BMTC Accident: ಬಿಎಂಟಿಸಿ ಬಸ್‌ಗೆ ವಿಕಲಚೇತನ ಬಲಿ

ಬೆಂಗಳೂರು, ಸೆಪ್ಟೆಂಬರ್‌, 18: ಬೆಂಗಳೂರಿನ ಜೀವನಾಡಿ ಸಾರೊಗೆಯಲ್ಲೊಂದಾದ ಬಿಎಂಟಿಸಿ ಸುದ್ದಿಯಾಗುತ್ತಲೇ ಇದೆ. ಬಿಎಂಸಿಟಿ ಬಸ್‌ಗಳಿಗೆ ಹಲವರು ಬಲಿಯಾದ ಘಟನೆಗಳು ಈಗಾಗಲೇ ಸುಮಾರು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ಅಪಘಾತಕ್ಕೆ ಕಾರಣ ಏನು.?: ಬಿಎಂಟಿಸಿ ಬಸ್ಸೊಂದು ನಗರದ ಯಶವತಪುರದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ವೇಳೆಯೇ ಈ ಅಪಘಾತ ಸಂಭವಿಸಿದೆ. ಇನ್ನು ಘಟನೆಗೆ ಅತಿವೇಗದ ಚಾಲನೆಯೇ ಕಾರಣ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ.

Disabled man death in BMTC bus accident

ಉಪ್ಪಾರಪೇಟೆ ಪೊಲೀಸರು ವಶಕ್ಕೆ: ಇನ್ನು ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಚಾಲಕ ಗೋಪಾಲಯ್ಯ ಎಂಬುವವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೆ, ಈ ಹಿಂದೆಯೂ ಸಹ ಬಿಎಂಟಿಸಿ ಬಸ್‌ಗಳು ಹಲವರನ್ನು ಬಲಿ ಪಡೆದ ಉದಾಹರಣೆಗಳಿವೆ. ಹಳೆಯ ಬಸ್‌ಗಳನ್ನೇ ಓಡಿಸಲು ಕೊಡುತ್ತಿದ್ದಾರೆ. ಇದರಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಮಾಯಕ ಜನರೇ ಬಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ.

ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ: ಟಿಪ್ಪರ್ ಲಾರಿ ಹರಿದು ಕೇರಳ ಮೂಲದ ಮೂವರು ದುರ್ಮರಣ ಹೊಂದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸುಲ್ತಾನ್ ಬತ್ತೇರಿ ತಾಲೂಕಿನ ಮಲವಾಯಿಲ್ ಗ್ರಾಮದವರಾದ ಧನೇಶ್‍ಮೋಹನ್(29) ಪತ್ನಿ ಅಂಜು(24) ಮತ್ತು ಮಗು ವಿಚ್ಚು(2) ಮೃತರು.

ಕೇರಳ ಮೂಲದ ಪತಿ, ಪತ್ನಿ ಮತ್ತು ಮಗ ಮೂವರು ಒಂದೇ ಬೈಕ್‌ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೂತನೂರು ಗುಡ್ಡದಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಕೆಎ-11-ಬಿ-8497 ನೋಂದಣಿಯ ಟಿಪ್ಪರ್ ಲಾರಿಯು ಮುಂಬದಿ ಹೋಗುತ್ತಿದ್ದ ಕೇರಳ ಮೂಲದ ಬೈಕ್‌ಗೆ ಗುದ್ದಿದ್ದಾನೆ. ಬಳಿಕ ಬೈಕ್ ಸವಾರನ ಮೇಲೆ ಲಾರಿ ಹರಿದು ದೇಹ ರಸ್ತೆಯಲ್ಲೇ ಬಿದ್ದಿದ್ದು, ಇನ್ನಿಬ್ಬರು ಲಾರಿ ಅಡಿಯಲ್ಲಿ ಬೈಕ್ ಸಮೇತ ಸಿಲುಕಿಕೊಂಡು 300 ಮೀಟರ್‌ನಷ್ಟು ದೂರಕ್ಕೆ ಎಳೆದುಕೊಂಡು ಬಂದಿದೆ.

ಇನ್ನು ಚಾಲಕ ಟಿಪ್ಪರ್ ಅನ್ನು ಕುಡಿದ ಮತ್ತಿನಲ್ಲಿ ಚಾಲನೆ ಮಾಡಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಭಾರ ಹೊತ್ತ ವಾಹನ ಸಾಗುವಾಗ ಅಜಾರೂಕ ಚಾಲನೆ ಮಾಡಿದ್ದಾನೆ. ಬೈಕ್‍ಗೆ ಡಿಕ್ಕಿಯಾದ ನಂತರವೂ ಟಿಪ್ಪರ್ ಅನ್ನು ನಿಯಂತ್ರಿಸದ ಕಾರಣ 300 ಮೀಟರ್ ದೂರದವರೆಗೆ ಮೃತದೇಹಗಳನ್ನು ಟಿಪ್ಪರ್ ಎಳೆದೋಯ್ದಿದೆ ಎಂದು ಪ್ರತ್ಯೇಕ್ಷದರ್ಶಿಗಳು ಆಕ್ರೋಶ ಹೊರಹಾಕಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿ ಟಿಪ್ಪರ್ ಮತ್ತು ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಮಾಹಿತಿ ನೀಡಿದ ಹಿನ್ನೆಲೆ ಮೃತರ ವಾರಸುದಾರರು ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹಗಳನ್ನು ಅವರ ವಶಕ್ಕೆ ನೀಡಲಾಗುತ್ತದೆ. ಘಟನೆ ಸಂಬಂಧ ಕೇಸು ದಾಖಲಿಸಿಕೊಳ್ಳಲಾಗಿದೆ ಎಂದು ಗುಂಡ್ಲುಪೇಟೆ ಪೊಲೀಸರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+