Nikhil Kumaraswamy: ನಿಖಿಲ್ ಕುಮಾರಸ್ವಾಮಿಗೆ ಆರಂಭಿಕ ಆಘಾತ, ಸಿಪಿ ಯೋಗೇಶ್ವರ್ ಮನ್ನಡೆ!
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಇಡೀ ರಾಜ್ಯದ ಗಮನ ಚನ್ನಪಟ್ಟಣ ಕ್ಷೇತ್ರದ ಮೇಲೆ ನೆಟ್ಟಿದೆ. ಅದರಲ್ಲೂ ಈ ಬಾರಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವು ಗ್ಯಾರಂಟಿ ಎಂಬ ಮಾತು ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಭರ್ಜರಿ ಪ್ರಚಾರ ಕೂಡ ನಡೆಸಲಾಗಿತ್ತು. ಆದರೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶದ ಆರಂಭಿಕ ಟ್ರೆಂಡ್ ನಿಖಿಲ್ ಕುಮಾರಸ್ವಾಮಿಗೆ ಭಾರಿ ದೊಡ್ಡ ಆಘಾತ ನೀಡಿದೆ!
ಹೌದು, ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದು ಈ ಬಾರಿ ವಿಧಾನಸಭೆಗೆ ಭರ್ಜರಿ ಎಂಟ್ರಿ ಕೊಡುವುದು ಗ್ಯಾರಂಟಿ ಎನ್ನಲಾಗಿತ್ತು. ಇದೇ ಕಾರಣ ಭರ್ಜರಿ ಕ್ಯಾಂಪೇನ್ ಕೂಡ ನಡೆಸಲಾಗಿತ್ತು. ಆದ್ರೆ ಈಗ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಮತ ಎಣಿಕೆ ಕಾರ್ಯ ಆರಂಭವಾದ ನಂತರ ಪರಿಸ್ಥಿತಿ ಬದಲಾಗಿ ಹೋಗುತ್ತಿದೆ. ಅದರಲ್ಲೂ ನಿಖಿಲ್ ಕುಮಾರಸ್ವಾಮಿ ಆರಂಭಿಕ ಹಂತದಲ್ಲೇ ಹಿನ್ನಡೆ ಅನುಭವಿಸುವ ಮೂಲಕ ಸಿಪಿ ಯೋಗೇಶ್ವರ್....

ಸಿಪಿ ಯೋಗೇಶ್ವರ್ ಗೆಲುವಿನ ಕಡೆಗೆ?
ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಯ, ಆರಂಭಿಕ ಹಂತದಲ್ಲೇ ನಿಖಿಲ್‌ಗೆ ಹಿನ್ನಡೆ ಕಂಡುಬಂತು. ಈ ಸಮಯದಲ್ಲಿ ಸಿಪಿ ಯೋಗೇಶ್ವರ್ ಅವರು ಮುನ್ನಡೆ ಪಡೆದರು. ಹೀಗೆ ಫಲಿತಾಂಶಕ್ಕೆ ಕಾದು ಕೂತಿದ್ದ ನಿಖಿಲ್ ಕುಮಾರಸ್ವಾಮಿ & ಅವರ ಬೆಂಬಲಿಗರಿಗೆ ಇದು ಆಘಾತ ನೀಡಿತ್ತು. ಹೀಗಿದ್ದರೂ, ಆರಂಭಿಕ ಟ್ರೆಂಡ್ ಮಾತ್ರ ಎಂಬ ನೆಮ್ಮದಿ ಇತ್ತು. ಹಾಗಿದ್ರೆ ಈಗ ಏನಾಗಿದೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದಲ್ಲಿ? ಮುಂದೆ ಓದಿ.
ನಿಖಿಲ್ ಕುಮಾರಸ್ವಾಮಿ ಕಂಬ್ಯಾಕ್!
ಅಂದಹಾಗೆ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಯ ಆರಂಭಿಕ ಹಂತದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಹಿನ್ನಡೆ ಕಂಡು ಬಂದರೂ, ನಂತರದಲ್ಲಿ ಪರಿಸ್ಥಿತಿ ಈಗ ಬದಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ರಿಸಲ್ಟ್ ಹಾವು-ಏಣಿ ಆಟಕ್ಕೆ ಸಾಕ್ಷಿಯು ಆಗುತ್ತಿದೆ.
ಚನ್ನಪಟ್ಟಣದಲ್ಲಿ ಗೆಲುವು ಗ್ಯಾರಂಟಿ?
2019ರ ಮಂಡ್ಯ ಲೋಕಸಭಾ ಚುನಾವಣೆ & 2023 ರ ರಾಮನಗರ ವಿಧಾನಸಭೆ ಚುನಾವಣೆ ಸೋಲು ನಿಖಿಲ್ ಕುಮಾರಸ್ವಾಮಿ ಅವರ ಜೀವನದಲ್ಲಿ ದೊಡ್ಡ ಪಾಠ ಕಲಿಸಿವೆ. ಇದೇ ಕಾರಣಕ್ಕೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದ ನಿಖಿಲ್ ಅವರಿಗೆ ಗೆಲುವು ಬಹುತೇಕ ಗ್ಯಾರಂಟಿ ಆಗಿದೆ.
ಸ್ವತಃ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ನಿಖಿಲ್ ಅವರ ಪರ ಮತಯಾಚನೆ ಮಾಡಿದ್ದರು. ಇಷ್ಟೆಲ್ಲಾ ಪ್ರಯತ್ನದ ನಡುವೆ ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸುತ್ತಾರೆ ಎನ್ನಲಾಗುತ್ತಿದೆ. ಆದರೆ ಆರಂಭಿಕ ಹಂತದಲ್ಲಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡು, ನಿಖಿಲ್ ಅವರಿಗೆ ಶಾಕ್ ಕೊಟ್ಟಿದ್ದರು. ಆದ್ರೆ ಇದೀಗ ಮತ್ತೆ ನಿಖಿಲ್ ಕುಮಾರಸ್ವಾಮಿ ಅವರು ಕಂಬ್ಯಾಕ್ ಮಾಡಿದ್ದಾರೆ.












Click it and Unblock the Notifications