ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಿನೇಶ್ ಗುಂಡೂರಾವ್ ಮನೆಯಲ್ಲಿ ನಾಲ್ವರು ಸಿಬ್ಬಂದಿಗೆ ಸೋಂಕು

|
Google Oneindia Kannada News

ಬೆಂಗಳೂರು, ಜುಲೈ 7: ಕರ್ನಾಟಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಗನ್‌ಮ್ಯಾನ್ ಸೇರಿ ನಾಲ್ವರು ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ.

ಈ ಕುರಿತು ಸ್ವತಃ ಗುಂಡೂರಾವ್ ಅವರೇ ಸ್ಪಷ್ಟನೆ ನೀಡಿದ್ದು, ''ಒಬ್ಬರು ಪೊಲೀಸ್ ಸಿಬ್ಬಂದಿ, ಒಬ್ಬರು ಗನ್‌ಮ್ಯಾನ್ ಹಾಗೂ ಮನೆಯಲ್ಲಿ ಇಬ್ಬರು ಸಿಬ್ಬಂದಿಗೆ ಸೋಂಕು ತಗುಲಿದೆ'' ಎಂದು ಮಾಹಿತಿ ನೀಡಿದ್ದಾರೆ.

ದಿನೇಶ್ ಗುಂಡೂರಾವ್ ಮಗಳಿಗೆ ಕೊರೊನಾ! ಸ್ಪಷ್ಟನೆ ನೀಡಿದ ಮಾಜಿ ಸಚಿವದಿನೇಶ್ ಗುಂಡೂರಾವ್ ಮಗಳಿಗೆ ಕೊರೊನಾ! ಸ್ಪಷ್ಟನೆ ನೀಡಿದ ಮಾಜಿ ಸಚಿವ

ನೌಕರರಿಗೆ ಕೊವಿಡ್ ಸೋಂಕು ಪತ್ತೆಯಾದ ಹಿನ್ನೆಲೆ ದಿನೇಶ್ ಗುಂಡೂರಾವ್, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊರೊನಾ ಪರೀಕ್ಷೆ ಮಾಡಲಾಗಿದೆ. ಇವರೆಲ್ಲರ ವರದಿ ನೆಗಿಟಿವ್ ಬಂದಿದೆ ಎಂದು ಸ್ವತಃ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

Dinesh Gundu Rao Will Be Home Quarantined For 14days

ಮುನ್ನೆಚ್ಚರಿಕೆಯಿಂದಾಗಿ ಸರ್ಕಾರದ ನಿಯಮಗಳಂತೆ ಹದಿನಾಲ್ಕು ದಿನಗಳ ಕಾಲ ಹೋಮ್‌ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಕಾಂಗ್ರೆಸ್ ಮಾಜಿ ಸಚಿವ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ದಿನೇಶ್ ಗುಂಡೂರಾವ್ ಮನೆಯಲ್ಲಿ ಸೋಂಕು ಕಾಣಿಸಿಕೊಂಡ ಬೆನ್ನಲ್ಲೆ ಕಾಂಗ್ರೆಸ್ ನಾಯಕನ ಜೊತೆಯಲ್ಲಿ ಸಂಪರ್ಕದಲ್ಲಿದ್ದವರಿಗೆ ಆತಂಕ ಕಾಡಿದೆ. ಸದ್ಯಕ್ಕೆ ದಿನೇಶ್ ಗುಂಡೂರಾವ್ ವರದಿ ನೆಗಿಟಿವ್ ಬಂದಿರುವುದರಿಂದ ಉಳಿದ ನಾಯಕರು ಸಮಾಧಾನ ಪಡುವಂತಾಗಿದೆ.

English summary
Karnataka Congress Ex president dinesh gundu rao will be home quarantined for 14 days after his staff tested COVID19 positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X