ಬೆಂಗಳೂರಿನಿಂದ ಕಲಬುರಗಿಗೆ ವಿಮಾನ ಹಾರಾಟ: ಟಿಕೆಟ್ ದರ ಎಷ್ಟು?
ಬೆಂಗಳೂರು, ನವೆಂಬರ್ 13: ಬೆಂಗಳೂರಿನಿಂದ ಕಲಬುರಗಿಗೆ ವಿಮಾನ ಹಾರಾಟ ನವೆಂಬರ್ 22ರಿಂದ ಆರಂಭವಾಗಲಿದ್ದು, ಬೆಲೆ ಕೇಳಿದರೆ ಬೆಚ್ಚಿ ಆಶ್ಚರ್ಯವಾಗುತ್ತೆ.
ಬೆಂಗಳೂರಿನಿಂದ ಕಲಬುರಗಿಗೆ ಟಿಕೆಟ್ ದರ 12,099 ರೂ ಹಾಗೂ ಕಲಬುರಗಿಯಿಂದ ಬೆಂಗಳೂರಿಗೆ 13,599-14,099 ರೂ ವರೆಗೆ ಇದೆ. ಸ್ಟಾರ್ ಏರ್ ಸಂಸ್ಥೆಯ ವಿಮಾನ ಬೆಂಗಳೂರಿನಿಂದ ಮಧ್ಯಾಹ್ನ 12.20ಕ್ಕೆ ಹೊರಟು 1.25ಕ್ಕೆ ಕಲಬುರಗಿಯಲ್ಲಿ ಇಳಿಯಲಿದೆ.
ಮತ್ತೆ ಕಲಬುರಗಿಯಿಂದ ಅದೇ ದಿನ ಮಧ್ಯಾಹ್ನ 1.55ಕ್ಕೆ ಹೊರಟು 3ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ.

ಸಂಜಯ್ ಘೊಡಾವತ್ ಸಮೂಹದ ಸ್ಟಾರ್ ಏರ್ ಸಂಸ್ಥೆ ಕಲಬುರಗಿ-ಬೆಂಗಳೂರು ಮಧ್ಯೆ ವಿಮಾನದ ಟಿಕೆಟ್ ಬುಕಿಂಗ್ ಆರಂಭಿಸುತ್ತಿದ್ದಂತೆಯೇ ಸಂಸದ ಉಮೇಶ್ ಜಾಧವ್ , ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ, ಹೈದರಾಬಾದ್ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಅಮರನಾಥ ಪಾಟೀಲ ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ.
ಈ ಬಗ್ಗೆ ಜಾಧವ್ ಅವರು ಮೊದಲ ವಿಮಾನ ಟಿಕೆಟ್ ಪಡೆದು ಟ್ವಿಟ್ಟರ್ನಲ್ಲಿ ಸಂತಸ ಹಂಚಿಕೊಂಡದ್ದಾರೆ. ಈ ವಿಮಾನದ ಸೇವೆಯನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಪ್ರಯಾಣಿಕರು ವಿಮಾನ ಟಿಕೆಟ್ ಬುಕ್ ಮಾಡಿಕೊಳ್ಳಬಹುದು ಎಂದು ಬರೆದುಕೊಂಡಿದ್ದಾರೆ. ನವೆಂಬರ್ 22ರಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಉದ್ಘಾಟನೆಯಾಗಲಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications