ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊವಿಡ್ ಬೆಡ್ ಮಾಫಿಯಾ: "ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ"

|
Google Oneindia Kannada News

ಬೆಂಗಳೂರು, ಮೇ 04: ಕೊರೊನಾವೈರಸ್ ರೋಗಿಗಳಿಗೆ ನೀಡುವ ಹಾಸಿಗೆ ವಿಚಾರದಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದಾರೆ ಎಂಬುದನ್ನು ಪತ್ತೆ ಮಾಡುವಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಪ್ರದರ್ಶಿಸಿದ ನಾಟಕ ಅದ್ಭುತವಾಗಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

"ವಿಚಿತ್ರವೆಂದರೆ, ಅಧಿಕಾರದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಸರ್ಕಾರದ ಅಧೀನದಲ್ಲಿದೆ. ಹೀಗಿರುವಾಗ ಪತ್ರಿಕಾಗೋಷ್ಠಿ ಕರೆದು ನಾಟಕ ಮಾಡುವ ಬದಲು ಇವರೇ ಸಮಸ್ಯೆ ಬಗೆಹರಿಸಬಹುದಿತ್ತಲ್ಲವೇ?" ಎಂದು ಪ್ರಶ್ನೆ ಮಾಡಿದ್ದಾರೆ.

ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಅವ್ಯವಹಾರ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ

ಕೊರೊನಾವೈರಸ್ ರೋಗಿಗಳ ಹಾಸಿಗೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ವಿಚಾರದಲ್ಲಿ ಸಂಸದರ ವಿರುದ್ಧ ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ. "ಇದು ಅಧಿಕಾರಿಗಳ ಮೇಲೆ ಗೂಬೆ ಕೂರಿಸಿ ತಮ್ಮ ವೈಫಲ್ಯ ಮುಚ್ಚುವ ಯತ್ನವೆ?" ಎಂದು ಪ್ರಶ್ನೆ ಮಾಡಿದ್ದಾರೆ.

Dinesh Gundu Rao Reaction To Tejasvi Surya Unearthing BBMP Bed Blocking Scam


ಏನಿದು ಕೊವಿಡ್-19 ಬೆಡ್ ಮಾಫಿಯಾ:

ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಹಾಸಿಗೆ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿ ಅವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.

ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಸಿಸಿಬಿ ತನಿಖೆಗೆ: ಕಮಲ್ ಪಂತ್ ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ ಸಿಸಿಬಿ ತನಿಖೆಗೆ: ಕಮಲ್ ಪಂತ್

ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈವರೆಗೂ ಪ್ರಭಾವಿಗಳಿಂದ 4,065 ಹಾಸಿಗೆಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕಿಂಗ್ ವೆಬ್ ಸೈಟ್ ಗಳಲ್ಲಿ ಹಾಸಿಗೆಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

English summary
Congress Leader Dinesh Gundu Rao Reaction To BJP MP Tejasvi Surya Unearthing BBMP Bed Blocking Scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X