ವಾಹನ ಮಾಲೀಕರೆ ‘ನಂಬರ್ ಪ್ಲೇಟ್’ ಬಗ್ಗೆ ತಪ್ಪದೆ ಈ ಸುದ್ದಿ ಓದಿ!

ಬೆಂಗಳೂರಿನ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರಾರಂಭಿಸಲಾಗುವ KA 05/NK ಮುಂಗಡ ಶ್ರೇಣಿ ಆರಂಭಿಸಿ, ನೋಂದಣಿ ಸಂಖ್ಯೆಯ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ. ಸಾರಿಗೆ ಇಲಾಖೆ ವತಿಯಿಂದ ಮೋಟಾರು ವಾಹನ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯಲ್ಲಿ ನಡೆಯಲಿದೆ. ಡಿಸೆಂಬರ್ 21 ರಂದು ಶಾಂತಿನಗರ ಕೆ.ಎಚ್. ರಸ್ತೆಯಲ್ಲಿರುವ ಟಿಟಿಎಂಸಿ ಕಟ್ಟಡದ 1ನೇ ಮಹಡಿಯ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಆಯೋಜಿಸಲಾಗಿದೆ.

ನೋಂದಾಣಿ ಸಂಖ್ಯೆ 1, 123, 1234, 10, 11, 111, 1111, 100, 1000, 1001, 22, 27, 222, 234, 2222, 2727, 33, 36, 63,333, 3333, 3636, 45, 444, 4444, 4455, 4545, 5, 55, 555, 5454, 5555, 6, 63, 666, 6666, 6055, 6363, 7, 72, 77, 777, 786, 7272, 7777, 8, 88, 888, 8055, 8118, 8181, 8888, 9, 90, 99, 900, 909, 999, 9000, 9009, 9090 ಮತ್ತು 9999 & ಉಳಿದ ಸಂಖ್ಯೆಗಳಲ್ಲಿ ಯಾವುದೇ ಇಚ್ಛಿತ ನೋಂದಣಿ ಸಂಖ್ಯೆ ಹಂಚಿಕೆ ಮಾಡಲು ಅವಕಾಶ ಇರುತ್ತದೆ ಎನ್ನಲಾಗಿದೆ.

 Discover The Number Plate Auction Date In Bengaluru

ಬಹಿರಂಗ ಹರಾಜು ಮೂಲಕ ಹಂಚಿಕೆ

ಲಘು ಮೋಟಾರು ವಾಹನ (ಸಾರಿಗೇತರ ವರ್ಗದ ಕಾರು ಜೀಪು ಇತ್ಯಾದಿ ಸ್ವಂತ ಉಪಯೋಗಕ್ಕೆ ಬಳಸುವ ವಾಹನ) ರಾಜ್ಯದ ಯಾವುದೇ ಪ್ರಾಧಿಕಾರ ಕಚೇರಿಯಲ್ಲಿ ಹೊಸದಾಗಿ ಪ್ರಾರಂಭಿಸುವ ಮುಂಗಡ ಶ್ರೇಣಿಗಳಲ್ಲಿ ಅರ್ಜಿದಾರರು ಕೋರುವ ಆಯ್ಕೆ ನೋಂದಣಿ ಸಂಖ್ಯೆಗಳನ್ನ, ಬಹಿರಂಗ ಹರಾಜು ಕರೆಯುವ ಮೂಲಕ ಹಂಚಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಇನ್ನು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯುಕ್ತರು, ಸಾರಿಗೆ & ರಸ್ತೆ ಸುರಕ್ಷತೆ ರವರ ಕಚೇರಿ, 'ಎ' ಬ್ಲಾಕ್, 1 ನೇ ಮಹಡಿ, ಟಿಟಿಎಂಸಿ ಕಟ್ಟಡ, ಬಿಎಂಟಿಸಿ ಸಂಕೀರ್ಣ, ಶಾಂತಿನಗರ, ಬೆಂಗಳೂರು ಇಲ್ಲಿ ಭೇಟಿ ನೀಡಬಹುದು ಅಂತ ಬೆಂಗಳೂರು ದಕ್ಷಿಣ ಅಪರ ಸಾರಿಗೆ ಆಯುಕ್ತರು ಮಾಹಿತಿಯನ್ನ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+