತ್ತಾರೆ. ಈ ವಿಷಯದಲ್ಲಿ ಯುವಜನತೆಯ ಸಾಮರ್ಥ್ಯ, ಪ್ರತಿಭೆ, ಅವರಿಗೆ ಸಿಗುವ ಅವಕಾಶಕ್ಕೆ ಕೊನೆಯೇ ಇಲ್ಲ, ಅಸಾಧಾರಣವಾದ ಯುವಶಕ್ತಿಯನ್ನು ನಾವು ಬಳಸಿಕೊಳ್ಳಬೇಕು ಎಂದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications