ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಬಂಡಾಯ ಶಾಸಕರ ಜೊತೆ ಚರ್ಚೆ: ದಿನೇಶ್ ಗುಂಡೂರಾವ್ ಏನಂದ್ರು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25: ನಾನು ಯಾವುದೇ ಬಿಜೆಪಿ ಶಾಸಕರನ್ನು ಸಂಪರ್ಕಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಿಜೆಪಿಯವರು ಮಾಡಿದಂತ ಕೆಲಸವನ್ನು ನಾನು ಮಾಡುವುದಿಲ್ಲ, ನಮಗೆ ಯಾರನ್ನೋ ಕರೆದುಕೊಂಡು ಬಂದು ಟಿಕೆಟ್ ಕೊಡುವ ಉದ್ದೇಶವಿಲ್ಲ, ಗೆಲ್ಲುವ ಸಾಮರ್ಥ್ಯ ಇದ್ದವರಿಗೆ ಟಿಕೆಟ್ ನೀಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ರೀತಿ ನಾವು ಮಾಡುವುದಿಲ್ಲ, ನಮ್ಮ ಪಕ್ಷದಲ್ಲಿದಲ್ಲಿರುವ ಇಷ್ಠಾವಂತ ಕಾರ್ಯಕರ್ತರು ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕಟ್ ನೀಡುತ್ತೇವೆ, ಬಿಜೆಪಿಯ ಬಂಡಾಯ ಅಭ್ಯರ್ಥಿಗಳಾದ ಶರತ್ ಬಚ್ಚೇಗೌಡ ಹಾಗೂ ನಂದೀಶ್ ರೆಡ್ಡಿಯವರನ್ನು ಸಂಪರ್ಕಿಸಲು ನಾವು ಮುಂದಾಗಿಲ್ಲ. ಅಭ್ಯರ್ಥಿಗಳ ಆಯ್ಕೆ ಕುರಿತು ಇಂದು ಮುಖಂಡರ ಸಭೆ ನಡೆಸುತ್ತಿದ್ದೇವೆ. ನಾಳೆ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ ಎಂದು ವಿವರಿಸಿದರು.

Dinesh Gundurao Clarifies We Dont Contact BJP MLAs

ಈಗ ಉಪಚುನಾವಣೆ ಬಂದಿದೆ. ಹೀಗಾಗಿ ಕೇಂದ್ರದಿಂದ ಹಣ ತರುತ್ತೇವೆ ಎಂದು ಹೇಳುತ್ತಿದ್ದಾರೆ. ಇವರಿಗೆ ಜನರ ಬಗ್ಗೆ ಕಾಳಜಿ ಇಲ್ಲ. ಮತಕ್ಕಾಗಿ ಈಗ ಎದ್ದು ಬಿದ್ದು ಓಡಾಡುತ್ತಿದ್ದಾರೆ ಎಂದು ಸಿಎಂ ಬಿಎಸ್‍ವೈ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಹದ್ದು, ಗಿಣಿ ವಾಗ್ಯುದ್ಧ ಕುರಿತು ಪ್ರತಿಕ್ರಿಯಿಸಿದ ಅವರು, ಅದೆಲ್ಲ ದೊಡ್ಡ ವಿಷಯವೇ ಅಲ್ಲ. ಇದೀಗ ಪ್ರವಾಹ ಸಂತ್ರಸ್ತರ ಬಗ್ಗೆ ಗಮನ ನೀಡಬೇಕಿದೆ.

ಸರ್ಕಾರ ಯಾವುದೇ ಪರಿಹಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿ ಮೋದಿ ಬಳಿ ಅನುದಾನ ತರಬೇಕಿತ್ತು. ಅದನ್ನೂ ಸಿಎಂ ಯಡಿಯೂರಪ್ಪ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

English summary
KPCC President Dinesh Gundurao clarified that We sont contact BJP rebel candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X