‘ಕುಷ್ಠರೋಗ’ ಪತ್ತೆಹಚ್ಚುವ ಬಗ್ಗೆ ಜಿಲ್ಲಾಡಳಿತದ ಮಹತ್ವದ ಮಾಹಿತಿ!
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇದೇ ತಿಂಗಳು 27ರ ಬುಧವಾರ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ಸಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಅಧಿಕಾರಿಗಳಿಗೆ ಇಂದು ಸೂಚನೆ ನೀಡಿದ್ರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಅಧಿಕಾರಿಗಳಿಗೆ ಈ ರೀತಿ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು 'ಕುಷ್ಠರೋಗ ಲೆಪ್ರೆ ಎಂಬ ಮೈಕ್ರೊ ಬ್ಯಾಕ್ಟೀರಿಯ ಮೂಲಕ ಹರಡುತ್ತೆ. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದಡಿ ಕುಷ್ಠರೋಗ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಹಾಗೇ, ಡಿಸೆಂಬರ್ 27 ರಿಂದ 2024 ರ ಜನವರಿ 11 ರವರೆಗೂ ಕುಷ್ಠರೋಗದ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ಜಿಲ್ಲೆಯಾದ್ಯಂತ ನಡೆಯಲಿದೆ' ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಜನರಲ್ಲಿ ಕುಷ್ಠರೋಗದ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ ಸಂಬಂಧಪಟ್ಟ ವಿವಿಧ ಇಲಾಖೆ ಜೊತೆಯಲ್ಲಿ ಸಮನ್ವಯ ಸಾಧಿಸಿ ಅಭಿಯಾನದ ಯಶಸ್ಸಿಗೆ ಸಹಕರಿಸಬೇಕು ಅಂತಾ ಅಧಿಕಾರಿಗಳಿಗೆ ತಿಳಿಸಿದರು.
ಹೇಗೆ ನಡೆಯಲಿದೆ ಅಭಿಯಾನ?
ಅಭಿಯಾನದ ಅಂಗವಾಗಿ ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಆಶಾ ಕಾರ್ಯಕರ್ತೆಯರು & ಒಬ್ಬರು ಪುರುಷ ಸ್ವಯಂ ಸೇವಕರು ಗ್ರಾಮದ ಪ್ರತಿ ಮನೆ ಮನೆಗೂ ಭೇಟಿ ನೀಡಿ ಕುಷ್ಠರೋಗ ಪತ್ತೆ ಹಚ್ಚುವ ಬಗ್ಗೆ ಮಾಹಿತಿ ನೀಡಬೇಕು.
ಪ್ರತಿಯೊಬ್ಬರ ತಪಾಸಣೆ ಮಾಡಿ, ಕುಷ್ಠ ರೋಗದ ಪ್ರಾರಂಭಿಕ ಚಿಹ್ನೆ ಇರುವುದನ್ನು ಖಚಿತ ಪಡಿಸಿಕೊಂಡು. ವ್ಯಕ್ತಿ ಚರ್ಮದಲ್ಲಿ ಯಾವುದೇ ಬಗೆ ಮಚ್ಚೆಗಳು ಕಂಡು ಬಂದರೆ ಅಂತಹವರಿಗೆ, ಸಂಬಂಧಿಸಿದ ವೈದ್ಯಾಧಿಕಾರಿ ಮೂಲಕ ಚಿಕಿತ್ಸೆ ಕೊಡಿಸಲಾಗುವುದು ಅಂತಾ ಮಾಹಿತಿ ನೀಡಿದರು.
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
ಕುಷ್ಠ ರೋಗದ ಬಗ್ಗೆ ಸಾಮಾನ್ಯ ಜನರಿಗೆ ಅರಿವು ಮೂಡಿಸಬೇಕು, ಅಭಿಯಾನದ ಅವಧಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಗೆ ಬರುವ ಎಲ್ಲ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ರೋಗದ ಬಗ್ಗೆ ತಿಳಿ ಹೇಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಜಿಲ್ಲಾಧಿಕಾರಿ. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು.
ಈ ವೇಳೆ ಜಿಲ್ಲಾಧಿಕಾರಿ ಅವರು ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನದ ಭಿತ್ತಿ ಪತ್ರ ಬಿಡುಗಡೆಗೊಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರ ಮೇಟಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ನಾಗರಾಜ್ & ತಾಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.












Click it and Unblock the Notifications