ಸುಮಲತಾ ಪ್ರಚಾರದಲ್ಲಿ ಕಾಂಗ್ರೆಸ್ ಬಾವುಟ: ದಿನೇಶ್ ಗುಂಡೂರಾವ್ ಗರಂ
ಬೆಂಗಳೂರು, ಏಪ್ರಿಲ್ 04: ಸುಮಲತಾ ಅಂಬರೀಶ್ ಅವರ ಪರ ಪ್ರಚಾರದಲ್ಲಿ ಕಾಂಗ್ರೆಸ್ ಬಾವುಟಗಳು ಹಾರಾಡುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪಕ್ಷೇತರ ಅಭ್ಯರ್ಥಿಪರ ಕಾಂಗ್ರೆಸ್ ಬಾವುಟ ಬಳಸುವುದನ್ನು ಪಕ್ಷ ಸಹಿಸುವುದಿಲ್ಲ, ಅಂತಹವರು ಪಕ್ಷ ಬಿಟ್ಟು ಹೋಗಬಹುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ನಡೆಯನ್ನು ಸಹಿಸುವುದಿಲ್ಲ, ಕಾಂಗ್ರೆಸ್ ಬಾವುಟ ಬಳಸಿದವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಮತ್ತು ಹಾಸನ, ಮೈಸೂರು, ತುಮಕೂರು ಕ್ಷೇತ್ರಗಳಲ್ಲಿ ಜೆಡಿಎಸ್ ಮುಖಂಡರ ಜೊತೆ ಸಿದ್ದರಾಮಯ್ಯ ಅವರು ಜಂಟಿ ಪ್ರಚಾರ ಮಾಡುತ್ತಾರೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ಪರ ಹಲವು ಕಾಂಗ್ರೆಸ್ ಮುಖಂಡರು ಬಹಿರಂಗವಾಗಿಯೇ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ. ಸುಮಲತಾ ಅವರ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬಾವುಟಗಳೆರಡೂ ಕಾಣಿಸಿಕೊಳ್ಳುತ್ತಿವೆ.












Click it and Unblock the Notifications