ಕನ್ನಡ ಶಾಲೆಗಳಿಗೆ ಬಂಪರ್, ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಲಾಟರಿ!

ಸಿಎಂ ಸಿದ್ದರಾಮಯ್ಯ ಅವರು ಇಂದು ಹೊಸ ಇತಿಹಾಸ ನಿರ್ಮಾಣ ಮಾಡಿದ್ದಾರೆ. 15ನೇ ಬಾರಿ ಬಜೆಟ್ ಮಂಡನೆ ಮಾಡಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಅದರಲ್ಲೂ ರಾಜ್ಯ ಶಿಕ್ಷಣ ಕ್ಷೇತ್ರ ಅಂದ್ರೆ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಲಾಟರಿಯೇ ಸಿಕ್ಕಿದೆ. ಹಾಗಾದರೆ ಈ ಬಾರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಬಜೆಟ್ ಕೊಡುಗೆಗಳು ಯಾವುವು? ಈ ಬಾರಿ ಕನ್ನಡದ ಮಕ್ಕಳಿಗೆ ಏನೆಲ್ಲಾ ಸೌಲಭ್ಯ ಸಿಗುತ್ತಿದೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಕರ್ನಾಟಕದ ವಿತ್ತ ಮಂತ್ರಿಗಳು ಅಂದ್ರೆ ಹಣಕಾಸು ಸಚಿವರ ಪೈಕಿ ಸಿದ್ದರಾಮಯ್ಯ ಅವರು ಭಾರಿ ದೊಡ್ಡ ಹೆಸರನ್ನು ಮಾಡಿದ್ದರು. ಸಿದ್ದರಾಮಯ್ಯ ಅವರ ಆಯವ್ಯಯ ಲೆಕ್ಕದ ಬಗ್ಗೆ ಕರ್ನಾಟಕ ಹೆಮ್ಮೆ ಪಡುತ್ತದೆ. ಅಚ್ಚುಕಟ್ಟಾಗಿ ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ಮುಂದೆ ಕೊಂಡೊಯ್ಯುವ ಶಕ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೆ ಎಂದು ವಿರೋಧ ಪಕ್ಷಗಳ ನಾಯಕರೂ ಹೇಳುತ್ತಾರೆ. ಇದೀಗ ಇದೇ ಸಿದ್ದರಾಮಯ್ಯ ಅವರು, 2024-25ನೇ ಸಾಲಿನ ಬಜೆಟ್‌ನಲ್ಲಿ ಕರ್ನಾಟಕದ ಶಿಕ್ಷಣ ಕ್ಷೇತ್ರಕ್ಕೆ ಬಂಪರ್ ಕೊಟ್ಟಿದ್ದಾರೆ. ಆ ಬಗ್ಗೆ ಇಂಚಿಂಚು ಮಾಹಿತಿ ಇಲ್ಲಿದೆ ಮುಂದೆ ಓದಿ.

Discover What CM Siddaramaiah Gives To Karnataka Education Department In Budget 2024

ಸರ್ಕಾರಿ ಇಂಗ್ಲಿಷ್ ಮೀಡಿಯಂ ಶಾಲೆ!

ಸಿದ್ದರಾಮಯ್ಯ ಅವರು ಈಗ ತಮ್ಮ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳಿಗೆ ಬಂಪರ್ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಲ್ಯಾಬ್ ಸೇರಿ ಕಂಪ್ಯೂಟರ್ ಲ್ಯಾಬ್, ಇಂಟರ್‌ನೆಟ್ ಸೌಲಭ್ಯ ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂಪಾಯಿ ಮೀಸಲು ಇಡಲಿದೆ ರಾಜ್ಯ ಸರ್ಕಾರ. ಹಾಗೇ 2,000 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ದ್ವಿಭಾಷಾ ಮಾಧ್ಯಮ ಅಂದ್ರೆ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮ ಶಾಲೆಯಾಗಿ ಪರಿವರ್ತನೆಯನ್ನ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ಬಂಪರ್!

ಈ ಹಿನ್ನೆಲೆ, 3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ, ಸಾಮರ್ಥ್ಯ ಹೆಚ್ಚಿಸಲು J-PAL ಸಂಸ್ಥೆಯ ಸಹಯೋಗದಲ್ಲಿ ಗಣಿತ & ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಅಂತಾ ಸಿಎಂ ತಿಳಿಸಿದ್ದಾರೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Discover What CM Siddaramaiah Gives To Karnataka Education Department In Budget 2024

NEET/CET ತರಬೇತಿಗೆ 10 ಕೋಟಿ

ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂಪಾಯಿಯ ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆ ಪ್ರಾರಂಭಿಸಲಾಗುವುದು. ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ, ವಿಜ್ಞಾನದ ಪ್ರಯೋಗಾಲಯ ಉನ್ನತೀಕರಿಸಲು ತಲಾ 10 ಲಕ್ಷ ರೂಪಾಯಿ ಅನುದಾನ ಒದಗಿಸಲಾಗುವುದೆಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಹಾಗೇ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ಸುಮಾರು 20,000 ವಿದ್ಯಾರ್ಥಿ ಬಳಗಕ್ಕೆ ಗುಡ್‌ ನ್ಯೂಸ್ ಸಿಕ್ಕಿದೆ. ಅವರಿಗೆ NEET/JEE/CET ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲು 10 ಕೋಟಿ ಘೋಷಿಸಲಾಗಿದೆ.

ಶಾಲೆ & ಕಾಲೇಜು ಅಭಿವೃದ್ಧಿಗೆ 850 ಕೋಟಿ

ಕರ್ನಾಟಕದ ಸರ್ಕಾರಿ ಶಾಲೆಗಳು & ಪದವಿ ಪೂರ್ವ ಕಾಲೇಜುಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. 2023 & 24ನೇ ಸಾಲಿನಲ್ಲಿ 600 ಕೋಟಿ ರೂಪಾಯಿ ವೆಚ್ಚ ಮಾಡಿದ್ದು, 2024-25ನೇ ಸಾಲಿನಲ್ಲಿ ಶಾಲಾ & ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು 850 ಕೋಟಿ ರೂಪಾಯಿ ವೆಚ್ಚ ಮಾಡಿ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ಕನ್ನಡ ಶಾಲೆಗಳ ಅಭಿವೃದ್ಧಿಗೆ ಕ್ರಮ

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ & ಅಗತ್ಯ ಮೂಲ ಸೌಕರ್ಯ ಒದಗಿಸಲು ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆ ಮಕ್ಕಳು ಕೂಡ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿ ಆಗಬೇಕೆಂಬ ಆಶಯದ ಜೊತೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದು. ಇದಕ್ಕಾಗಿ ಪೂರ್ವ ಪ್ರಾಥಮಿಕ ಹಂತದಿಂದಲು ಪದವಿ ಪೂರ್ವ ತರಗತಿ ತನಕ ಶಿಕ್ಷಣವನ್ನ ಒಂದೇ ಸೂರಿನ ಅಡಿಯಲ್ಲಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನ ಸಿ.ಎಸ್.ಆರ್. ಅನುದಾನ ಅಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ ಸಿಎಂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+