ಅಂತೂ ಇಂತೂ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ದಿನೇಶ್ ಘೋಷಣೆ

ಬೆಂಗಳೂರು, ನವೆಂಬರ್ 14: ನವೆಂಬರ್ ತಿಂಗಳ ಅಂತ್ಯದ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಸಚಿವ ಸಂಪುಟ ವಿಸ್ತರಣೆಗೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಕಾಂಗ್ರೆಸ್ ನಾಯಕರಲ್ಲಿ ಹೊಸ ಉತ್ಸಾಹ ಮೂಡಿದ್ದು,ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜವಾಹರಲಾಲ್ ನೆಹರು ಜಯಂತಿ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಅಧ್ಯಕ್ಷರು ಈ ವಿಷಯ ಪ್ರಕಟಿಸಿದ್ದಾರೆ.

ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹಾಗೂ ಕಾಂಗ್ರೆಸ್ ಹಿರಿಯ ನಾಯಕರು ವಿದೇಶ ಪ್ರವಾಸದಲ್ಲಿದ್ದಾರೆ ಅವರು ವಾಪಸಾದ ತಕ್ಷಣವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.

Dinesh Gundurao announces cabinet expansion before end of November

ಈ ಮೂಲಕ ಕಾಂಗ್ರೆಸ್ ನಲ್ಲಿ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ಶಾಸಕರಲ್ಲಿ ಲಾಭಿ ಶುರುವಾಗಲಿದೆ. ಪ್ರಧಾನಿ ಮೋದಿ ಎಲ್ಲರನ್ನೂ ಮುಗಿಸುತ್ತಿದ್ದಾರೆ. ಅವರ ಪಕ್ಷದವರನ್ನೂ ಮುಗಿಸಿದ ಉದಾಹರಣೆ ಇದೆ. ಬಿಜೆಪಿಯಲ್ಲಿ ಉದಾರ ಚಿಂತನೆ ಇಲ್ಲ. ಬಿಜೆಪಿಗೆ ಅಪಪ್ರಚಾರವೇ ಮುಖ್ಯ. ಮಾಧ್ಯಮಗಳಿಗೂ ಸತ್ಯ ತಿಳಿಸಲು ಸಾಧ್ಯವಾಗುತ್ತಿಲ್ಲ.

ದೇಶ ಸಂವಿಧಾನ, ಸಂಸ್ಥೆಗಳನ್ನು ಬುಡಮೇಲು ಮಾಡುವ ಸರ್ವಾಧಿಕಾರ ಆಡಳಿತ ನಡೆಯುತ್ತಿದೆ. ಒಂದೇ ಧರ್ಮ ಇರಬೇಕು, ಒಂದೇ ಭಾಷೆ ಒಬ್ಬನೇ ನಾಯಕ ಇರಬೇಕೆಂಬ ಫ್ಯಾಸಿಸ್ಟ್ ಧೋರಣೆ ವಿರುದ್ಧ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+