ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಕೊಡುಗೆ ಕೊಟ್ಟ ಸಿಎಂ ಸಿದ್ದರಾಮಯ್ಯ!

ಸಿಎಂ ಸಿದ್ದರಾಮಯ್ಯ ಇಂದು ಮತ್ತೊಮ್ಮೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಆರ್ಥಿಕ ಇತಿಹಾಸದಲ್ಲಿ ಹೊಸ ದಾಖಲೆಯನ್ನ ಬರೆದಿದ್ದಾರೆ. ತಮ್ಮ ಬಜೆಟ್‌ನಲ್ಲಿ ಬರೋಬ್ಬರಿ 44 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಾಗಿ ಇಟ್ಟಿರುವ ಸಿಎಂ ಸಿದ್ದರಾಮಯ್ಯ, ಕಾಲೇಜು ವಿದ್ಯಾರ್ಥಿಗಳಿಗೆ ಈಗ ಬಂಪರ್ ಆಫರ್ ಕೊಟ್ಟಿದ್ದಾರೆ. ಆ ಬಗ್ಗೆ ಮಾಹಿತಿಗೆ ಮುಂದೆ ಓದಿ.

ಭಾರತದಲ್ಲಿ ಕರ್ನಾಟಕ ರಾಜ್ಯ ಮಾದರಿಯಾಗಿ ಬೆಳೆದಿದೆ. ಕನ್ನಡಿಗರು ಓದಿನಲ್ಲಿ, ಆರ್ಥಿಕತೆಯ ಶಿಸ್ತಿನಲ್ಲಿ ಸದಾ ಮುಂದಿದ್ದಾರೆ. ಹೀಗಿದ್ದಾಗ ಸಿಎಂ ಸಿದ್ದರಾಮಯ್ಯ ಅವರು 15 ಬಾರಿ ಕರ್ನಾಟಕ ರಾಜ್ಯದ ಬಜೆಟ್ ಮಂಡಿಸಿ ಸೈ ಎನಿಸಿಕೊಂಡಿದ್ದಾರೆ. ಈಗಲೂ ಅಷ್ಟೇ ಮತ್ತೊಮ್ಮೆ ಕನ್ನಡಿಗರಿಗೆ ಬೇಕಾಗಿರುವ ಬಜೆಟ್ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೇ ಸಮಯದಲ್ಲಿ ಈ ಸಾಲಿನ ಅಂದರೆ 2024-25ನೇ ಸಾಲಿನ ಬಜೆಟ್‌ನಲ್ಲಿ ಕಾಲೇಜು ವಿದ್ಯಾರ್ಥಿಳಿಗೆ ಏನೆಲ್ಲಾ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯೋಣ ಬನ್ನಿ.

Discover What CM Siddaramaiah Gives To Karnataka College Students In Budget 2024

ಸರ್ಕಾರಿ ಕಾಲೇಜುಗಳು ಲಕ ಲಕ?

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಮೂಲ ಸೌಕರ್ಯ ಸಮಸ್ಯೆ ಕಾಡುತ್ತಿದೆ. ಇದನ್ನು ಬಗೆಹರಿಸಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಅನೇಕ ಯೋಜನೆ ಘೋಷಿಸಿದ್ದಾರೆ. ಇದರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲ ಆಗುವಂತಹ ಯೋಜನೆಗಳ ಘೋಷಣೆ ಮಾಡಿದ್ದಾರೆ. ಪ್ರಮುಖವಾಗಿ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಗತ್ಯ ಮೂಲ ಸೌಲಭ್ಯಗಳ ಕಾಮಗಾರಿಗಳಿಗೆ 250 ಕೋಟಿ ರೂಪಾಯಿ ಸೇರಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜು ಕಾಮಗಾರಿಗೆ 120 ಕೋಟಿ ರೂ. ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಾಲೇಜು ಶಿಕ್ಷಕರಿಗೆ ಸಿಗುತ್ತಿದೆ ಉದ್ಯೋಗ

ಇದರ ಜೊತೆ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಖಾಲಿ ಇರುವ ಶಿಕ್ಷಕ ಹುದ್ದೆ ಭರ್ತಿಗೆ ಸಿಎಂ ಸಿದ್ದರಾಮಯ್ಯ ಯೋಜನೆ ಘೋಷಣೆ ಮಾಡಿದ್ದಾರೆ. ಖಾಲಿ ಇರುವಂತಹ ಶಿಕ್ಷಕರ ಹುದ್ದೆಗಳನ್ನು ಅಗತ್ಯತೆ ಅನುಗುಣವಾಗಿ ತುಂಬಲಾಗುವುದು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಕೂಡ ಕ್ರಮವಹಿಸುತ್ತೇವೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಮೂಲಕ ರಾಜ್ಯ ಬಜೆಟ್ ಕಾಲೇಜು ವಿದ್ಯಾರ್ಥಿಗಳಿಗೆ, ಅದರಲ್ಲೂ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಹೊಸದಾದ ಹುಮ್ಮಸ್ಸು ತಂದಿದೆ. ಸಿಎಂ ಸಿದ್ದರಾಮಯ್ಯ ಅವರ ನೂತನ ಯೋಜನೆಗಳು ಮತ್ತಷ್ಟು ಹುರುಪು ನೀಡುವ ನಿರೀಕ್ಷೆ ಇದೆ.

Discover What CM Siddaramaiah Gives To Karnataka College Students In Budget 2024

25 ಕೋಟಿ ರೂಪಾಯಿ ಗಿಫ್ಟ್

ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಉಚಿತ ವಿದ್ಯುತ್ & ನೀರಿನ ಸೌಲಭ್ಯ ಒದಗಿಸೋಕೆ ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಇದಕ್ಕಾಗಿ ರಾಜ್ಯದ 46,829 ಸರ್ಕಾರಿ ಶಾಲೆ & 1,234 ಪದವಿ ಪೂರ್ವ ಕಾಲೇಜುಗಳಿಗೆ ಹೊಸ ವ್ಯವಸ್ಥೆ ಕಲ್ಪಿಸಲು ಸುಮಾರು 25 ಕೋಟಿ ರೂಪಾಯಿ ವೆಚ್ಚ ಮಾಡಲು ಸಿದ್ದರಾಮಯ್ಯ ಅವರ ಸರ್ಕಾರ ಮುಂದಾಗಿದೆ. ಮತ್ತು ಈ ಕಾಮಗಾರಿಗಳಿಗೆ ಹೈಟೆಕ್ ಟಚ್ ನೀಡಲು ಕೂಡ ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಾಲೇಜುಗಳಿಗೆ ಹೊಸ ರೂಪ?

ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯ ಶಿಕ್ಷಕರು / ಉಪನ್ಯಾಸಕರುಗಳ ನೇಮಕ ಮಾಡುವ ಪ್ರಕ್ರಿಯೆಯನ್ನೂ ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ. ಇದರ ಜೊತೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ & ಸಹಬಾಳ್ವೆ ವಿದ್ಯಾ-ಕೇಂದ್ರಗಳಾಗಿ ರೂಪಿಸಲು ಮನುಜರು ಹೆಸರಿನಲ್ಲಿ ಶಾಲೆ & ಕಾಲೇಜು ವಾರಕ್ಕೆ 2 ಗಂಟೆ ವಿಚಾರ-ವಿಮರ್ಶೆ & ಸಂವಾದ ಚಟುವಟಿಕೆಗಳನ್ನ ಒಳಗೊಂಡ ತರಗತಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ & ಪದವಿ ಪೂರ್ವ ಕಾಲೇಜುಗಳ ಆರಂಭಕ್ಕೂ ಯೋಜನೆ ರೂಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+