ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಧಿವೇಶನಕ್ಕೆ ಗೈರಾದ ದಿನೇಶ್ ಗುಂಡೂರಾವ್ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಡಿಸೆಂಬರ್ 10: ಬೆಳಗಾವಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರು ಗೈರು ಬೆಳಗಾವಿ ಅಧಿವೇಶನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರು ಗೈರು

ಈ ಕುರಿತು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡಿಕೊಳ್ಳುತ್ತಿದ್ದಾರೆ, ಇದಕ್ಕೆ ದಿನೇಶ್ ಗುಂಡೂರಾವ್ ನೀಡಿದ ಉತ್ತರ ಇಲ್ಲಿದೆ ಓದಿ.. ಬೆಳಗಾವಿ ಅಧಿವೇಶನದಲ್ಲಿ ವಿರೋಧ ಪಕ್ದವರನ್ನು ಎದುರಿಸಲು ಸಮರ್ಥವಾದ ಕಾಂಗ್ರೆಸ್ ನಾಯಕರಿದ್ದಾರೆ. ಅಧಿವೇಶನದಲ್ಲಿ ಬಿಜೆಪಿಯನ್ನು ಎದುರಿಸುವ ನಾಯಕರಿದ್ದಾರೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.ಪಂಚ ರಾಜ್ಯ ಚುನಾವಣೆಗಳಲ್ಲೂ ಗೆಲುವಿನ ವಿಶ್ವಾಸ ದೊರೆತಿದೆ. ಹಾಗಾಗಿ ಧೈರ್ಯದಿಂದಲೇ ಅಧಿವೇಶನಕ್ಕೆ ಹೋಗುತ್ತೇವೆಂದು ಹೇಳಿದ್ದಾರೆ.

ಸರ್ಕಾರದ ಕಣ್ಣು ತೆರೆಸಲು ಪ್ರತಿಭಟನೆ : ಲಕ್ಷಣ್ ಸವದಿ ಸರ್ಕಾರದ ಕಣ್ಣು ತೆರೆಸಲು ಪ್ರತಿಭಟನೆ : ಲಕ್ಷಣ್ ಸವದಿ

ಬಿಜೆಪಿಯವರು ಉದ್ದೇಶಪೂರ್ವಕವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಎಲ್ಲಾ ವರದಿ ಹೋಗುತ್ತದೆ. ಈ ಸಮಿತಿಗೆ ಬಿಜೆಪಿಯ ಆರ್.ಅಶೋಕ್ ಅವರೇ ಅಧ್ಯಕ್ಷರಾಗಿದ್ದಾರೆ. ನಾಲ್ಕನೇ ಬಾರಿ ಶಾಸಕರಾಗಿರುವ ಸಿ.ಟಿ.ರವಿಗೆ ಇದು ಗೊತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Dinesh statement over Belagavi winter session

ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರವಾಸಕ್ಕೆ ಹೋಗುತ್ತಿದ್ದಾರೆ ಎನ್ನುವ ಆರೋಪ ಸುಳ್ಳು, ಅವರು 10 ದಿನಗಳ ಹಿಂದೆಯೇ ನಿಗದಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಡಿ.17ರ ನಂತರ ವಿದೇಶದಿಂದ ಬಂದ ಬಳಿಕ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಾರೆ, ಈ ಕುರಿತು ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

English summary
KPCC president Dinesh Gundurao says that we have able leaders to face opposition bjp in belagavi session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X